ಸಚಿವ ಬಿ ನಾಗೇಂದ್ರ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ಬಿಜೆಪಿ ಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಸಂಸದ ಜಗದೀಶ ಶೆಟ್ಟರ್ ಮಾತನಾಡಿದರು.
Published on:
Copied
Follow Us
ಧಾರವಾಡ: ಮಹಷಿರ್ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂ. ಅಕ್ರಮ ಹಣ ವರ್ಗಾವಣೆಯ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ಅವರನ್ನು ತಕ್ಷಣವೇ ಸಂಪುಟದಿಂದ ಕೈ ಬಿಡಬೇಕು ಎಂದು ಒತ್ತಾಯಿಸಿ ಬಿಜೆಪಿ ಮಹಾನಗರ ಹಾಗೂ ಗ್ರಾಮಾಂತರ ಜಿಲ್ಲಾ ಟಕದ ಪದಾಧಿಕಾರಿಗಳು 3ನೇ ದಿನವಾದ ಶುಕ್ರವಾರವೂ ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ಟೈರ್ಗೆ ಬೆಂಕಿ ಹಚ್ಚಿ, ಬಿ. ನಾಗೇಂದ್ರ ಅವರ ಭಾವಚಿತ್ರ ದಹಿಸಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪರಿಶಿಷ್ಟ ಪಂಗಡದ ಬಡವರ ಕಲ್ಯಾಣಕ್ಕೆ ಮೀಸಲಿಟ್ಟ ನೂರಾರು ಕೋಟಿ ರೂ. ಅನುದಾನವನ್ನು ಅಕ್ರಮವಾಗಿ ವರ್ಗಾಯಿಸಿ ಹಗರಣ ಎಸಗಲಾಗಿದೆ. ತನಿಖೆ ಬಾಕಿ ಇರುವಾಗಲೇ ಆರೋಪಿಯನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಂಡಿರುವುದು ಖಂಡನೀಯ. ಸರ್ಕಾರದ ಈ ನಡೆಯು ಭ್ರಷ್ಟಾಚಾರಕ್ಕೆ ನೇರ ಬೆಂಬಲ ಎಂದು ಪ್ರತಿಭಟನಾಕಾರರು ದೂರಿದರು.
ಸಾಮಾಜಿಕ ನ್ಯಾಯದ ಮಾತನಾಡುವ ಸರ್ಕಾರ, ಎಸ್ಟಿ ಸಮುದಾಯದ ಹಣ ಲೂಟಿ ಮಾಡಿದ ಆರೋಪಿಯನ್ನು ಸರ್ಮಥಿಸಿಕೊಳ್ಳುತ್ತಿರುವುದು ಶೋಷಿತರಿಗೆ ಮಾಡಿದ ದ್ರೋಹ. ಆರೋಪಿ ಸಚಿವರನ್ನು ಕೂಡಲೇ ವಜಾಗೊಳಿಸಿ, ನಿಷ್ಪಕ್ಷಪಾತ ತನಿಖೆಗೆ ಆದೇಶಿಸಬೇಕು ಎಂದು ಆಗ್ರಹಿಸಿದರು.
ಸಂಸದ, ಮಾಜಿ ಸಿಎಂ ಜಗದೀಶ ಶೆಟ್ಟರ್ ಮಾತನಾಡಿ, ವಾಲ್ಮೀಕಿ ನಿಗಮದ ಹಗರಣದಲ್ಲಿ ಭಾಗಿಯಾಗಿಯಾದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಪಡೆಯಲು ಹಿಂದೇಟು ಹಾಕುತ್ತಿರುವ ಡಿ.ಕೆ. ಶಿವಕುಮಾರ್ ಸರ್ಕಾರ ಭ್ರಷ್ಟರ ರಕ್ಷಣೆಗೆ ನಿಂತಿದೆ ಎಂದು ದೂರಿದರು. ಈ ಸರ್ಕಾರಕ್ಕೆ ನಾಚಿಕೆ ಇಲ್ಲ. 21ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣ ಸಚಿವ ನಾಗೇಂದ್ರ ಮೇಲೆ ಇವೆ. ಸರ್ಕಾರ ಅವರನ್ನು ತಕ್ಷಣ ಸಂಪುಟದಿಂದ ಹೊರಗಿಡಬೇಕು ಎಂದು ಒತ್ತಾಯಿಸಿದರು.
ದಲಿತರ ಹಣವನ್ನು ಎಟಿಎಂ ರೀತಿ ಚಲಾವಣೆ ಮಾಡಿದವರನ್ನು ಕೂಡಲೇ ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು.