banajig ಹುಬ್ಬಳ್ಳಿಯಲ್ಲಿ ಮಂಗಳವಾರ ಜರುಗಿದ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಪೂರ್ವಭಾವಿ ಸಭೆಯಲ್ಲಿ ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮದ ಅಧ್ಯಕ್ಷ ಚನ್ನವೀರ ಮುಂಗರವಾಡಿ ಅವರನ್ನು ಸನ್ಮಾನಿಸಲಾಯಿತು. ಗೌರವಾಧ್ಯಕ್ಷ ಮಂಜುನಾಥ ಮುನವಳ್ಳಿ, ಗುರುಪಾದ ಶಿರೂರ, ಸಂದೀಪ ಕುಂಬಿ, ಈರಣ್ಣ ಮಳಗಿ, ಚನ್ನಬಸಪ್ಪ ಧಾರವಾಡಶೆಟ್ರು, ಸಿದ್ದಣ್ಣ ಕೇಶಪ್ಪನವರ ಇತರರು ಇದ್ದರು.
ಹುಬ್ಬಳ್ಳಿ: banajig ಸಮಾಜ ನನ್ನನ್ನು ಗುರುತಿಸಿ ದೊಡ್ಡ ಜವಾಬ್ದಾರಿಯನ್ನು ನೀಡಿದ್ದು, ಈ ಹೊಣೆಯನ್ನು ಹೊತ್ತು ಎಲ್ಲ ಕೆಲಸವನ್ನು ಅಚ್ಚುಕಟ್ಟಾಗಿ ಮಾಡುವೆ, ಸಮಾಜದ ಬೆಳವಣಿಗೆಗೆ ಸದಾ ನನ್ನ ಸಹಕಾರ ಇರುತ್ತದೆ. ಸಮಾಜದ ಸಂಘಟನೆ ಬೆಳೆಸಲು ಶ್ರಮಿಸುವೆ. ಇದು ಕೇವಲ ಒಂದು ಕಾರ್ಯಕ್ರಮವಾಗದೇ ಸಮಾಜವನ್ನು ಬೆಳೆಸುವ ವೇದಿಕೆಯಾಗಿಸುವ ಗುರಿ ಹೊಂದಿದ್ದೇನೆ ಎಂದು ಸಂಕ್ರಾಂತಿ ಸಂಭ್ರಮದ ಅಧ್ಯಕ್ಷ ಚನ್ನವೀರ ಮುಂಗರವಾಡಿ ಹೇಳಿದರು.
ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘ ಹುಬ್ಬಳ್ಳಿ ತಾಲೂಕು ಘಟಕದ ವತಿಯಿಂದ ಜನವರಿಯಲ್ಲಿ ಹಮ್ಮಿಕೊಳ್ಳಲಾಗುವ ಸಂಕ್ರಾಂತಿ ಸಂಭ್ರಮದ ಅಂಗವಾಗಿ ನಗರದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮದ ಅಧ್ಯಕ್ಷರನ್ನಾಗಿ ಸಿದ್ಧಾರೂಢಸ್ವಾಮಿ ಮಠ ಟ್ರಸ್ಟ್ ಕಮಿಟಿ ಚೇರ್ಮನ್ ಚನ್ನವೀರ ಮುಂಗರವಾಡಿ, ಗೌರವಾಧ್ಯಕ್ಷರಾಗಿ ಮಂಜುನಾಥ ಮುನವಳ್ಳಿ ಅವರನ್ನು ಆಯ್ಕೆ ಮಾಡಲಾಯಿತು.
ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮದ ರೂಪುರೇಷೆಗಳನ್ನು ಸಭೆಯಲ್ಲಿ ಅಂತಿಮಗೊಳಿಸಲಾಯಿತು. ಹುಬ್ಬಳ್ಳಿ ತಾಲೂಕು ಘಟಕದ ಕಾರ್ಯಚಟುವಟಿಕೆ ಮತ್ತು ಜವಾಬ್ದಾರಿಗಳನ್ನು ಸಹ ನಿರ್ಧರಿಸಿ ಅನುಷ್ಠಾನಕ್ಕೆ ತರುವ ಬಗ್ಗೆ ಸೂಚಿಸಲಾಯಿತು.