police ಬಿಜೆಪಿ ಶಾಸಕರು, ಕಾರ್ಯಕರ್ತರು ಪೊಲೀಸ್ ವಶಕ್ಕೆ

ಕಾಂಗ್ರೆಸ್ ಸರ್ಕಾರದ ವಿರುದ್ಧ ಹುಬ್ಬಳ್ಳಿಯಲ್ಲಿ ಕಪು್ಪ ಬಟ್ಟೆ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು. ಶಾಸಕರಾದ ಮಹೇಶ ಟೆಂಗಿನಕಾಯಿ, ಅರವಿಂದ ಬೆಲ್ಲದ, ಎಂ.ಆರ್. ಪಾಟೀಲ, ಪ್ರಮುಖರಾದ ನಾರಾಯಣ ಜರತಾರಘರ, ಮಹೇಂದ್ರ ಕೌತಾಳ, ಪ್ರಭು ನವಲಗುಂದಮಠ ಹಾಗೂ ಇತರರಿದ್ದರು.  police
ಕಾಂಗ್ರೆಸ್ ಸರ್ಕಾರದ ವಿರುದ್ಧ ಹುಬ್ಬಳ್ಳಿಯಲ್ಲಿ ಕಪು್ಪ ಬಟ್ಟೆ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು. ಶಾಸಕರಾದ ಮಹೇಶ ಟೆಂಗಿನಕಾಯಿ, ಅರವಿಂದ ಬೆಲ್ಲದ, ಎಂ.ಆರ್. ಪಾಟೀಲ, ಪ್ರಮುಖರಾದ ನಾರಾಯಣ ಜರತಾರಘರ, ಮಹೇಂದ್ರ ಕೌತಾಳ, ಪ್ರಭು ನವಲಗುಂದಮಠ ಹಾಗೂ ಇತರರಿದ್ದರು. police
Published on

