blood donation ಐಬಿಎಂಆರ್​ನಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ

blood donation ಹುಬ್ಬಳ್ಳಿಯ ಐಬಿಎಂಆರ್​ ಕಾಲೇಜಿನಲ್ಲಿ ವೈದ್ಯರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಡಾ. ಎಚ್​.ವಿ. ಬೆಳಗಲಿ, ಪ್ರಶಾಂತ ಕುರಹಟ್ಟಿ, ವೈಶಾಲಿ, ಸಮೀರ್​ ಗುಡಿ, ಅಣ್ಣಪ್ಪ ಕೊರವರ ಇತರರು ಪಾಲ್ಗೊಂಡಿದ್ದರು.
blood donation ಹುಬ್ಬಳ್ಳಿಯ ಐಬಿಎಂಆರ್​ ಕಾಲೇಜಿನಲ್ಲಿ ವೈದ್ಯರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಡಾ. ಎಚ್​.ವಿ. ಬೆಳಗಲಿ, ಪ್ರಶಾಂತ ಕುರಹಟ್ಟಿ, ವೈಶಾಲಿ, ಸಮೀರ್​ ಗುಡಿ, ಅಣ್ಣಪ್ಪ ಕೊರವರ ಇತರರು ಪಾಲ್ಗೊಂಡಿದ್ದರು.
Published on
ಹುಬ್ಬಳ್ಳಿ: blood donation ಐಬಿಎಂಆರ್​ ಗ್ರೂಪ್​ ಆಫ್​ ಇನ್​ಸ್ಟಿಟ್ಯೂಷನ್ಸ್​, ರೋಟರಿ ಕ್ಲಬ್​ ಎಲೈಟ್​ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ವೈದ್ಯರ ದಿನದ ಅಂಗವಾಗಿ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಐಬಿಎಂಆರ್​ ಕಾಲೇಜಿನಲ್ಲಿ ಆಯೋಜಿಸಲಾಯಿತು.
ರಕ್ತದಾನ ಶಿಬಿರದಲ್ಲಿ ವೈದ್ಯರು, ಉಪನ್ಯಾಸಕರು, ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ರೋಟರಿ ಕ್ಲಬ್​ ಪದಾಧಿಕಾರಿಗಳು ಉತ್ಸಾಹದಿಂದ ಭಾಗವಹಿಸಿ ರಕ್ತದಾನ ಮಾಡಿ ಸಾಮಾಜಿಕ ಕಳಕಳಿ ಮೆರೆದರು.
ಮಾನವೀಯ ಮೌಲ್ಯಗಳನ್ನು ಉತ್ತೇಜಿಸುವ ಹಾಗೂ ಸಮಾಜದಲ್ಲಿ ರಕ್ತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸುವಲ್ಲಿ ಕಾರ್ಯಕ್ರಮ ಯಶಸ್ವಿಯಾಯಿತು.
ಕರ್ನಾಟಕ ಕಾನೂನು ವಿಶ್ವವಿದ್ಯಾಲಯ ಮಾಜಿ ಸಿಂಡಿಕೇಟ್​ ಸದಸ್ಯ ಡಾ. ಎಚ್​.ವಿ. ಬೆಳಗಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರಕ್ತದಾನವು ಜೀವ ಉಳಿಸುವ ಶ್ರೇಷ್ಠ ಮಾನವೀಯ ಸೇವೆಯಾಗಿದ್ದು, ಯುವಜನತೆ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಹೇಳಿದರು.
ರೋಟರಿ ಕ್ಲಬ್​ ಎಲೈಟ್​ ಅಧ್ಯಕ್ಷ ಪ್ರಶಾಂತ್​ ಕುರಹಟ್ಟಿ, ಐಬಿಎಂಆರ್​ ಕಲಾ ಹಾಗೂ ವಾಣಿಜ್ಯ ಪದವಿ ಮಹಾವಿದ್ಯಾಲಯ ಪ್ರಾಚಾರ್ಯ ವೈಶಾಲಿ ಹಾಗೂ ಪ್ರಮುಖರಾದ ಸಮೀರ್​ ಗುಡಿ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net