balaji hospital ರಕ್ತದಾನದಿಂದ ಜೀವದಾನ ಮಾಡಿದ ಆತ್ಮತೃಪ್ತಿ
balaji hospital ಹುಬ್ಬಳ್ಳಿಯ ಶ್ರೀ ಬಾಲಾಜಿ ಆಸ್ಪತ್ರೆ ಆವರಣದಲ್ಲಿ ಗುರುವಾರ ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ ಸಾರ್ವಜನಿಕರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದರು.
Published on:
Copied
Follow Us
ಹುಬ್ಬಳ್ಳಿ:
balaji hospital
ರಕ್ತವು ಕೃತಕವಾಗಿ ಸಿಗುವ ವಸ್ತುವಲ್ಲ. ಅದು ಮನುಷ್ಯರ ದೇಹದಲ್ಲೇ ಉತ್ಪತ್ತಿಯಾಗುವ ನೈಜ ಸಂಪನ್ಮೂಲ. ಹಾಗಾಗಿ ರಕ್ತದಾನದಿಂದ ಮತ್ತೊಬ್ಬರಿಗೆ ಜೀವದಾನ ಮಾಡಿದ ಆತ್ಮತೃಪ್ತಿ ಸಿಗಲಿದೆ ಎಂದು ಗದಗ ಜಿಲ್ಲೆ ಹೊಸಹಳ್ಳಿಯ ಶ್ರೀ ಅಭಿನವ ಬೂದೀಶ್ವರ ಸ್ವಾಮೀಜಿ ತಿಳಿಸಿದರು.
80ನೇ ಸ್ವಾತಂತ್ರೋತ್ಸವ ನಿಮಿತ್ತ ಬಾಲಾಜಿ ಆಸ್ಪತ್ರೆ ಮತ್ತು ರಾಷ್ಟ್ರೋತ್ಥಾನ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ನಗರದ ಶ್ರೀ ಬಾಲಾಜಿ ಆಸ್ಪತ್ರೆ ಆವರಣದಲ್ಲಿ ಸತತ 14ನೇ ಬಾರಿಗೆ ಗುರುವಾರ ಏರ್ಪಡಿಸಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ವೈದ್ಯಕೀಯ ಲೋಕದಲ್ಲಿ ಸಾಕಷ್ಟು ಹೊಸ ಆವಿಷ್ಕಾರ, ತಂತ್ರಜ್ಞಾನಗಳು ಮುಂದುವರಿದಿವೆ. ಆದರೂ ಇಂದಿಗೂ ರಕ್ತವನ್ನು ಕೃತಕವಾಗಿ ಸಿದ್ಧಪಡಿಸಲು ಸಾಧ್ಯವಾಗಿಲ್ಲ. ತುರ್ತು ಸಂಧರ್ಭದಲ್ಲಿ ಅಗತ್ಯವಾಗಿ ಬೇಕಾಗುವ ರಕ್ತವನ್ನು ಮತ್ತೊಬ್ಬರಿಂದಲೇ ಪಡೆಯಬೇಕಿದ್ದು, ರಕ್ತದಾನದ ಮೂಲಕ ಪ್ರತಿಯೊಬ್ಬರೂ ತಮ್ಮ ಜೀವನವನ್ನು ಮತ್ತೊಬ್ಬರಿಗೆ ಸಮರ್ಪಿಸಿಕೊಳ್ಳಬೇಕು. ಹಸಿದಾಗ ಅನ್ನ, ದಣಿದಾಗ ನೀರು, ಅಗತ್ಯವಿದ್ದಾಗ ರಕ್ತದಾನ ಮಾಡುವುದು ಉಳಿದೆಲ್ಲ ದಾನಗಳಿಗಿಂತ ಶ್ರೇಷ್ಠವಾದುದು ಎಂದರು.
ಬಾಲಾಜಿ ಆಸ್ಪತ್ರೆ ಚೇರ್ಮನ್ ಡಾ. ಕ್ರಾಂತಿಕಿರಣ ಮಾತನಾಡಿ, ರಕ್ತದಾನದಿಂದ ಯಾವುದೇ ಆರೋಗ್ಯ ಸಮಸ್ಯೆ ಉಂಟಾಗುವುದಿಲ್ಲ. ದೇಹದಲ್ಲಿನ 5-6 ಲೀಟರ್ ರಕ್ತದ ಪೈಕಿ ಕೇವಲ 350 ಮಿ.ಲೀ.ನಷ್ಟು ಮಾತ್ರವೇ ರಕ್ತ ಪಡೆಯುವುದರಿಂದ ಆರೋಗ್ಯಕ್ಕೆ ಯಾವುದೇ ಸಮಸ್ಯೆ ಕಾಡದು. ಬದಲಾದ ವೈದ್ಯಕೀಯ ತಂತ್ರಜ್ಞಾನದಲ್ಲಿ ಒಬ್ಬರಿಂದ ಪಡೆದ ರಕ್ತದಿಂದ 3 ಅತ್ಯಮೂಲ್ಯ ಜೀವಗಳನ್ನು ಉಳಿಸಬಹುದು ಎಂದರು.
ರಾಷ್ಟ್ರೋತ್ಥಾನ ರಕ್ತನಿಧಿ ಕೇಂದ್ರದ ಮುಖ್ಯಸ್ಥ ದತ್ತಮೂರ್ತಿ ಕುಲಕರ್ಣಿ ಮಾತನಾಡಿದರು. ಶಿಬಿರದಲ್ಲಿ 35ಕ್ಕೂ ಹೆಚ್ಚು ಜನರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು.
ಬಾಲಾಜಿ ಆಸ್ಪತ್ರೆ ವೈದ್ಯರು, ಶುಶ್ರೂಷಕರು, ಸಿಬ್ಬಂದಿ, ಸಾರ್ವಜನಿಕರು ಉಪಸ್ಥಿತರಿದ್ದರು.