ಅಂಬಿಗರ (Cultural Festival) ಶರಣ ಸಂಸ್ಕೃತಿ ಉತ್ಸವ ಜ. 14, 15ರಂದು

ಶ್ರೀ ನಿಜಶರಣ (Cultural Festival)  ಅಂಬಿಗರ ಚೌಡಯ್ಯನವರ ಗುರುಪೀಠದ ಶ್ರೀ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮಂಜುನಾಥ ಪುಟಕನಾಳ, ಶೇಖಪ್ಪ ಪೂಜಾರ, ಗದಿಗೆಪ್ಪ ಅಮರಗೋಳ, ಮಂಜುನಾಥ ಬೆಟಸೂರ, ವೀರೇಂದ್ರ ತಿಮ್ಮನಕಟ್ಟಿ ಇದ್ದರು.
ಶ್ರೀ ನಿಜಶರಣ (Cultural Festival) ಅಂಬಿಗರ ಚೌಡಯ್ಯನವರ ಗುರುಪೀಠದ ಶ್ರೀ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮಂಜುನಾಥ ಪುಟಕನಾಳ, ಶೇಖಪ್ಪ ಪೂಜಾರ, ಗದಿಗೆಪ್ಪ ಅಮರಗೋಳ, ಮಂಜುನಾಥ ಬೆಟಸೂರ, ವೀರೇಂದ್ರ ತಿಮ್ಮನಕಟ್ಟಿ ಇದ್ದರು.
Published on
ಹುಬ್ಬಳ್ಳಿ: ಹಾವೇರಿ (Cultural Festival) ತಾಲೂಕಿನ ಸುಕ್ಷೇತ್ರ ನರಸೀಪುರದಲ್ಲಿ ಜನೆವರಿ (2026) 14 ಮತ್ತು 15ರಂದು ಅಂಬಿಗರ 10ನೇ ಶರಣ ಸಂಸ್ಕೃತಿ ಉತ್ಸವ ಆಯೋಜಿಸಲಾಗಿದೆ ಎಂದು ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠದ ಶ್ರೀ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ತಿಳಿಸಿದರು.
ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.15ರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿದ್ದೇವೆ. ಅಂಬಿಗರಿಗೆ ಪರಿಶಿಷ್ಟ ಪಂಗಡ (ಎಸ್​ಟಿ) ಮೀಸಲಾತಿ ಕಲ್ಪಿಸುವಂತೆ ಹಕ್ಕೊತ್ತಾಯ ಮಂಡಿಸುತ್ತೇವೆ ಎಂದರು.
ಜ. 14ರಂದು ಬೆಳಗ್ಗೆ 6 ಗಂಟೆಗೆ ನಿಜಶರಣ ಅಂಬಿಗರ ಚೌಡಯ್ಯನವರ ತೊಟ್ಟಿಲೋತ್ಸವ, 8 ಗಂಟೆಗೆ ಐಕ್ಯ ಮಂಟಪ ಪೂಜೆ, 10 ಗಂಟೆಗೆ ಸಾಮೂಹಿಕ ರಕ್ತದಾನ ಶಿಬಿರ, 11 ಗಂಟೆಗೆ ಸಾಮೂಹಿಕ ವಿವಾಹ ಮಹೋತ್ಸವ, ಲಿಂ. ಶ್ರೀ ಶಾಂತಮುನಿ ಸ್ವಾಮೀಜಿಯವರ 10ನೇ ಸ್ಮರಣೋತ್ಸವ, ಮಧ್ಯಾಹ್ನ 12 ಗಂಟೆಗೆ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಹಾಗೂ ವಚನ ಕಂಠಪಾಠ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ, ಸಂಜೆ 7 ಗಂಟೆಗೆ ಗಂಗಾ ಆರತಿ ಹಾಗೂ ರಾತ್ರಿ 8 ಗಂಟೆಗೆ ಜಾನಪದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
15ರಂದು ಬೆಳಗ್ಗೆ 8 ಗಂಟೆಗೆ ಧರ್ಮ ಧ್ವಜಾರೋಹಣ, 9.30ಕ್ಕೆ ಧರ್ಮ ಸಭೆ, 10 ಗಂಟೆಗೆ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಶಿಲಾ ಮಂಟಪ, ಕಂಚಿಮ ಪುತ್ಥಳಿ ಲೋಕಾರ್ಪಣೆ ಹಾಗೂ ಶ್ರೀ ಮಹರ್ಷಿ ವೇದವ್ಯಾಸ ಕಲ್ಯಾಣ ಮಂಟಪ ಉದ್ಘಾಟನೆ ಜರುಗಲಿದೆ.
ಬೆಳಗ್ಗೆ 11 ಗಂಟೆಗೆ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ 906ನೇ ಜಯಂತ್ಯುತ್ಸವ, ಮಧ್ಯಾಹ್ನ 12 ಗಂಟೆಗೆ ಶ್ರೀ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿಯವರ ಪೀಠಾರೋಹಣದ ದಶಮಾನೋತ್ಸವ ಕಾರ್ಯಕ್ರಮ ನಡೆಯಲಿದೆ. ಸಂಜೆ 5 ಗಂಟೆಗೆ ವಚನ ಗ್ರಂಥ ಮಹಾ ರಥೋತ್ಸವ ಹಮ್ಮಿಕೊಳ್ಳಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಮಂಜುನಾಥ ಪುಟಕನಾಳ, ಶೇಖಪ್ಪ ಪೂಜಾರ, ಗದಿಗೆಪ್ಪಿ ಅಮರಗೋಳ, ಮಂಜುನಾಥ ಬೆಟಸೂರ, ಮಾರುತಿ ಕಬ್ಬೇರ, ವೀರೇಂದ್ರ ತಿಮ್ಮನಕಟ್ಟಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net