ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರ್​

ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರ್​
ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರ್​
Published on
ಧಾರವಾಡ: ಇಲ್ಲಿನ ಬೈಪಾಸ್​ನಲ್ಲಿ ತಾಂತ್ರಿಕ ದೋಷದಿಂದಾಗಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಕಾರು ಸಂರ್ಪೂಣ ಸುಟ್ಟು ಭಸ್ಮವಾದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದ ಪ್ರಯಾಣಿಕರು ಕೆಳಗೆ ಇಳಿದಿದ್ದರಿಂದ ಅದೃಷ್ಟವಶಾತ್​ ಅನಾಹುತ ತಪ್ಪಿದೆ.
ಹುಬ್ಬಳ್ಳಿಯ ಮೊಹ್ಮದ್​ಆಸೀ್​ ಶೇಖಸನದಿ ಎಂಬುವರ ಕಾರ್​ ಇದಾಗಿದ್ದು, ಹುಬ್ಬಳ್ಳಿಯಿಂದ ಬೆಳಗಾವಿ ಕಡೆಗೆ ಹೋಗುತ್ತಿದ್ದರು. ಇಂಜಿನ್​ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಇಂಜಿನ್​ನಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಚಾಲಕ ಕಾರನ್ನು ಕೂಡಲೇ ರಸ್ತೆ ಬದಿ ನಿಲ್ಲಿಸಿದ್ದಾನೆ. ಪ್ರಯಾಣಿಕರು ಕೆಳಗಿಳಿಯುತ್ತಿದ್ದಂತೆ ಬೆಂಕಿ ಇಡೀ ಕಾರನ್ನು ಆವರಿಸಿಕೊಂಡು ಆಹುತಿಯಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net