ಧಾರವಾಡ: ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಟನೆ ತಾಲೂಕಿನ ಶಿವಳ್ಳಿ ರಸ್ತೆಯಲ್ಲಿ ನಡೆದಿದೆ. ಗೋವನಕೊಪ್ಪ ಗ್ರಾಮದ ನಿವಾಸಿ ವಿನಾಯಕ ಸುಳ್ಳದ (23) ಮೃತ ಯುವಕ. ಈತ ತನ್ನ ಅಜ್ಜಿಯ ಅಂತ್ಯಸಂಸ್ಕಾರ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿ ಬಿದ್ದು ಮೃತಪಟ್ಟಿದ್ದಾನೆ. ಈ ಕುರಿತು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.