ಮಲ್ಲಯ್ಯ ಹಾಗೂ ಆತನ ತಮ್ಮ ಶ್ರೀಕಾಂತ ಒಂದೇ ಮನೆಯಲ್ಲಿ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಮನೆಯ ದಾರಿ ವಿಚಾರಕ್ಕೆ ಸಂಬಂಧಿಸಿ ಇಬ್ಬರ ಮಧ್ಯೆ ಆಗಾಗ ಜಗಳ ನಡೆಯುತ್ತಿತ್ತು. ಸೋಮವಾರ ಸಂಜೆ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಜಗಳ ನಡೆದಿದೆ. ಅಣ್ಣ ಮಲ್ಲಯ್ಯ ಮೊದಲು ಶ್ರೀಕಾಂತನ ಮೇಲೆ ಹಲ್ಲೆ ಮಾಡಿದ್ದಾನೆ. ಇದರಿಂದ ರೊಚ್ಚಿಗೆದ್ದ ಶ್ರೀಕಾಂತ ಅದೇ ಚಾಕು ಕಸಿದುಕೊಂಡು ಮಲ್ಲಯ್ಯನಿಗೆ ಇರಿದು ಪರಾರಿಯಾಗಿದ್ದಾನೆ. ತೀವ್ರ ಗಾಯಗೊಂಡ ಮಲ್ಲಯ್ಯ ಹುಬ್ಬಳ್ಳಿಯ ಕೆಎಂಸಿಆರ್ಐ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಮತ್ತು ಪೊಲೀಸ್ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.