ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ Congress

ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ (Congress ) ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸುತ್ತಿರುವ ಬಿಜೆಪಿ ಕಾರ್ಯಕರ್ತರು.
ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ (Congress ) ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸುತ್ತಿರುವ ಬಿಜೆಪಿ ಕಾರ್ಯಕರ್ತರು.
Published on

ಪ್ರಮುಖ ಮುಖ್ಯಾಂಶಗಳು

  • ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು
  • ಕಾಂಗ್ರೆಸ್​ಗೆ ಧಿಕ್ಕಾರ ಕೂಗಿದರು.
  • ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್​ಗೆ ಧಿಕ್ಕಾರ ಕೂಗಿದರು.
ಕಾಂಗ್ರೆಸ್ ಕಚೇರಿ ಎದುರು ರಾಹುಲ್ ಗಾಂಧಿ ಭಾವಚಿತ್ರ ಹಿಡಿದು ಪ್ರತಿಭಟಿಸಿದ ಬಿಜೆಪಿ ಕಾರ್ಯಕರ್ತರು, ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್​ಗೆ ಧಿಕ್ಕಾರ ಕೂಗಿದರು. ಕಾಂಗ್ರೆಸ್ ಕಚೇರಿಗೆ ನುಗ್ಗಲೆತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ತಡೆದರು.
ಮುಂಜಾಗೃತಾ ಕ್ರಮವಾಗಿ ಪೊಲೀಸರು ಕಾಂಗ್ರೆಸ್ ಕಚೇರಿಗೆ ಭದ್ರತೆ ಒದಗಿಸಿದ್ದರು. ಸುಮಾರು ಒಂದು ತಾಸು ಪ್ರತಿಭಟನೆ ನಡೆಸಿ, ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಹರಿಹಾಯ್ದ ಪ್ರತಿಭಟನಾನಿರತ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.
ಮಹಾನಗರ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪ್ರೀತಮ್ ಅರಕೇರಿ ಹಾಗೂ ಧಾರವಾಡ ಗ್ರಾಮಾಂತರ ಜಿಲ್ಲಾಧ್ಯಕ್ಷ ಸಿದ್ಧನಗೌಡ ಪಾಟೀಲ ನೇತೃತ್ವದಲ್ಲಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ ಡಾ. ಮಲ್ಲಿಕಾರ್ಜುನ ಬಾಳಿಕಾಯಿ, ಪ್ರಮುಖರಾದ ಸತೀಶ ಶೇಜವಾಡಕರ, ಮಂಜುನಾಥ ಕಾಟಕರ, ಮಂಜುನಾಥ ಹೆಬಸೂರ, ಶಕ್ತಿ ಹಿರೇಮಠ, ಪ್ರವೀಣ ಕುಬಸದ, ಸೀಮಾ ಲದವಾ, ಪವನ ಹಳ್ಯಾಳ, ಸಂಜಯ ಘಾಟಗೆ, ರಾಧಾಬಾಯಿ ಸಫಾರೆ, ಸವಿತಾ ಚವ್ಹಾಣ, ನಾಗರತ್ನಾ ಬಳ್ಳಾರಿ ಹಾಗೂ ಇತರರು ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net