ಬಿಜೆಪಿ ಕಾರ್ಯಕರ್ತೆಯರು ಪೊಲೀಸ ವಶಕ್ಕೆ Bjp

Bjp ಹುಬ್ಬಳ್ಳಿಯ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರನ್ನು ಪೊಲೀಸರು ಬಂಧಿಸಿದರು.
Bjp ಹುಬ್ಬಳ್ಳಿಯ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರನ್ನು ಪೊಲೀಸರು ಬಂಧಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದ ಪ್ರತಿಭಟನಾಕಾರರು
  • ಪ್ರತಿಭಟನೆ ಹತ್ತಿಕ್ಕಲು ಸರ್ಕಾರ ಯತ್ನಿಸುತ್ತಿದೆ ಎಂದು ಆರೋಪಿಸಿದ ಕಾರ್ಯಕರ್ತೆಯರು
  • ಕಾಂಗ್ರೆಸ್ ಸರ್ಕಾರದ ವಿರುದ್ಧವೂ ಘೋಷಣೆ ಕೂಗಿದರು.
ಹುಬ್ಬಳ್ಳಿ :
ಬಿಜೆಪಿ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸೀಮಾ ಲದ್ವಾ ನೇತೃತ್ವದಲ್ಲಿ ಮಹಿಳಾ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದರು. 
ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಸಂಸದರಾದ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ಸುಪ್ರಿಯಾ ಸುಳೆ ಅವರ ಭಾವಚಿತ್ರ ಹಿಡಿದು, ಅರವಿಂದ ನಗರದ ಬಿಜೆಪಿ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿದ ಮಹಿಳಾ ಕಾರ್ಯಕರ್ತೆಯರು, ಕಾಂಗ್ರೆಸ್ ಮುಖಂಡರ ವಿರುದ್ಧ ಘೋಷಣೆ ಕೂಗಿದರು. 
ಕಾಂಗ್ರೆಸ್ ಕಚೇರಿಯತ್ತ ಹೊರಟಿದ್ದ ಪ್ರತಿಭಟನಾಕಾರರನ್ನು ಪೊಲೀಸರು ಮಾರ್ಗ ಮಧ್ಯೆಯೇ ಬ್ಯಾರಿಕೇಡ್ ಹಾಕಿ ತಡೆದರು. ಈ ಸಂದರ್ಭದಲ್ಲಿ ಪೊಲೀಸರು ಹಾಗೂ ಮಹಿಳಾ ಕಾರ್ಯಕರ್ತೆಯರ ಮಧ್ಯೆ ವಾಗ್ವಾದ ನಡೆಯಿತು.
ಪ್ರತಿಭಟನೆ ಹತ್ತಿಕ್ಕಲು ಸರ್ಕಾರ ಯತ್ನಿಸುತ್ತಿದೆ ಎಂದು ಆರೋಪಿಸಿದ ಕಾರ್ಯಕರ್ತೆಯರು, ಕಾಂಗ್ರೆಸ್ ಸರ್ಕಾರದ ವಿರುದ್ಧವೂ ಘೋಷಣೆ ಕೂಗಿದರು. 
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಧಾರವಾಡ ಲೋಕಸಭೆ ಕ್ಷೇತ್ರದಲ್ಲಿ ಅತ್ಯಾಧುನಿಕ ಸೌಲಭ್ಯ ಒದಗಿಸಿದ್ದಾರೆ. ಅವರ ಏಳಿಗೆ ಸಹಿಸದ ಕಾಂಗ್ರೆಸ್ ಮುಖಂಡರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಮಹಿಳಾ ಮೋರ್ಚಾ ಅಧ್ಯಕ್ಷ ಸೀಮಾ ಲದ್ವಾ, ಮಾಜಿ ಮೇಯರ್ ಜ್ಯೋತಿ ಪಾಟೀಲ ಹಾಗೂ ಮತ್ತಿತರರು ಆರೋಪಿಸಿದರು. 
ಕಾಂಗ್ರೆಸ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಅವಕಾಶ ಕೊಡಬೇಕೆಂದು ಕಾರ್ಯಕರ್ತೆಯರು ಪಟ್ಟು ಹಿಡಿದರು. ಪ್ರತಿಭಟನಾಕಾರರನ್ನು ಪೊಲೀಸರು ಪೊಲೀಸ್ ಜೀಪ್​ನಲ್ಲಿ ಹತ್ತಿಸುತ್ತಿದ್ದಂತೆಯೇ ಆಕ್ರೋಶಗೊಂಡ ಕಾರ್ಯಕರ್ತೆಯರು ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಸುಪ್ರಿಯಾ ಸುಳೆ ಅವರ ಭಾವಚಿತ್ರಗಳನ್ನು ಹರಿದರು. 
ಭಾವಚಿತ್ರಗಳನ್ನು ಒತ್ತಾಯವಾಗಿ ಕಸಿದುಕೊಳ್ಳಲು ಪೊಲೀಸರು ಪ್ರಯತ್ನಿಸಿದ ಘಟನೆಯೂ ನಡೆಯಿತು. 
ಪಾಲಿಕೆ ಸದಸ್ಯೆಯರಾದ ಉಮಾ ಮುಕುಂದ, ರೂಪ ಶೆಟ್ಟಿ, ವೀಣಾ ಬರದ್ವಾಡ, ಚಂದ್ರಿಕಾ ಮಿಸ್ತ್ರಿ, ಶಿವು ಮೆಣಸಿನಕಾಯಿ, ಕಾರ್ಯಕರ್ತರಾದ ಅಕ್ಕಮಹಾದೇವಿ ಹೆಗಡೆ, ಸುಮಾ ಶಿವನಗೌಡ್ರ, ಸವಿತಾ ಚವ್ಹಾಣ ಹಾಗೂ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. 
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net