ಬಾಂಗ್ಲಾ ಅಕ್ರಮ ನುಸುಳುಕೋರರ ವಿರುದ್ಧ ಕ್ರಮ ಕೈಗೊಳ್ಳಿ infiltrators
infiltrators ಹುಬ್ಬಳ್ಳಿಗೆ ಆಗಮಿಸುತ್ತಿರುವ ಬಾಂಗ್ಲಾ ದೇಶದ ಅಕ್ರಮ ನುಸುಳುಕೋರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಹುಬ್ಬಳ್ಳಿ ಶಹರ ಪೊಲೀಸ್ ಠಾಣೆ ಎದುರು ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ
ಇಲ್ಲಿಯ ಅನ್ನ ತಿಂದು ಪ್ರಧಾನಿ ಮೋದಿ ವಿರುದ್ಧ ಮಾತನಾಡುತ್ತಾರೆ
ಹುಬ್ಬಳ್ಳಿ :
ಬಾಂಗ್ಲಾ ನಿವಾಸಿಗಳ ಅಕ್ರಮ ನಗರ ಪ್ರವೇಶದ ಕುರಿತು ಪೊಲೀಸರಿಗೆ ಸಾಕಷ್ಟು ಸಾಕ್ಷಾಧಾರಗಳನ್ನು ನೀಡಿದರು ಸಹ ಪೊಲೀಸರು ಅವರನ್ನು ತಡೆಯುವಲ್ಲಿ ವಿಫಲರಾಗಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮುಖಂಡ ಜಯತೀರ್ಥ ಕಟ್ಟಿ, ಬಾಂಗ್ಲಾ ದೇಶದ ಮುಸ್ಲಿಂರು ಪೂರ್ವ ವಿಧಾನಸಭೆ ಕ್ಷೇತ್ರದಲ್ಲಿ ಹೆಚ್ಚುತ್ತಿದ್ದಾರೆ.
ವರ್ಷದಿಂದ ವರ್ಷಕ್ಕೆ ಅವರ ಸಂಖ್ಯೆ ಹೆಚ್ಚುತ್ತಿದೆ. ಪಶ್ಚಿಮ ಬಂಗಾಳದ ಚುನಾವಣೆ ನಂತರ ಬಾಂಗ್ಲಾದ ನಿವಾಸಿಗಳು ಹೌರಾ ರೈಲಿನ ಮೂಲಕ ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ ಎಂದು ತಿಳಿಸಿದರು.
ಅಕ್ರಮ ನಿವಾಸಿಗಳು ಇಲ್ಲಿನ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಿಕೊಂಡು, ಆಧಾರ್ ಕಾರ್ಡ್ ಪಡೆದುಕೊಂಡು ಇಲ್ಲಿಯೇ ವಾಸಿಸಲು ಆರಂಭಿಸುತ್ತಾರೆ. ನಂತರ ಹಿಂದು ಮಹಿಳೆಯರ ಮೇಲೆ ಕಣ್ಣು ಹಾಕಿ, ಲವ್ ಜಿಹಾದ್ ಆರಂಭಿಸುತ್ತಾರೆ.
ಇಲ್ಲಿಯ ಅನ್ನ ತಿಂದು ಪ್ರಧಾನಿ ಮೋದಿ ವಿರುದ್ಧ ಮಾತನಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಹಿಂದೆ ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಅಂದಾಜು 3 ಸಾವಿರದಷ್ಟು ಬಾಂಗ್ಲಾ ಅಕ್ರಮ ನಿವಾಸಿಗಳು ಆಗಮಿಸಿದ್ದರು. ಆ ಸಮಯದಲ್ಲಿ ರೈಲು ನಿಲ್ದಾಣದ ಸಿಸಿ ಕ್ಯಾಮರಾ ಫೋಟೇಜ್ ಅನ್ನು ಪೊಲೀಸರಿಗೆ ನೀಡಲಾಗಿತ್ತು. ಆದರೂ, ಪೊಲೀಸರು ಯಾವುದೇ ವಿಚಾರಣೆ ನಡೆಸಿಲ್ಲ ಎಂದು ದೂರಿದರು.
