42 ಬ್ಯಾಟರಿ ಚಾಲಿತ (Alimco) ತ್ರಿಚಕ್ರ ವಾಹನ ವಿತರಣೆ

ಹುಬ್ಬಳ್ಳಿಯಲ್ಲಿ ಭಾನುವಾರ (Alimco) ಧಾರವಾಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಅಂಗವಿಕಲರಿಗೆ ಬ್ಯಾಟರಿ ಚಾಲಿತ ತ್ರಿಚಕ್ರ ವಾಹನಗಳು ಹಾಗೂ ಸಲಕರಣೆಗಳನ್ನು ವಿತರಿಸಲಾಯಿತು. ಮಾ. ನಾಗರಾಜ, ಮಹೇಶ ಟೆಂಗಿನಕಾಯಿ, ಲಿಂಗರಾಜ ಪಾಟೀಲ, ದುರ್ಗಮ್ಮ ಬಿಜವಾಡ ಇದ್ದರು.
ಹುಬ್ಬಳ್ಳಿಯಲ್ಲಿ ಭಾನುವಾರ (Alimco) ಧಾರವಾಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಅಂಗವಿಕಲರಿಗೆ ಬ್ಯಾಟರಿ ಚಾಲಿತ ತ್ರಿಚಕ್ರ ವಾಹನಗಳು ಹಾಗೂ ಸಲಕರಣೆಗಳನ್ನು ವಿತರಿಸಲಾಯಿತು. ಮಾ. ನಾಗರಾಜ, ಮಹೇಶ ಟೆಂಗಿನಕಾಯಿ, ಲಿಂಗರಾಜ ಪಾಟೀಲ, ದುರ್ಗಮ್ಮ ಬಿಜವಾಡ ಇದ್ದರು.
Published on
ಹುಬ್ಬಳ್ಳಿ: ಪ್ರಧಾನ ಮಂತ್ರಿ ದಿವ್ಯಾಶಾ-ವಯೋಶ್ರೀ ಕೇಂದ್ರ (ಪಿಎಂಡಿ-ವಿಕೆ)ದ ಆಶ್ರಯದಲ್ಲಿ ಕೇಂದ್ರ ಸರ್ಕಾರದ ಅಧೀನದ ಆರ್ಟಿಫೀಶಿಯಲ್ ಲಿಂಬ್ಸ್ ಮ್ಯಾನುಫ್ಯಾಕ್ಚರಿಂಗ್ ಕಾರ್ಪೆರೇಷನ್ ಆಫ್ ಇಂಡಿಯಾ (ಅಲ್ಮಿಂಕೊ) ಮೂಲಕ ಧಾರವಾಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 42 ಅಂಗವಿಕಲರಿಗೆ 16.6 ಲಕ್ಷ ರೂ. ವೆಚ್ಚದಲ್ಲಿ ಬ್ಯಾಟರಿ ಚಾಲಿತ ತ್ರಿಚಕ್ರ ವಾಹನಗಳು ಹಾಗೂ ಸಲಕರಣೆಗಳನ್ನು ವಿತರಿಸಲಾಯಿತು.
ಇಲ್ಲಿನ ಚಿಟಗುಪ್ಪಿ ಆಸ್ಪತ್ರೆ ಆವರಣದ ಸಂಸದರ ಕಚೇರಿ ಮುಂಭಾಗದಲ್ಲಿ ಭಾನುವಾರ ವಿತರಣೆ ಕಾರ್ಯಕ್ರಮ ನಡೆಯಿತು. ಸಂಸದ ಹಾಗೂ ಕೇಂದ್ರ ಸಚಿವರೂ ಆದ ಪ್ರಲ್ಹಾದ ಜೋಶಿ ಅವರ ವಿಶೇಷ ಮುತುವರ್ಜಿ ಮತ್ತು ಪ್ರಯತ್ನದಿಂದಾಗಿ ಅಂಗವಿಕಲರಿಗೆ ಈ ಸೌಲಭ್ಯಗಳು ಲಭ್ಯವಾಗಿವೆ.
ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ಅಂಗವಿಕಲರು ಮತ್ತು ಹಿರಿಯ ನಾಗರಿಕರು ಯಾರ ಮೇಲೆಯೂ ಅವಲಂಬಿತರಾಗದೆ ಗೌರವಯುತ ಹಾಗೂ ಸ್ವಾವಲಂಬಿ ಜೀವನ ನಡೆಸಲು ಈ ಬ್ಯಾಟರಿ ಚಾಲಿತ ತ್ರಿಚಕ್ರ ವಾಹನಗಳು, ವಾಕರ್​ಗಳು ಹಾಗೂ ಇನ್ನತರೆ ಸಾಧನಾ ಸಲಕರಣೆಗಳು ಸಹಕಾರಿಯಾಗಲಿವೆ ಎಂದರು.
ರಾಜ್ಯಸಭಾ ಸದಸ್ಯ ಎಂ. ನಾಗರಾಜ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳು ಸಿಗಬೇಕು ಎಂಬ ಉದ್ದೇಶದಿಂದ ’ರಾಷ್ಟ್ರೀಯ ವಯೋ]ೕ’ ಯೋಜನೆ ಜಾರಿಗೆ ತಂದಿದೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಇದುವರೆಗೆ 4 ಕೋಟಿ ರೂ. ವೆಚ್ಚದಲ್ಲಿ 7,000 ಜನರಿಗೆ ನೆರವಾಗಿರುವುದು ಹೆಮ್ಮೆಯ ವಿಷಯ. ಇದು ಸ್ವಾವಲಂಬಿ ಜೀವನಕ್ಕೆ ಆಸರೆಯಾಗಲಿದೆ. ಮುಂದಿನ ದಿನಗಳಲ್ಲೂ ಇಂತಹ ಜನಪರ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿವೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಲಿಂಗರಾಜ ಪಾಟೀಲ ಮತ್ತು ಮೇಯರ್ ದುರ್ಗಮ್ಮ ಬಿಜವಾಡ ಮಾತನಾಡಿದರು. ಅಲ್ಮಿಂಕೊ ಸಂಸ್ಥೆಯ ಅಧಿಕಾರಿಗಳು, ದಿವ್ಯಾಂಗ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆಯ ಸಿಬ್ಬಂದಿ ಮತ್ತು ಫಲಾನುಭವಿಗಳು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net