ಪ್ರಮುಖ ಮುಖ್ಯಾಂಶಗಳು

  • ಶಿಷ್ಟಾಚಾರ ಉಲ್ಲಂಘಿಸಿದ್ದ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಮಲಪಡೆ ಪ್ರತಿಭಟನೆ
ನಂತರ ಮೆರವಣಿಗೆ ಹೊರಟಿದ್ದ ಬಿಜೆಪಿ ಶಾಸಕರಾದ ಮಹೇಶ ಟೆಂಗಿನಕಾಯಿ, ಅರವಿಂದ ಬೆಲ್ಲದ, ಎಂ.ಆರ್. ಪಾಟೀಲ, ಪ್ರದೀಪ ಶೆಟ್ಟರ್ ಹಾಗೂ ಇನ್ನಿತರ ಪ್ರತಿಭಟನಾಕಾರರನ್ನು ಪೊಲೀಸರು (police) ವಶಕ್ಕೆ ತೆಗೆದುಕೊಂಡರು.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಸತಿ ಸಚಿವ ಜಮೀರ್ ಅಹ್ಮದ್, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಭಾವಚಿತ್ರಗಳನ್ನು ಹಿಡಿದ ಪ್ರತಿಭಟನಾಕಾರರು, ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗಿದರು.
ಮಂಟೂರ ರೋಡ್​ನಲ್ಲಿ ನಿರ್ವಿುಸಿರುವ ಮನೆಗಳಲ್ಲಿ ಹೆಚ್ಚಿನವುಗಳನ್ನು ಅಲ್ಪಸಂಖ್ಯಾತರಿಗೆ ನೀಡಲಾಗಿದೆ. ಬಡ ದಲಿತರನ್ನು ವಂಚಿಸಲಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.
ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ಬಡವರಿಗೆ ವಿತರಿಸಬೇಕಾದ ಮನೆಗಳಲ್ಲಿಯೂ ರಾಜ್ಯ ಕಾಂಗ್ರೆಸ್ ಸರ್ಕಾರ ತುಷ್ಟೀಕರಣ ಮಾಡುತ್ತಿದೆ. ಮನೆಗಳನ್ನು ವಿತರಿಸಿ, ಸುಮ್ಮನಾಗದೇ ಸೂರು ಪಡೆದುಕೊಂಡ ಪ್ರತಿಯೊಬ್ಬರಿಗೂ ಹಕ್ಕು ಪತ್ರ ವಿತರಿಸಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಮನೆಗಳ ನಿರ್ಮಾಣ ಆರಂಭಿಸಲಾಗಿತ್ತು. ಆದರೆ, ಆ ಸಮಯದಲ್ಲಿ ಮನೆಗಳ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳಲಿಲ್ಲ. ಹೀಗಾಗಿ, ಸಂಪೂರ್ಣ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ತನ್ನದೆಂದು ಬಿಂಬಿಸಿಕೊಳ್ಳುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದರು.
ಮುಂದಿನ ದಿನಗಳಲ್ಲಿ ಕಾಂಗ್ರೆಸ್​ನ ಇನ್ನಷ್ಟು ಭ್ರಷ್ಟಾಚಾರ ಹೊರಗೆಳೆಯಲಾಗುವುದು. ಕಾಂಗ್ರೆಸ್ ವಿರುದ್ಧದ ಹೋರಾಟ ಮುಂದುವರೆಸಲಾಗುವುದು ಎಂದು ಹೇಳಿದರು.
ಶಾಸಕ ಅರವಿಂದ ಬೆಲ್ಲದ ಮಾತನಾಡಿ, ಮಂಟೂರು ರಸ್ತೆಯಲ್ಲಿ ನಿರ್ವಿುಸಿರುವ ಮನೆಗಳ ವಿತರಣೆ ಸಮಾರಂಭದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಶಿಷ್ಟಾಚಾರ ಉಲ್ಲಂಘಿಸಿದೆ. ಈ ಮನೆಗಳ ನಿರ್ವಣಕ್ಕೆ ಕೇಂದ್ರದಿಂದ ಹೆಚ್ಚಿನ ಅನುದಾನ ಕೊಡಿಸಿರುವ ಸಚಿವ ಪ್ರಲ್ಹಾದ ಜೋಶಿ ಅವರನ್ನು ಆಹ್ವಾನಿಸಿಲ್ಲ. ಸ್ಥಳೀಯ ಶಾಶಕರಿಗೂ ಆಹ್ವಾನ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಾಂಗ್ರೆಸ್ ಅವನತಿಯತ್ತ ಸಾಗುತ್ತಿದೆ. ಮುಂದಿನ ಚುನಾವಣೆಯಲ್ಲಿ ಜನರು ಆ ಪಕ್ಷಕ್ಕೆ ತಕ್ಕ ಪಾಠ ಕಲಿಸುತ್ತಾರೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ಬಿಜೆಪಿ ಧಾರವಾಡ ಗ್ರಾಮೀಣ ಜಿಲ್ಲಾ ಅಧ್ಯಕ್ಷ ನಿಂಗಪ್ಪ ಸುತಗಟ್ಟಿ ಮಾತನಾಡಿದರು.
ಬಿಜೆಪಿ ಮಹಾನಗರ ಜಿಲ್ಲಾ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಪಾಲಿಕೆ ಸದಸ್ಯರಾದ ರಾಜಣ್ಣ ಕೊರವಿ, ಬೀರಪ್ಪ ಖಂಡೇಕಾರ, ರೂಪಾ ಶೆಟ್ಟಿ, ಚಂದ್ರಿಕಾ ಮೇಸ್ತ್ರಿ, ವೀಣಾ ಬರದ್ವಾಡ, ರಾಮಣ್ಣ ಬಡಿಗೇರ, ಪ್ರೀತಿ ಲದವಾ, ಪ್ರಮುಖರಾದ ಲಿಂಗರಾಜ ಪಾಟೀಲ, ಮಹೇಂದ್ರ ಕೌತಾಳ, ಪ್ರಭು ನವಲಗುಂದಮಠ, ವೆಂಕಟೇಶ ಕಾಟವೆ, ಡಾ. ರವೀದ್ರ ಯಲಿಕಾನ, ಸವಿತಾ ಚವ್ಹಾಣ, ನಾಗರತ್ನಾ ಬಳಳಾರಿ, ಅಕ್ಕಮ್ಮ ಹೆಗಡೆ, ಸಂತೋಷ ಅರಕೇರಿ, ಪ್ರಕಾಶ ಕ್ಯಾರಕಟ್ಟಿ, ಹನಮಂತ ಹರಿವಾಣ, ಶಶಿಕಾಂತ ಬಿಜವಾಡ, ನಾರಾಯಣ ಜರತಾರಘರ, ಮಂಜುನಾಥ ಕಾಟಕರ, ಕೃಷ್ಣಾ ಗಂಡಗಾಳೇಕರ ಹಾಗೂ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net