ಪ್ರತಿಭಟನಾನಿರತ ಕಾರ್ಯಕರ್ತರು ಮಧ್ಯಾಹ್ನ ಏಕಾಏಕಿ ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ಹಾಕಿದ್ದ ಬ್ಯಾರಿಕೇಡ್ಗಳನ್ನು ಕಿತ್ತೆಸೆದು ಮುನ್ನುಗ್ಗಿದರು. ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ಮಧ್ಯೆ ತಳ್ಳಾಟ, ನೂಕಾಟ ನಡೆಯಿತು. ಪರಿಸ್ಥಿತಿ ಹತೋಟಿಗೆ ಮುಂದಾದ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ದರು.