Bright ಬ್ರೖೆಟ್ ಬಿಜಿನೆಸ್ ಸ್ಕೂಲ್ ಪದವಿ ಪ್ರದಾನ

Bright ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಬ್ರೖೆಟ್ ಬಿಜಿನೆಸ್ ಸ್ಕೂಲ್ ನಿರ್ದೇಶಕ ಡಾ. ಪ್ರಸಾದ ರೂಡಗಿ,.
Bright ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಬ್ರೖೆಟ್ ಬಿಜಿನೆಸ್ ಸ್ಕೂಲ್ ನಿರ್ದೇಶಕ ಡಾ. ಪ್ರಸಾದ ರೂಡಗಿ,.
Published on

ಪ್ರಮುಖ ಮುಖ್ಯಾಂಶಗಳು

  • ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಮತ್ತು ಪ್ರಮಾಣ ಪತ್ರ ಕೋರ್ಸ್​.
  • ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ, ಪದವಿ ಪ್ರಮಾಣ ಪತ್ರಗಳನ್ನು ಪ್ರದಾನ ಮಾಡಲಾಗುವುದು.
  • ನಾಲ್ವರು ವಿದ್ಯಾರ್ಥಿಗಳು ಚಿನ್ನದ ಪದಕ ಹಾಗೂ ನಾಲ್ವರು ವಿದ್ಯಾರ್ಥಿಗಳು ಬೆಳ್ಳಿ ಪದಕ ಪಡೆಯಲಿದ್ದಾರೆ
ಹುಬ್ಬಳ್ಳಿ :
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದ ಬ್ರೖೆಟ್ ಬಿಜಿನೆಸ್ ಸ್ಕೂಲ್ ನಿರ್ದೇಶಕ ಡಾ. ಪ್ರಸಾದ ರೂಡಗಿ, ಒಟ್ಟು 120 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ನಾಲ್ವರು ವಿದ್ಯಾರ್ಥಿಗಳು ಚಿನ್ನದ ಪದಕ ಹಾಗೂ ನಾಲ್ವರು ವಿದ್ಯಾರ್ಥಿಗಳು ಬೆಳ್ಳಿ ಪದಕ ಪಡೆಯಲಿದ್ದಾರೆ ಎಂದು ತಿಳಿಸಿದರು.
ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸಿ.ಎಂ. ತ್ಯಾಗರಾಜ ಹಾಗೂ ಕರ್ನಾಟಕ ಕನ್ವೇಯರ್ಸ್ ಆಂಡ್ ಸಿಸ್ಟಮ್ಸ್​ನ ವ್ಯವಸ್ಥಾಪಕ ನಿರ್ದೇಶಕ ಎಂ.ವಿ. ಕರಮರಿ ಅತಿಥಿಗಳಾಗಿ ಪಾಲ್ಗೊಳ್ಳುವರು. ಬ್ರೖೆಟ್ ಬಿಜಿನೆಸ್ ಸ್ಕೂಲ್ ಅಧ್ಯಕ್ಷ ಪ್ರೊ. ಗುರುನಾಥ ಹಳ್ಯಾಳ ಅಧ್ಯಕ್ಷತೆ ವಹಿಸುವರು.
ಶೈಕ್ಷಣಿಕ ಹಾಗೂ ಪಠ್ಯೇತರ ಸಾಧನೆಗಳನ್ನು ಗುರುತಿಸಿ, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ರತ್ನ, ಚಿನ್ನ ಹಾಗೂ ಬೆಳ್ಳಿ ಪದಕಗಳು, ಕ್ರೀಡಾ ಸಾಧನೆ, ಯೂನಿವರ್ಸಿಟಿ ಬ್ಲೂ, ಅತ್ಯುತ್ತಮ ಹಾಜರಾತಿ, ಪಿಜಿ-ಸಿಇಟಿ ಟಾಪರ್, ಸಮಿತಿ ನಾಯಕತ್ವ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಹಾಗೂ ಪದವಿ ಪ್ರಮಾಣ ಪತ್ರಗಳನ್ನು ಪ್ರದಾನ ಮಾಡಲಾಗುವುದು ಎಂದು ಹೇಳಿದರು.
ಉದ್ಯೋಗ ಮಾರುಕಟ್ಟೆಯಲ್ಲಿ ಹೆಚ್ಚುವರಿ ಕೌಶಲ ಹಾಗೂ ಪ್ರಮಾಣ ಪತ್ರಗಳನ್ನು ಹೊಂದಿರುವ ವಿದ್ಯಾರ್ಥಿಗಳಿಗೆ ಹೆಚ್ಚು ಆದ್ಯತೆ ದೊರೆಯುತ್ತಿದೆ. ಹೀಗಾಗಿ, ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಮತ್ತು ಪ್ರಮಾಣ ಪತ್ರ ಕೋರ್ಸ್​ಗಳನ್ನು ನೀಡಲಾಗುತ್ತಿದೆ ಎಂದರು.
ಪ್ಲೇಸ್​ವೆುಂಟ್ ಸಹಾಯಕ್ಕಾಗಿ ನೋಂದಾಯಿಸಿರುವ 109 ವಿದ್ಯಾರ್ಥಿಗಳಲ್ಲಿ 92 ವಿದ್ಯಾರ್ಥಿಗಳಿಗೆ (ಶೇ. 84) ದೇಶದ ಪ್ರತಿಷ್ಠಿತ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಕಂಪನಿಗಳಲ್ಲಿ ಉದ್ಯೋಗ ದೊರೆತಿದ್ದಾಗಿ ಹೇಳಿದರು.
ಕೆಲ ವಿದ್ಯಾರ್ಥಿಗಳು ಸ್ವಂತ ಉದ್ಯಮ ಹಾಗೂ ಕುಟುಂಬದ ವ್ಯವಹಾರ ಮುಂದುವರೆಸುವ ಆಸಕ್ತಿ ಹೊಂದಿದ್ದು, ಅವರಿಗೆ ಸೂಕ್ತ ಮಾರ್ಗದರ್ಶನವನ್ನು ಸಂಸ್ಥೆ ನೀಡಿದೆ ಎಂದರು.
ಡಾ. ಎಸ್.ಬಿ. ಲಕ್ಕನಗೌಡರ ಹಾಗೂ ಯೋಗೇಶ ಕುಮಾರ ಸುದ್ದಿಗೋಷ್ಠಿಯಲ್ಲಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net