ಪ್ರತಿಭಟನೆಯಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ನೆಹರು ಪಾಟೀಲ, ಶಿವಾನಂದ ಮುತ್ತಣ್ಣವರ, ರಮೇಶ ಕೊಪ್ಪದ, ನಗರ ಘಟಕದ ಅಧ್ಯಕ್ಷರು ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡು ತಮ್ಮ ನೆಚ್ಚಿನ ನಾಯಕರಿಗೆ ಮಂತ್ರಿಗಿರಿ ನೀಡುವಂತೆ ಘೋಷಣೆ ಕೂಗಿದರು. ಮಲ್ಲಿಕಾರ್ಜುನ ಕಿರೇಸೂರ, ಯಲ್ಲಪ್ಪಗೌಡ ಪಾಟೀಲ, ಸಿದ್ದಲಿಂಗಪ್ಪ ಕರೆಮ್ಮನವರ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.