ಸಚಿವ ಪ್ರಲ್ಹಾದ ಜೋಶಿ ಕಚೇರಿಗೆ ಮುತ್ತಿಗೆಗೆ ಯತ್ನ office

office ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ಸಂಸದೆ ಕಂಗನಾ ರಣಾವತ್ ರಾಜಿನಾಮೆಗೆ ಒತ್ತಾಯಿಸಿ ಮಹಾನಗರ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು.
office ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ಸಂಸದೆ ಕಂಗನಾ ರಣಾವತ್ ರಾಜಿನಾಮೆಗೆ ಒತ್ತಾಯಿಸಿ ಮಹಾನಗರ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಮಹಿಳಾ ಕಾಂಗ್ರೆಸ್ ಕಾರ್ಯಕರ್ತರ ಬಂಧನ.
  • ದೇಶದ ಜನರಲ್ಲಿ ಕ್ಷಮೆ ಕೇಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
  • ಸಚಿವ ಪ್ರಲ್ಹಾದ ಜೋಶಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನ.
ಹುಬ್ಬಳ್ಳಿ :
ರಾಣಿ ಚನ್ನಮ್ಮ ವೃತ್ತದಿಂದ ಸಚಿವ ಪ್ರಲ್ಹಾದ ಜೋಶಿ ಅವರ ಕಚೇರಿವರೆಗೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರನ್ನು ಚಿಟಗುಪ್ಪಿ ಆಸ್ಪತ್ರೆ ಪ್ರವೇಶ ಮಾರ್ಗದಲ್ಲಿಯೇ ಪೊಲೀಸರು ತಡೆದಿದ್ದರಿಂದ ಕೆಲ ಸಮಯ ಕಾರ್ಯಕರ್ತೆಯರು ಹಾಗೂ ಪೊಲೀಸರ ಮಧ್ಯೆ ವಾಗ್ವಾದ ನಡೆಯಿತು.
ನಂತರ ಪ್ರತಿಭಟನಾ ನಿರತ ಕಾರ್ಯಕರ್ತೆಯರನ್ನು ಪೊಲೀಸರು ಬಂಧಿಸಿ, ಕೆಲ ಸಮಯದ ನಂತರ ಬಿಡುಗಡೆಗೊಳಿಸಿದರು.
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಕಚೇರಿಯವರೆಗೆ ಹೋಗಲು ಅನುಮತಿ ನೀಡದೇ ಪೊಲೀಸರು ನಮ್ಮ ಮೇಲೆ ದಬ್ಬಾಳಿಕೆ ಮಾಡಿದರು ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಸಚಿವ ಪ್ರಲ್ಹಾದ ಜೋಶಿ ಹಾಗೂ ಸಂಸದೆ ಕಂಗನಾ ರಣಾವತ್ ಅವರು ದೇಶದ ಮಹಿಳೆಯರ ಭಾವನೆಗಳಿಗೆ ಧಕ್ಕೆ ಮಾಡಿದ್ದಾರೆ. ಸಂಸತ್ತಿನ ಉಭಯ ಸದನಗಳಲ್ಲಿ ಹಾಗೂ ದೇಶದ ಜನರಲ್ಲಿ ಇಬ್ಬರೂ ತಕ್ಷಣ ಕ್ಷಮೆ ಕೇಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಮಹಾನಗರ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೌರಮ್ಮ ಬಲೋಗಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸುವರ್ಣ ಕಲ್ಲಕುಂಟ್ಲ, ಸ್ನೇಹಾ ಜಾಧವ, ಚೇತನಾ ಲಿಂಗದಾರ, ಗೀತಾ ಹೊಸಮನಿ, ಗೀತಾ ಪಾಟೀಲ, ಮಹಾದೇವಿ ಕಿರೇಸೂರ ಹಾಗೂ ಇತರರು ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net