ವಿದ್ಯಾನಗರದ ಬಿವಿಬಿ ಕಾಲೇಜು ಆವರಣದಲ್ಲಿ ವಂದೇ ಮಾತರಂ ಗೀತೆ ಹಾಡುವ ಮೂಲಕ ಉದ್ಯಮಿ ಶಂಕರಣ್ಣ ಮುನವಳ್ಳಿ ಚಾಲನೆ ನೀಡಿದರು.
ತಿರಂಗಾ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಕಾರ್ಯಕರ್ತರು, ಸಾರ್ವಜನಿಕರು, ವಿದ್ಯಾರ್ಥಿಗಳು ಮಾರ್ಗದುದ್ದಕ್ಕೂ ತ್ರಿವರ್ಣ ಧ್ವಜ ಹಿಡಿದು, ಸಂಚರಿಸಿದರು.
500 ಮೀಟರ್ ಉದ್ದದ ಬೃಹತ್ ತಿರಂಗಾ ಧ್ವಜವು ಯಾತ್ರೆಯ ಆಕರ್ಷಣೆಯ ಕೇಂದ್ರವಾಗಿತ್ತು.
ದೇಶಭಕ್ತಿ ಗೀತೆಗಳು ಮೊಳಗಿದವು. ಭಾರತ ಮಾತಾ ಕೀ ಜೈ ಘೋಷಣೆಗಳು ಕೇಳಿಬಂದವು. ತೋಳನಕೆರೆವರೆಗೆ ನಡೆದ ತಿರಂಗಾ ಯಾತ್ರೆಯ ಮಾರ್ಗದುದ್ದಕ್ಕೂ ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದ ಜನರು ಸಹ ಜಯ ಘೋಷಣೆಗಳನ್ನು ಹಾಕುತ್ತಿದ್ದರು. ಅನೇಕರು ದೇಶಭಕ್ತಿ ಗೀತೆಗಳಿಗೆ ನೃತ್ಯ ಮಾಡಿದರು.
ಮೇಯರ್ ದುರ್ಗಮ್ಮ ಬೆಜವಾಡ, ಮಾಜಿ ಶಾಸಕ ಅಶೋಕ ಕಾಟವೆ, ವಿಧಾನ ಪರಿಷತ್ ಮಾಜಿ ಸದಸ್ಯ ನಾಗರಾಜ ಛಬ್ಬಿ, ಪಾಲಿಕೆ ಸದಸ್ಯರಾದ ಬೀರಪ್ಪ ಖಂಡೇಕಾರ, ಶಿವು ಮೆಣಸಿನಕಾಯಿ, ರೂಪಾ ಶೆಟ್ಟಿ ಇತರರು ಪಾಲ್ಗೊಂಡಿದ್ದರು.