Bangladeshi citizens ಪಶ್ಚಿಮ ಬಂಗಾಳ ಪ್ರಯಾಣಿಕರ ದಾಖಲಾತಿ ಪರಿಶೀಲನೆ

ಹುಬ್ಬಳ್ಳಿಗೆ ಆಗಮಿಸಿರುವ Bangladeshi citizens ಪ್ರಯಾಣಿಕರನ್ನು ಕಂದಾಯ ಇಲಾಖೆ ಅಧಿಕಾರಿಗಳು ದಾಖಲಾತಿಗಳನ್ನು ಶನಿವಾರ ಪರಿಶೀಲಿಸಿದರು.
ಹುಬ್ಬಳ್ಳಿಗೆ ಆಗಮಿಸಿರುವ Bangladeshi citizens ಪ್ರಯಾಣಿಕರನ್ನು ಕಂದಾಯ ಇಲಾಖೆ ಅಧಿಕಾರಿಗಳು ದಾಖಲಾತಿಗಳನ್ನು ಶನಿವಾರ ಪರಿಶೀಲಿಸಿದರು.
Published on
ಹುಬ್ಬಳ್ಳಿ: ಪಶ್ಚಿಮ ಬಂಗಾಳದಿಂದ ಅಮರಾವತಿ ರೈಲು ಮೂಲಕ ಹುಬ್ಬಳ್ಳಿ ರೈಲ್ವೆ ನಿಲ್ದಾಣಕ್ಕೆ Bangladeshi citizens ಆಗಮಿಸಿತ್ತು. ಅಲ್ಲಿಂದ ಹೊಸ ಬಸ್ ನಿಲ್ದಾಣಕ್ಕೆ ಆಗಮಿಸಿದ್ದ 240 ಪ್ರಯಾಣಿಕರ ದಾಖಲೆಗಳನ್ನು ಕಂದಾಯ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಶನಿವಾರ ಪರಿಶೀಲಿಸಿದರು.
ಶನಿವಾರ ಬೆಳಗ್ಗೆ 11.30ಕ್ಕೆ ಹೊಸ ಬಸ್ ನಿಲ್ದಾಣದಲ್ಲಿ ಜನದಟ್ಟಣೆಯಾಗಿತ್ತು. ಇವರೆಲ್ಲರೂ ಬಾಂಗ್ಲಾ ಪ್ರಜೆಗಳಿರಬಹುದೆಂಬ ಅನುಮಾನ ಹಿನ್ನೆಲೆಯಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ತೆರಳಿ ಪ್ರತಿಯೊಬ್ಬರ ಮಾಹಿತಿ ಕಲೆ ಹಾಕಲು ಶುರು ಮಾಡಿದರು. ಇದರಿಂದ ಕೆಲ ಹೊತ್ತು ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ವಿಷಯ ಗೊತ್ತಾಗುತ್ತಿದ್ದಂತೆಯೇ ಕಂದಾಯ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಹೊರ ಪೊಲೀಸ್ ಠಾಣೆ, ವಿಶ್ರಾಂತಿ ಗೃಹದಲ್ಲಿ ಸರತಿ ಸಾಲಿನಲ್ಲಿ ನಿಲ್ಲಿಸಿ ದಾಖಲಾತಿ ಪರಿಶೀಲನೆ ನಡೆಸಲಾರಂಭಿಸಿದರು.
ಇವರೆಲ್ಲರೂ ಪಶ್ಚಿಮ ಬಂಗಾಳದಿಂದ ಗೋವಾ ರಾಜ್ಯಕ್ಕೆ ತೆರಳುತ್ತಿದ್ದರು. ಆದರೆ, ಗೋವಾ ರೈಲು ವಿಳಂಬ ಹಿನ್ನೆಲೆಯಲ್ಲಿ ಬಸ್ ಮೂಲಕ ಪ್ರಯಾಣಿಸುವ ಉದ್ದೇಶದಿಂದ ಹೊಸ ಬಸ್ ನಿಲ್ದಾಣಕ್ಕೆ ಆಗಮಿಸಿದ್ದರು. ಇವರೆಲ್ಲರೂ ಪಶ್ಚಿಮ ಬಂಗಾಳ, ಒಡಿಶಾ, ಜಾರ್ಖಂಡ, ಬಿಹಾರ ರಾಜ್ಯದ ಕೂಲಿ ಕಾರ್ಮಿಕರಾಗಿದ್ದರು. ಗೋವಾ ರಾಜ್ಯ ಹಾಗೂ ಕರ್ನಾಟಕ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಕೂಲಿ ಕೆಲಸ ಮಾಡುತ್ತಿದ್ದರೆಂಬ ಮಾಹಿತಿ ಇದೆ. ಇದರಲ್ಲಿ ವ್ಯಕ್ತಿಯೊಬ್ಬರ ದಾಖಲಾತಿ ಸರಿ ಇಲ್ಲವಾಗಿದ್ದು, ಇನ್ನಷ್ಟು ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net