ಜಿಲ್ಲೆಯನ್ನು ಬರಪೀಡಿತ ಘೋಷಣೆಗೆ ಮನವಿ

ಶಾಸಕ ವಿನಯ್ ಸಿಮ್ ಗೆ ಮನವಿ
ಶಾಸಕ ವಿನಯ್ ಸಿಮ್ ಗೆ ಮನವಿ
Published on
ದಾರವಾಡ: ಜಿಲ್ಲೆಯನ್ನು ಬರಪೀಡಿತ ಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿ ಶಾಸಕ ವಿನಯ ಕುಲಕರ್ಣಿ ಹುಬ್ಬಳ್ಳಿಗೆ ಆಗಮಿಸಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಅವರಿಗೆ ಮನವಿ ಸಲ್ಲಿಸಿದರು.
ಜಿಲ್ಲೆಯಲ್ಲಿ ಮುಂಗಾರು ಮಳೆ ವಾಡಿಕೆಗಿಂತ ಕಡಿಮೆಯಾಗಿದೆ. ಇದರಿಂದ ಬೆಳೆಗಳು ಹಾನಿಗೊಳಗಾಗಿ ರೈತರು ಸಂಕಷ್ಟದಲ್ಲಿದ್ದಾರೆ. ಇತ್ತೀಚೆಗೆ ಘೋಷಣೆಯಾಗಿರುವ 101 ಬರಪೀಡಿತ ತಾಲೂಕುಗಳಲ್ಲಿ ಜಿಲ್ಲೆಯ ಯಾವ ತಾಲೂಕು ಇಲ್ಲ. ಜಿಲ್ಲೆಯಲ್ಲಿ ತುಂತುರು ಮಳೆಯಾಗಿ ಅಲ್ಲಲ್ಲಿ ಕೆಲ ಬೆಳೆಗಳು ಹಸಿರಾಗಿ ಕಂಡರೂ ಇಳುವರಿ ಇಲ್ಲ. ರೈತರ ಹೊಲಗಳಿಗೆ ಭೇಟಿ ನೀಡಿದಾಗ ನಿಜಾಂಶ ಕಂಡುಬಂದಿದೆ. ಆದ್ದರಿಂದ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಶಾಸಕ ವಿನಯ ಕುಲಕಣಿರ್ ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್​ ಹಾಗೂ ಕಾಂಗ್ರೆಸ್​ ಮುಖಂಡರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net