ಧಾರವಾಡ ಫೈರಿಂಗ್ ವಿರುದ್ಧ ಬಿಜೆಪಿ ಪ್ರತಿಭಟನೆ firing

firing ಧಾರವಾಡ ಫೈರಿಂಗ್ ಘಟನೆ ಖಂಡಿಸಿ ಹಾಗೂ ಪೊಲೀಸ್ ಆಯುಕ್ತರ ವರ್ಗಾವಣೆಗೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು.
firing ಧಾರವಾಡ ಫೈರಿಂಗ್ ಘಟನೆ ಖಂಡಿಸಿ ಹಾಗೂ ಪೊಲೀಸ್ ಆಯುಕ್ತರ ವರ್ಗಾವಣೆಗೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಪೊಲೀಸ್ ಆಯುಕ್ತರ ವರ್ಗಾವಣೆಗೆ ಒತ್ತಾಯಿಸಿದ ಪ್ರತಿಭಟನಾಕಾರರು
  • ಧಾರವಾಡದಲ್ಲಿ ನಡೆದ ಫೈರಿಂಗ್ ಘಟನೆ ಇಡೀ ದೇಶಕ್ಕೆ ಗೊತ್ತಿದೆ.
  • ಸಾಕ್ಷಿ ದೊರೆತರೂ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ
ಹುಬ್ಬಳ್ಳಿ:
ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ. ಪರಮೇಶ್ವರ ಹಾಗೂ ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಅವರ ಭಾವಚಿತ್ರ ದಹಿಸಿ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಕಾರ್ಯಕರ್ತರು, ಪೊಲೀಸ್ ಆಯುಕ್ತರನ್ನು ಕೂಡಲೇ ವರ್ಗಾವಣೆ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಮಹೇಶ ಟೆಂಗಿನಕಾಯಿ, ಭೂ ಮಾಫಿಯಾ ಸೇರಿದಂತೆ ಹಲವಾರು ಅಕ್ರಮ ಚಟುವಟಿಕೆಗಳು ಅವಳಿ ನಗರದಲ್ಲಿ ನಡೆಯುತ್ತಿದ್ದರೂ, ಅವುಗಳನ್ನು ತಡೆಯಲು ಅಗತ್ಯ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು.
ಧಾರವಾಡದಲ್ಲಿ ನಡೆದ ಫೈರಿಂಗ್ ಘಟನೆ ಇಡೀ ದೇಶಕ್ಕೆ ಗೊತ್ತಿದೆ. ಆದರೆ, ಪೊಲೀಸ್ ಆಯುಕ್ತರು ಮಾತ್ರ ಘಟನೆ ಬಗ್ಗೆ ತಿಳಿದುಕೊಳ್ಳುತ್ತೇವೆ, ತನಿಖೆ ನಡೆಸುತ್ತೇವೆ ಎಂಬ ಹಾರಿಕೆ ಉತ್ತರ ನೀಡುತ್ತಿದ್ದಾರೆ. ಸಾಕ್ಷಿ ದೊರೆತರೂ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ ಎಂದು ದೂರಿದರು.
ಅವಳಿ ನಗರದಲ್ಲಿ ನಡೆದಿರುವ ಬಹುತೇಕ ಪ್ರಕರಣಗಳ ತನಿಖೆಯನ್ನು ಸಿಸಿಬಿ ನಿರ್ವಹಿಸುತ್ತಿದೆ. ಈ ಪ್ರಕರಣಗಳನ್ನು ಸಿಐಡಿಗೆ ಹಸ್ತಾಂತರಿಸಬೇಕು ಎಂದು ಒತ್ತಾಯಿಸಿದರು.
ಲಿಂಗರಾಜ ಪಾಟೀಲ ಹಾಗೂ ನಾರಾಯಣ ಜರತಾರಘರ ಮಾತನಾಡಿ, ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಸರಿಯಾಗಿ ಕರ್ತವ್ಯ ನಿರ್ವಹಿಸದ ಪೊಲೀಸ್ ಆಯುಕ್ತರನ್ನು ವರ್ಗಾವಣೆಗೊಳಿಸಬೇಕು. ಆ ಸ್ಥಳಕ್ಕೆ ದಕ್ಷ ಪೊಲೀಸ್ ಅಧಿಕಾರಿಯನ್ನು ನೇಮಿಸಬೇಕು ಎಂದು ಸರ್ಕಾರವನ್ನು ಒತ್ತಾಯ ಮಾಡಿದರು.
ಬಿಜೆಪಿ ಪ್ರಮುಖರಾದ ವಸಂತ ನಾಡಜೋಶಿ, ಶಿವು ಮೆಣಸಿನಕಾಯಿ, ರೂಪಾ ಶೆಟ್ಟಿ, ಮೀನಾಕ್ಷಿ ವಂಟಮುರಿ, ವೀಣಾ ಭರದ್ವಾಡ, ವೆಂಕಟೇಶ ಕಾಟವೆ, ಭೀರಪ್ಪ ಖಂಡೇಕರ, ಸೀಮಾ ಲದವಾ, ಪ್ರೀತಂ ಅರಕೇರಿ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net