ಪೊಲೀಸ್ ವಶಕ್ಕೆ ಬಿಜೆಪಿ ಕಾರ್ಯಕರ್ತರು bjp

bjp ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಮಾರ್ಗ ಮಧ್ಯೆ ಬ್ಯಾರಿಕೇಡ್ ಹಾಕಿ ತಡೆದರು.
bjp ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಮಾರ್ಗ ಮಧ್ಯೆ ಬ್ಯಾರಿಕೇಡ್ ಹಾಕಿ ತಡೆದರು.
Published on

ಪ್ರಮುಖ ಮುಖ್ಯಾಂಶಗಳು

  • ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಮಲ ಪಡೆ
  • ರಾಜ್ಯದಲ್ಲಿನ ಭ್ರಷ್ಟಾಚಾರ ಕಾಂಗ್ರೆಸ್ ಮುಖಂಡರಿಗೆ ಕಾಣದಾಗಿದೆ.
  • ಕಾಂಗ್ರೆಸ್ ಸರ್ಕಾರ ಪ್ರತಿಭಟನೆ ಹತ್ತಿಕ್ಕುವ ಮೂಲಕ ಪ್ರಜಾಪ್ರಭುತ್ವ ವಿರೋಧಿ ನಡೆ ಅನುಸರಿಸುತ್ತಿದೆ.

ಹುಬ್ಬಳ್ಳಿ :

bjp ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧ ಶನಿವಾರ ಪ್ರತಿಭಟನೆ ನಡೆಸಿ ಕಾರವಾರ ರಸ್ತೆಯಲ್ಲಿನ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಮಹಾನಗರ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆಗೊಳಿಸಿದರು.

ಅರವಿಂದ ನಗರದ ಬಿಜೆಪಿ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆಯೊಂದಿಗೆ ಕಾಂಗ್ರೆಸ್ ಕಚೇರಿಯತ್ತ ತೆರಳುತ್ತಿದ್ದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಮಾರ್ಗ ಮಧ್ಯೆ ತಡೆದರು.

ಈ ಸಂದರ್ಭದಲ್ಲಿ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ಕಾಂಗ್ರೆಸ್ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿದರು.

ಸಚಿವ ಪ್ರಲ್ಹಾದ ಜೋಶಿ ಅವರು ತಮಗೆ ವಹಿಸಲಾದ ಎಲ್ಲ ಸಚಿವ ಸಂಪುಟ ಖಾತೆಗಳಲ್ಲಿ ಅತ್ಯುತ್ತಮ ಕೆಲಸ ನಿರ್ವಹಿಸಿದ್ದಾರೆ. ಅವರು ಮಾಡಿರುವ ಕಾರ್ಯಗಳನ್ನು ಸಹಿಸದ ಕಾಂಗ್ರೆಸ್ ಮುಖಂಡರು, ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.

ವಿಧಾನ ಪರಿಷತ್ ಸದಸ್ಯ ಲಿಂಗರಾಜ ಪಾಟೀಲ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ನಡೆಸುವ ಹಕ್ಕು ಇದೆ. ಆದರೆ, ಕಾಂಗ್ರೆಸ್ ಸರ್ಕಾರ ಪ್ರತಿಭಟನೆ ಹತ್ತಿಕ್ಕುವ ಮೂಲಕ ಪ್ರಜಾಪ್ರಭುತ್ವ ವಿರೋಧಿ ನಡೆ ಅನುಸರಿಸುತ್ತಿದೆ.

ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ. ಕೆಪಿಎಸ್​ಸಿ ನೇಮಕಾತಿ ಸೇರಿ ಹಲವಾರು ಹಗರಣಗಳನ್ನು ಕಾಂಗ್ರೆಸ್ ಸರ್ಕಾರ ಎದುರಿಸುತ್ತಿದೆ.

ರಾಜ್ಯದಲ್ಲಿನ ಭ್ರಷ್ಟಾಚಾರ ಕಾಂಗ್ರೆಸ್ ಮುಖಂಡರಿಗೆ ಕಾಣದಾಗಿದೆ. ಕಣ್ಣಿದ್ದೂ ಕುರುಡರಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.

ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರೀತಂ ಅರಕೇರಿ ಮಾತನಾಡಿ, ಸಚಿವ ಪ್ರಲ್ಹಾದ ಜೋಶಿ ಅವರು ಧಾರವಾಡ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ.

ಕೇಂದ್ರ ಸರ್ಕಾರದಲ್ಲಿ ಇದುವರೆಗೆ ನಿಭಾಯಿಸಿದ ಖಾತೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಅವರು ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಸ್ಥಾನಮಾನಗಳನ್ನು ಅಲಂಕರಿಸಬಾರದೆಂಬ ದುರುದ್ದೇಶದಿಂದ ಕಾಂಗ್ರೆಸ್ ಸಂಸದರು ಇಲ್ಲ ಸಲ್ಲದ ಆಪಾದನೆ ಮಾಡುತ್ತ, ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ ಎಂದರು.

ಮಹಾನಗರ ಪಾಲಿಕೆ ಸಭಾ ನಾಯಕ ಶಿವು ಮೆಣಸಿನಕಾಯಿ, ಪ್ರಮುಖರಾದ ನಾರಾಯಣ ಜರತಾರಘರ, ಮಂಜುನಾಥ ಕಾಟಕರ, ಶಿವಯ್ಯಾ ಹಿರೇಮಠ, ವೆಂಕಟೇಶ ಕಾಟವೆ, ಮಂಜು ಹೆಬಸೂರ, ಈಶ್ವರಗೌಡ ಪಾಟೀಲ, ರಾಜು ಕೋರ್ಯುಣಮಠ, ಪ್ರಿಯಾಂಕಾ ಬದ್ದಿ, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net