ಬಸವರಾಜ ಹೊರಟ್ಟಿ ಗೌರವ ಸನ್ಮಾನ (honored ) ಅಚ್ಚುಕಟ್ಟಾಗಬೇಕು
ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ಸಭಾಪತಿ ಬಸವರಾಜ ಹೊರಟ್ಟಿ ಗೌರವ ಸನ್ಮಾನ (honored ) ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಸಚಿವ ಸಂತೋಷ ಲಾಡ್ ಮಾತನಾಡಿದರು. ಶಾಸಕ ಎನ್.ಎಚ್. ಕೋನರಡ್ಡಿ, ಕೆಎಲ್ಇ ನಿರ್ದೇಶಕ ಶಂಕರಣ್ಣ ಮುನವಳ್ಳಿ ಹಾಗೂ ಇತರರು ಪಾಲ್ಗೊಂಡಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಪೂರ್ವಭಾವಿ ಸಭೆಯಲ್ಲಿ ಸಚಿವ ಸಂತೋಷ ಲಾಡ್ ಸೂಚನೆ.
ಬಸವರಾಜ ಹೊರಟ್ಟಿ ಅವರು ಶಿಕ್ಷಕರಿಗಾಗಿಯೇ ಜೀವನ ಮುಡಿಪಾಗಿಟ್ಟವರು.
ಟ್ರಾಫಿಕ್ ಸಮಸ್ಯೆ ಆಗದಂತೆ ಪೊಲೀಸರು ಸೂಕ್ತ ವ್ಯವಸ್ಥೆ ಮಾಡಬೇಕು.
ಇಲ್ಲಿನ ನೆಹರು ಮೈದಾನದಲ್ಲಿ ಡಿ. 13ರಂದು ಸಂಜೆ 4 ಗಂಟೆಗೆ ಆಯೋಜಿಸಿರುವ ಸಭಾಪತಿ ಬಸವರಾಜ ಹೊರಟ್ಟಿ ಅವರ ಗೌರವ ಸನ್ಮಾನ ಸಮಾರಂಭದ ಅಂಗವಾಗಿ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಲ್ಲಿ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಬಸವರಾಜ ಹೊರಟ್ಟಿ ಅವರು ಶಿಕ್ಷಕರಿಗಾಗಿಯೇ ಜೀವನ ಮುಡಿಪಾಗಿಟ್ಟವರು. ಇದರೊಂದಿಗೆ ರೈತರು ಸೇರಿದಂತೆ ವಿವಿಧ ಕ್ಷೇತ್ರಗಳ ಜನರಿಗೆ ಹೊರಟ್ಟಿ ಅವರ ಮೇಲೆ ಅಪಾರ ಅಭಿಮಾನ ಇದೆ. ಅವರೆಲ್ಲರನ್ನೂ ಸಮಾರಂಭಕ್ಕೆ ಕರೆತರುವ ಜವಾಬ್ದಾರಿಯನ್ನು ಸಮಿತಿಯಲ್ಲಿದ್ದವರು ಸರಿಯಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು.
ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಶಿಕ್ಷಕರು ಮತ್ತು ಅಭಿಮಾನಿಗಳನ್ನು ಆಹ್ವಾನಿಸಬೇಕು ಎಂದ ಸಚಿವ ಲಾಡ್, ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರು ಪಾಲ್ಗೊಳ್ಳುವಂತೆ ಮಾಡಬೇಕು ಎಂದು ತಿಳಿಸಿದರು.
ದೂರದ ಊರುಗಳ ಶಿಕ್ಷಕರು ಬರಲು ವಾಹನ ವ್ಯವಸ್ಥೆ ಮಾಡಬೇಕು ಇಲ್ಲವೇ ಸ್ವಂತ ಕಾರುಗಳಿದ್ದರೆ ಅದರಲ್ಲಿ ಇತರ ಶಿಕ್ಷಕರನ್ನು ಕರೆತರುವಂತೆ ಸೂಚಿಸಬೇಕು ಎಂದರು.
