ADGP ಹು-ಧಾ ಪೊಲೀಸ್ ಆಯುಕ್ತಾಲಯಕ್ಕೆ ಎಡಿಜಿಪಿ ಭೇಟಿ

ಹು-ಧಾ ಪೊಲೀಸ್ ಆಯುಕ್ತಾಲಯ
ಹು-ಧಾ ಪೊಲೀಸ್ ಆಯುಕ್ತಾಲಯ
Published on
ಹುಬ್ಬಳ್ಳಿ: ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ (ADGP ) ಎಡಿಜಿಪಿ ಆರ್.ಹಿತೇಂದ್ರ ಅವರು ನವನಗರದ ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತರ ಕಚೇರಿಗೆ ಗುರುವಾರ ಭೇಟಿ ನೀಡಿ, ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಕಾನೂನು ಸುವ್ಯವಸ್ಥೆ ಕುರಿತು ಚರ್ಚೆ ನಡೆಸಿ, ಸೂಕ್ತ ಸಲಹೆ, ಸೂಚನೆಗಳನ್ನು ನೀಡಿದರು. ನಂತರ ಹಳೇ ಹುಬ್ಬಳ್ಳಿ ಠಾಣೆ, ವಿದ್ಯಾನಗರ ಠಾಣೆ ಹಾಗೂ ಗ್ರಾಮೀಣ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ ಕಡತಗಳನ್ನು ಪರಿಶೀಲಿಸಿದರು. ಅಪರಾಧ ಚಟುವಟಿಕೆ ತಡೆಗಟ್ಟಲು ಹಾಗೂ ಕಾನೂನು ಸುವ್ಯವಸ್ಥೆ ಹತೋಟಿಗೆ ತರಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಚಿಸಿದರು ಎಂದು ತಿಳಿದುಬಂದಿದೆ. ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಡಿಸಿಪಿಗಳಾದ ಶ್ರುತಿ ಎನ್.ಎಸ್., ರವೀಶ್ ಸಿ.ಆರ್., ಎಸ್ಪಿ ಗುಂಜನ್ ಆರ್ಯ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net