bca students ನಿರಂತರ ಪರಿಶ್ರಮದಿಂದ ಉನ್ನತ ಸಾಧನೆ

ಶ್ರೀನಗರದ ಚೇತನ ಬಿಜಿನೆಸ್ ಸ್ಕೂಲ್‌ನಲ್ಲಿ bca students ಭಾನುವಾರ ಬಿಸಿಎ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವನ್ನು ಪಾಲಿಕೆ ಸದಸ್ಯ ರಾಜಣ್ಣ ಕೊರವಿ ಉದ್ಘಾಟಿಸಿದರು.
ಶ್ರೀನಗರದ ಚೇತನ ಬಿಜಿನೆಸ್ ಸ್ಕೂಲ್‌ನಲ್ಲಿ bca students ಭಾನುವಾರ ಬಿಸಿಎ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವನ್ನು ಪಾಲಿಕೆ ಸದಸ್ಯ ರಾಜಣ್ಣ ಕೊರವಿ ಉದ್ಘಾಟಿಸಿದರು.
Published on
ಹುಬ್ಬಳ್ಳಿ: ಇಲ್ಲಿಯ ಉಣಕಲ್ ಶ್ರೀನಗರದ ಡಿಕೆಎಸ್ ಎಜುಕೇಷನ್ ಟ್ರಸ್ಟ್‌ನ ಚೇತನ ಕಾಲೇಜ್ ಆಫ್ ಕಾಮರ್ಸ್, ಬಿಬಿಎ ಮತ್ತು ಬಿಸಿಎ ಕಾಲೇಜ್‌ನಲ್ಲಿ bca students ಭಾನುವಾರ ‘ಬಿಸಿಎ ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ ವಿದಾಯ-2026’ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಲಾಗಿತ್ತು.
ಹು-ಧಾ ಮಹಾನಗರ ಪಾಲಿಕೆ ಸದಸ್ಯ ರಾಜಣ್ಣ ಕೊರವಿ ಮುಖ್ಯ ಅತಿಥಿಯಾಗಿ ಮಾತನಾಡಿ, ಶಿಕ್ಷಣವು ಜೀವನದ ಯಶಸ್ಸಿನ ಭದ್ರ ಅಡಿಪಾಯ. ವಿದ್ಯಾರ್ಥಿಗಳು ತಮ್ಮ ಗುರಿಯತ್ತ ನಿರಂತರ ಪರಿಶ್ರಮದೊಂದಿಗೆ ಸಾಗಿದರೆ ಉನ್ನತ ಸಾಧನೆ ಮಾಡಲು ಸಾಧ್ಯ. ಕಾಲೇಜ್‌ನಲ್ಲಿ ಪಡೆದ ಜ್ಞಾನ ಮತ್ತು ಮೌಲ್ಯಗಳನ್ನು ಜೀವನದುದ್ದಕ್ಕೂ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಚೇತನ ಬಿಜಿನೆಸ್ ಸ್ಕೂಲ್ ನಿರ್ದೇಶಕ ಡಾ. ವಿಶ್ವನಾಥ ಕೊರವಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಉದ್ಯೋಗ ಪಡೆಯುವ ಗುರಿ ಮಾತ್ರವಲ್ಲದೆ, ಸಮಾಜಕ್ಕೆ ಉತ್ತಮ ಕೊಡುಗೆ ನೀಡುವ ಜವಾಬ್ದಾರಿಯುತ ನಾಗರಿಕರಾಗಬೇಕು. ಆತ್ಮವಿಶ್ವಾಸ, ಶಿಸ್ತು ಮತ್ತು ಮಾನವೀಯ ಮೌಲ್ಯಗಳೇ ಯಶಸ್ಸಿನ ರಹದಾರಿ ಎಂದರು.
ಬಿಸಿಎ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸ್ಮರಣಿಕೆ ವಿತರಿಸಲಾಯಿತು. ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬೆಸ್ಟ್ ಬಾಯ್ ಮತ್ತು ಬೆಸ್ಟ್ ಗರ್ಲ್ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.
ವಿದ್ಯಾರ್ಥಿ ಪ್ರತಿನಿಧಿಗಳು ಅನುಭವಗಳನ್ನು ಹಂಚಿಕೊಂಡು.
ಪ್ರಾಂಶುಪಾಲ ಡಾ. ಅಶೋಕ ವಡಕಣ್ಣವರ, ಶೈಕ್ಷಣಿಕ ಸಲಹೆಗಾರ ಡಾ. ಕಿಶೋರ ಪಾಂಗಿ, ಬಿಸಿಎ ವಿಭಾಗದ ಮುಖ್ಯಸ್ಥೆ ಡಾ. ಶಿಲ್ಪಾ ಕುಲಕರ್ಣಿ, ಬಿಸಿಎ ವಿಭಾಗದ ಶೈಕ್ಷಣಿಕ ನಿರ್ವಾಹಕಿ ಪ್ರೊ. ವೀಣಾ ಕುಂಶಿ, ಪ್ರೊ. ಭಾಗ್ಯಶ್ರೀ ಬಿ., ಪ್ರೊ. ದೀಪಾ ಎಂ., ಪ್ರೊ. ಆರತಿ ಪಾಟೀಲ, ಸಾನಿಕಾ ಎಂ., ರಕ್ಷಿತಾ ಜಿ., ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net