ವಾರದಲ್ಲಿ 4 ದಿನ ಹೌರಾ-ವಾಸ್ಕೊ ಎಕ್ಸ್ಪ್ರೆಸ್ ರೈಲು ಹುಬ್ಬಳ್ಳಿ ನಿಲ್ದಾಣಕ್ಕೆ ಬರುತ್ತದೆ. ಆ ರೈಲು ಮೂಲಕ ಪ್ರತಿ ಬಾರಿ ನೂರಾರು ಸಂಖ್ಯೆಯಲ್ಲಿ ಅಕ್ರಮ ಬಾಂಗ್ಲಾ ನಿವಾಸಿಗಳು ಬರುತ್ತಿದ್ದಾರೆ. ಆರ್ಪಿಎಫ್, ರೈಲ್ವೆ ರಾಜ್ಯ ಪೊಲೀಸರು ಹಾಗೂ ಇಲ್ಲಿನ ಪೊಲೀಸರಿಗೆ ಹಲವಾರು ಬಾರಿ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು.
ಬಾಂಗ್ಲಾ ಅಕ್ರಮ ನುಸುಳುಕೋರರ ವಿರುದ್ಧ ಇದುವರೆಗೆ ಎಷ್ಟು ಪ್ರಕರಣ ದಾಖಲಿಸಿದ್ದೀರಿ ? ಎಂಬುದನ್ನು ಬಹಿರಂಗಗೊಳಿಸುವಂತೆ ಜಯತೀರ್ಥ ಕಟ್ಟಿ ಅವರು ಪೊಲೀಸರನ್ನು ಒತ್ತಾಯಿಸಿದರು.
ಮಾಜಿ ಉಪ ಮೇಯರ್ ನಾರಾಯಣ ಜರತಾರಘರ ಮಾತನಾಡಿ, ಪಶ್ಚಿಮ ಬಂಗಾಳದ ಚುನಾವಣೆಗಾಗಿ ಇಲ್ಲಿಂದ ತೆರಳಿದ್ದವರು ವಾಪಸ್ಸು ಬರುತ್ತಿದ್ದಾರೆ ಎಂಬ ಪೊಲೀಸರ ಹೇಳಿಕೆ ಬೇಜವಾಬ್ದಾರಿಯಿಂದ ಕೂಡಿದೆ. ಇಲ್ಲಿ ಕಾರ್ವಿುಕರಾಗಿರುವ ಪಶ್ಚಿಮ ಬಂಗಾಳ ಮೂಲದವರನ್ನು ಗುರುತಿಸಿ, ಜತೆಗೆ ರೈಲಿನಲ್ಲಿ ಬರುತ್ತಿರುವವರನ್ನೂ ಗುರುತಿಸುವಂತೆ ಒತ್ತಾಯಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಎಸಿಪಿ ಯು.ಬಿ. ಚಿಕ್ಕಮಠ, ರೈಲುಗಳಲ್ಲಿ ಅಕ್ರಮ ಬಾಂಗ್ಲಾ ನುಸುಳುಕೋರರು ಕಂಡುಬಂದರೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಮಹಾನಗರ ಪಾಲಿಕೆ ಸದಸ್ಯ ಶಿವು ಮೆಣಸಿನಕಾಯಿ, ಬಿಜೆಪಿಯ ಪ್ರೀತಮ ಅರಕೇರಿ, ಜಗದೀಶ ಬುಳ್ಳನ್ನವರ, ಹರೀಶ ಹಳ್ಳಿಕೇರಿ, ಹರೀಶ ಸರ್ವಳೆ, ನಾಗರತ್ನಾ ಬಳ್ಳಾರಿ, ಅಣ್ಣಪ್ಪ ಗೋಕಾಕ, ಮಾರುತಿ ಚಾಕಲಬ್ಬಿ, ವೆಂಕಟೇಶ ಕಾಟವೆ, ರಾಜು ಕೋರ್ಯಾಣಮಠ ಹಾಗೂ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.