ಮಹಾನಗರ ಪಾಲಿಕೆಯು ಭೂ ಸ್ವಾಧೀನ ಪ್ರಕ್ರಿಯೆ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದುಕೊಳ್ಳುವ ನಿಟ್ಟಿನಲ್ಲಿ ಭೇಟಿ ನೀಡಿದ್ದೇನೆ. ದೇವಸ್ಥಾನವು 1,271 ಚ.ಮೀ. ವಿಸ್ತೀರ್ಣ ಹೊಂದಿದೆ. ಸುಮಾರು 3,901 ಚ.ಮೀ. ಪ್ರದೇಶವನ್ನು ಭೂ ಸ್ವಾಧೀನ ಮಾಡಿಕೊಳ್ಳಲಾಗುತ್ತಿದೆ. ಅಂದರೆ, ಒಂದು ಎಕರೆಗೆ ಒಂದೂವರೆ ಗುಂಟೆ ಜಾಗ ಕಡಿಮೆ ಇದೆ. ಭೂ ಸ್ವಾಧೀನ ಪಡಿಸಿಕೊಳ್ಳುವ ಸಲುವಾಗಿ 9 ಕೋಟಿ ರೂ.ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.