ಸಮಾರಂಭದ ದಿನ ಟ್ರಾಫಿಕ್ ಸಮಸ್ಯೆ ಆಗದಂತೆ ಪೊಲೀಸರು ಸೂಕ್ತ ವ್ಯವಸ್ಥೆ ಮಾಡಬೇಕು. ವಾಹನಗಳ ರ್ಪಾಂಗ್ ಬಹಳ ದೂರ ನಿಗದಿಪಡಿಸಬಾರದು ಎಂದು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಬಸವರಾಜ ಹೊರಟ್ಟಿ ಅವರ ಬಾಲ್ಯ, ರಾಜಕೀಯ ಜೀವನ ಸೇರಿದಂತೆ ಇನ್ನಿತರ ಮಾಹಿತಿಗಳನ್ನೊಳಗೊಂಡ ಎರಡ್ಮೂರು ಪ್ರತ್ಯೇಕ ವಿಡಿಯೋ ಚಿತ್ರಗಳನ್ನು ಪ್ರದರ್ಶಿಸಬೇಕು ಎಂದು ಸಲಹೆ ನೀಡಿದರು.
ಸಮಾರಂಭದಲ್ಲಿ ಪಾಲ್ಗೊಳ್ಳಲಿರುವ ಎಲ್ಲ ಸ್ವಾಮೀಜಿಗಳಿಗೆ ವೇದಿಕೆಯಲ್ಲಿ ಆಸನದ ವ್ಯವಸ್ಥೆ ಮಾಡಬೇಕು. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಮಾಜಿ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು ಸೇರಿದಂತೆ ಇತರ ಗಣ್ಯರ ಭಾಷಣದ ನಂತರವೂ ಸಮಾರಂಭ ಮುಂದುವರೆಯುತ್ತದೆ.
ಕನಿಷ್ಠ 4 ತಾಸು ಕಾರ್ಯಕ್ರಮ ನಡೆಯುವ ಸಾಧ್ಯತೆ ಇದೆ. ಹೀಗಾಗಿ, ಮಧ್ಯೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ತಿಳಿಸಿದರು.
ಎಂ.ಡಿ. ಪಲ್ಲವಿ, ಅನನ್ಯ ಭಟ್ ಸೇರಿದಂತೆ ಪ್ರಮುಖ ಗಾಯಕರನ್ನು ಕರೆಯಿಸಬೇಕು. ಕಾರ್ಯಕ್ರಮದ ಅಚ್ಚುಕಟ್ಟು ನಿರೂಪಣೆಗಾಗಿ ಬೆಂಗಳೂರಿನಿಂದ ಆಂಕರ್ಗಳನ್ನು ಕರೆಯಿಸಬೇಕು. ಕಳೆದ ಶೈಕ್ಷಣಿಕ ವರ್ಷದಲ್ಲಿ ರ್ಯಾಂಕ್ ಪಡೆದ ಧಾರವಾಡ ಜಿಲ್ಲೆಯ ವಿದ್ಯಾರ್ಥಿಗಳನ್ನು ಅವ್ವ ಟ್ರಸ್ಟ್ನಿಂದ ಸನ್ಮಾನಿಸಬೇಕು ಎಂದು ಸಚಿವ ಲಾಡ್ ಸಲಹೆ ನೀಡಿದರು.
ಶಾಸಕ ಎನ್.ಎಚ್. ಕೋನರಡ್ಡಿ, ಕೆಎಲ್ಇ ನಿರ್ದೇಶಕ ಶಂಕರಣ್ಣ ಮುನವಳ್ಳಿ, ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ ಲಿಂಬಿಕಾಯಿ, ಲಿಂಗರಾಜ ಪಾಟೀಲ, ರಾಜಣ್ಣ ಕೊರವಿ, ಅನಿಲಕುಮಾರ ಪಾಟೀಲ, ಅಲ್ತಾಫ ಹಳ್ಳೂರ ಹಾಗೂ ಇತರರು ಇದ್ದರು.