ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ BJP

BJP ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ 12 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಹುಬ್ಬಳ್ಳಿಯ ಮೂರುಸಾವಿರ ಮಠದಲ್ಲಿ ಪೂಜೆ ಸಲ್ಲಿಸಿದರು.
BJP ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ 12 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಹುಬ್ಬಳ್ಳಿಯ ಮೂರುಸಾವಿರ ಮಠದಲ್ಲಿ ಪೂಜೆ ಸಲ್ಲಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಜನಸೇವೆ ಸಾಧನವಾಗಿ ಬಳಸಿದ ನಾಯಕ ನರೇಂದ್ರ ಮೋದಿ
  • ಮಾಜಿ ಪ್ರಧಾನಿ ದಿ. ಜವಾಹರಲಾಲ ನೆಹರು ಅವರ ದಾಖಲೆ ಹಿಂದಿಕ್ಕಿದ್ದಾರೆ
  • ದೇಶ ಸೇವೆಗೆ ಸಮರ್ಪಿಸಿಕೊಂಡ ರಾಜಕೀಯ ಸನ್ಯಾಸಿ ಮೋದಿ
ಹುಬ್ಬಳ್ಳಿ :
ಪೂರ್ವ ಕ್ಷೇತ್ರದ ಅಧ್ಯಕ್ಷ ಮಂಜುನಾಥ ಕಾಟಕರ ನೇತೃತ್ವದಲ್ಲಿ ಮೂರುಸಾವಿರ ಮಠದಲ್ಲಿ ಶ್ರೀ ಗುರುಸಿದ್ದೇಶ್ವರ ಕತೃ ಗದ್ದುಗೆಗೆ ಹಾಗೂ ನಾಗಶೆಟ್ಟಿಕೊಪ್ಪದ ಹನುಮಂತ ದೇವರ ದೇವಸ್ಥಾನದಲ್ಲಿ ಸೆಂಟ್ರಲ್ ಕ್ಷೇತ್ರದ ಅಧ್ಯಕ್ಷ ರಾಜು ಕಾಳೆ ನೇತೃತ್ವದಲ್ಲಿ ಪೂಜೆ ಸಲ್ಲಿಸಲಾಯಿತು.
ಮೂರುಸಾವಿರ ಮಠದಲ್ಲಿ ಮಾತನಾಡಿದ ಶ್ರೀಮಠದ ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ, ಅಧಿಕಾರವನ್ನು ವೈಯಕ್ತಕ ಲಾಭಕ್ಕಾಗಿ ಬಳಸದೇ ರಾಷ್ಟ್ರದ ಅಭಿವೃದ್ಧಿ ಮತ್ತು ಜನಸೇವೆಯ ಸಾಧನವಾಗಿ ಬಳಸಿದ ನಾಯಕ ನರೇಂದ್ರ ಮೋದಿ. ತಮ್ಮ ಸಂಪೂರ್ಣ ಜೀವನವನ್ನು ದೇಶ ಸೇವೆಗೆ ಸಮರ್ಪಿಸಿಕೊಂಡ ರಾಜಕೀಯ ಸನ್ಯಾಸಿ ಮೋದಿ ಎಂದು ಹೇಳಿದರು.
ಬಿಜೆಪಿ ಮುಖಂಡ ಲಿಂಗರಾಜ ಪಾಟೀಲ ಮಾತನಾಡಿ, ಪ್ರಧಾನಿ ಮೋದಿ 12 ವರ್ಷಗಳ ಅಧಿಕಾರಾವಧಿ ಪೂರೈಸಿ, ಮಾಜಿ ಪ್ರಧಾನಿ ದಿ. ಜವಾಹರಲಾಲ ನೆಹರು ಅವರ ದಾಖಲೆ ಹಿಂದಿಕ್ಕಿದ್ದಾರೆ ಎಂದು ತಿಳಿಸಿದರು.
ಪಾಲಿಕೆ ಸದಸ್ಯ ಶಿವು ಮೆಣಸಿನಕಾಯಿ ಮಾತನಾಡಿದರು. ಬಿಜೆಪಿಯ ನಾರಾಯಣ ಜರತಾರಘರ, ರಂಗಾ ಬದ್ದಿ, ಸತೀಶ ಶೇಜವಾಡಕರ, ರಂಗಾ ಕಠಾರೆ, ನಾಗರತ್ನ ಬಳ್ಳಾರಿ, ಅನುರಾದ ಚಿಲ್ಲಾಳ, ರಾಜು ಪವಾರ ಹಾಗೂ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net