ಹುಬ್ಬಳ್ಳಿ: ಕೆಎಲ್‌ಇ ಸಂಸ್ಥಾಪನಾ ದಿನ ನಿಮಿತ್ತ ಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಕೆಎಲ್ಇ ಕೋ-ಆಪ್‌ರೇಟಿವ್ ಆಸ್ಪತ್ರೆ ಸಹಯೋಗದಲ್ಲಿ ಇಲ್ಲಿಯ ಕೆಎಲ್ಇ ಹುಬ್ಬಳ್ಳಿ ಕೋ-ಆಪ್‌ರೇಟಿವ್ ಆಸ್ಪತ್ರೆಯಲ್ಲಿ ಶನಿವಾರ ಶಾಲಾ ಮಕ್ಕಳಿಗೆ ಉಚಿತ ಆರೋಗ್ಯ health ಶಿಬಿರ ಏರ್ಪಡಿಸಲಾಗಿತ್ತು.
ಆಸ್ಪತ್ರೆ ನಿರ್ದೇಶಕ ಡಾ. ಎಂ.ಜಿ. ಹಿರೇಮಠ ಉದ್ಘಾಟಿಸಿ ಮಾತನಾಡಿ, ರೋಗ ಲಕ್ಷಣ ಕಾಣುವ ಮುನ್ನವೇ ಮಕ್ಕಳಿಗೆ ಆರೋಗ್ಯ ತಪಾಸಣೆ ಮಾಡಿಸಬೇಕು. ವೈದ್ಯರು ನೀಡುವ ಸಲಹೆ ಪಾಲಿಸಬೇಕು ಎಂದರು.
ಚಿಕ್ಕಮಕ್ಕಳ ವಿಭಾಗ, ಕಣ್ಣಿನ ವಿಭಾಗ, ಚರ್ಮರೋಗ ವಿಭಾಗ, ಕಿವಿ, ಮೂಗು, ಗಂಟಲು ವಿಭಾಗ, ದಂತ ವಿಭಾಗ ಸೇರಿ ಹಲವು ವಿಭಾಗದ ತಜ್ಞರಿಂದ ಉಚಿತ ಚಿಕಿತ್ಸೆ ಹಾಗೂ ಔಷಧ ನೀಡಲಾಯಿತು.
ಶಿಬಿರದಲ್ಲಿ 200ಕ್ಕಿಂತಲೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.