ಎಸ್​ಐಆರ್ ಚರ್ಚೆಗೆ ಬಿಜೆಪಿಗೆ ಆಹ್ವಾನ SIR

SIR ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಾಗೃತ ಕರ್ನಾಟಕ ಸಂಘಟನೆ ಕಾರ್ಯಕಾರಿ ಸಮಿತಿ ಸದಸ್ಯ ಸಿ.ಜಿ. ಪಾಟೀಲ.
SIR ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಾಗೃತ ಕರ್ನಾಟಕ ಸಂಘಟನೆ ಕಾರ್ಯಕಾರಿ ಸಮಿತಿ ಸದಸ್ಯ ಸಿ.ಜಿ. ಪಾಟೀಲ.
Published on

ಪ್ರಮುಖ ಮುಖ್ಯಾಂಶಗಳು

  • ಜನರನ್ನು ಸೇರಿಸಿ ಈ ಕುರಿತು ಜಾಗೃತಿ ಮೂಡಿಸಲಾಗುವುದು.
  • ಸಾಮಾಜಿಕ ಜಾಲತಾಣದಲ್ಲಿ ನೇರ ಪ್ರಸಾರ.
  • ಬಿಜೆಪಿ ಬಹಿರಂಗವಾಗಿಯೇ ಸಮರ್ಥಿಸುತ್ತಿದೆ.
ಹುಬ್ಬಳ್ಳಿ :
ಬಹಿರಂಗ ಚರ್ಚೆಗೆ ಆಹ್ವಾನಿಸುವಂತೆ ಬೆಂಗಳೂರಿನ ಬಿಜೆಪಿ ರಾಜ್ಯ ಕಾರ್ಯಾಲಯಕ್ಕೆ ಭೇಟಿ ನೀಡಿ, ಆಹ್ವಾನ ಪತ್ರ ನೀಡಲಾಗಿದೆ ಎಂದು ಹೇಳಿದರು.
ಒಂದು ವೇಳೆ ಬಿಜೆಪಿ ಮುಖಂಡರು ಮುಕ್ತ ಚರ್ಚೆಗೆ ಬಾರದೇ ಇದ್ದರೆ, ಜನರನ್ನು ಸೇರಿಸಿ ಈ ಕುರಿತು ಜಾಗೃತಿ ಮೂಡಿಸಲಾಗುವುದು.
ಈಗಾಗಲೇ ಎಸ್​ಐಆರ್​ನಿಂದ ಆಗುವ ಸಮಸ್ಯೆಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಜಾಗೃತಿ ಮೂಡಿಸುವ ಕೆಲಸ ಆರಂಭಿಸಲಾಗಿದೆ ಎಂದರು.
ಈ ಚರ್ಚೆಯನ್ನು ಯಾವುದೇ ಪಕ್ಷಪಾತ ನಡೆಸಲು ಉದ್ದೇಶಿಸಲಾಗಿದೆ. ಹೀಗಾಗಿ, ಸಾಮಾಜಿಕ ಜಾಲತಾಣದಲ್ಲಿ ನೇರ ಪ್ರಸಾರ ಮಾಡಲು ಸಹ ವ್ಯವಸ್ಥೆ ಮಾಡಲಾಗಿದೆ. ಮತದಾರರ ಹಕ್ಕು ರಕ್ಷಿಸುವ ನಿಟ್ಟಿನಲ್ಲಿ ಈ ಚರ್ಚೆ ಹೆಚ್ಚು ಮಹತ್ವ ಪಡೆದುಕೊಂಡಿದೆ ಎಂದು ತಿಳಿಸಿದರು.
ಎಸ್​ಐಆರ್ ಕುರಿತು ಜನರಲ್ಲಿ ಆತಂಕ ಮೂಡಿದೆ. ಒಬ್ಬ ವ್ಯಕ್ತಿಗೆ ಒಂದು ಮತ ಎಂಬುದು ಪ್ರಜಾಪ್ರಭುತ್ವದ ಹಕ್ಕು. ಆದರೆ, ಇದೀಗ, ಮತದಾನದ ಹಕ್ಕು ಕಿತ್ತುಕೊಳ್ಳಲಾಗುತ್ತಿದೆ ಎಂಬ ಅಭಿಪ್ರಾಯ ಮೂಡುತ್ತಿದೆ ಎಂದು ಹೇಳಿದರು.
ಪ್ರಜಾಪ್ರಭುತ್ವವನ್ನೇ ಬುಡಮೇಲು ಮಾಡುತ್ತಿರುವ ಎಸ್​ಐಆರ್ ಅನ್ನು ಬಿಜೆಪಿ ಬಹಿರಂಗವಾಗಿಯೇ ಸಮರ್ಥಿಸುತ್ತಿದೆ. ಕರ್ನಾಟಕದಲ್ಲಿಯೂ ಎಸ್​ಐಆರ್ ಪ್ರಕ್ರಿಯೆ ಆರಂಭಗೊಳ್ಳುತ್ತಿದೆ. ಹೀಗಾಗಿ, ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದರು.
ಚಿಂತಾಮಣಿ ಸಿಂದಗಿ, ಲಲಿತಾ ಹೆಗಡೆ, ಶಶಿಧರ ವೆಂಕಟೇಶ ಹಾಗೂ ಇತರರು ಸುದ್ದಿಗೋಷ್ಠಿಯಲ್ಲಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net