ಹುಬ್ಬಳ್ಳಿ: ಮದುವೆ ಸಮಾರಂಭದಲ್ಲಿ ಶಹನಾಯಿ ನುಡಿಸುತ್ತಿದ್ದಾಗ (artist) ಕಲಾವಿದರೊಬ್ಬರು ಅಸ್ವಸ್ಥರಾಗಿ ಬಿದ್ದು ಮೃತಪಟ್ಟ ಘಟನೆ ಇಲ್ಲಿಯ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಕಾರವಾರ ಜಿಲ್ಲೆಯ ಶಿರಸಿ ತಾಲೂಕಿನ ರಾಮನಬೈಲ್ ನಿವಾಸಿ ರಾಮಣ್ಣ ಭಜಂತ್ರಿ (60) ಮೃತರು.
ಇಲ್ಲಿಯ ರಾಜೀವನಗರದಲ್ಲಿ ಶನಿವಾರ ನಡೆಯುತ್ತಿದ್ದ ಮದುವೆ ಸಮಾರಂಭದಲ್ಲಿ ಶಹನಾಯಿ ನುಡಿಸುತ್ತಿದ್ದರು. ಈ ವೇಳೆ ಅವರು ಅಸ್ವಸ್ಥರಾಗಿ ಕುಸಿದು ಬಿದ್ದಿದ್ದರು. ಕೆಎಂಸಿಆರ್‌ಐಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದಾರೆ ಎಂದು ವಿದ್ಯಾನಗರ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.