ಸಾಗರದಲ್ಲಿ ದೈವಜ್ಞ ಬ್ರಾಹ್ಮಣ ಮಠಾಧೀಶರಿಂದ ಚಾತುರ್ಮಾಸ್ಯ divine

divine ಶ್ರೀ ಸಚ್ಚಿದಾನಂದ ಜ್ಞಾನೇಶ್ವರಿ ಭಾರತಿ ಸ್ವಾಮೀಜಿ ಹಾಗೂ ಶ್ರೀ ಸುಜ್ಞಾನೇಶ್ವರ ಭಾರತಿ ಸ್ವಾಮೀಜಿ.
divine ಶ್ರೀ ಸಚ್ಚಿದಾನಂದ ಜ್ಞಾನೇಶ್ವರಿ ಭಾರತಿ ಸ್ವಾಮೀಜಿ ಹಾಗೂ ಶ್ರೀ ಸುಜ್ಞಾನೇಶ್ವರ ಭಾರತಿ ಸ್ವಾಮೀಜಿ.
Published on

ಪ್ರಮುಖ ಮುಖ್ಯಾಂಶಗಳು

  • ಚಾತುಮಾಸ್ಯ ವ್ರತಾಚರಣೆಯಲ್ಲಿ ಭಾಗವಹಿಸಲು ನಿರ್ಧರಿಸಲಾಗಿದೆ
  • ಶ್ರೀ ಸಚ್ಚಿದಾನಂದ ಜ್ಞಾನೇಶ್ವರಿ ಭಾರತಿ ಸ್ವಾಮೀಜಿ ಹಾಗೂ ಶ್ರೀ ಸುಜ್ಞಾನೇಶ್ವರ ಭಾರತಿ ಸ್ವಾಮೀಜಿ ಚಾತುರ್ಮಾಸ್ಯ ವೃತ ಕೈಗೊಳ್ಳಲಿದ್ದಾರೆ.
  • ದೇಶ, ವಿದೇಶಗಳಲ್ಲಿರುವ ಸಮಾಜದವರು ಈ ಧಾರ್ವಿುಕ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.
ಹುಬ್ಬಳ್ಳಿ: divine ದೈವಜ್ಞ ಬ್ರಾಹ್ಮಣ ಸಮಾಜದ ಪ್ರಥಮ ಮಠಾಧೀಶರಾದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರಿ ಭಾರತಿ ಸ್ವಾಮೀಜಿ ಹಾಗೂ ತತ್​ಕರಕಮಲ ಸಂಜಾತರಾದ ಶ್ರೀ ಸುಜ್ಞಾನೇಶ್ವರ ಭಾರತಿ ಸ್ವಾಮೀಜಿ ಅವರು ಜು. 29 ರಿಂದ ಸೆ.26ರವರೆಗೆ ಸಾಗರದ ದೈವಜ್ಞ ಬ್ರಾಹ್ಮಣ ಸಭಾಭವನದಲ್ಲಿ ಚಾತುರ್ಮಾಸ್ಯ ವೃತ ಕೈಗೊಳ್ಳಲಿದ್ದಾರೆ.
ಕರ್ನಾಟಕ, ಮಹಾರಾಷ್ಟ್ರ, ಗೋವಾ ಹಾಗೂ ಕೇರಳ ರಾಜ್ಯಗಳಿಂದ ಮಾತ್ರವಲ್ಲದೆ ದೇಶ, ವಿದೇಶಗಳಲ್ಲಿರುವ ಸಮಾಜದವರು ಈ ಧಾರ್ವಿುಕ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.
ಈ ಹಿನ್ನೆಲೆಯಲ್ಲಿ ಆ. 5ರಂದು ಹುಬ್ಬಳ್ಳಿಯಿಂದ ಸಮಾಜದವರು ಸಾಗರಕ್ಕೆ ತೆರಳಿ ಚಾತುಮಾಸ್ಯ ವ್ರತಾಚರಣೆಯಲ್ಲಿ ಭಾಗವಹಿಸಲು ನಿರ್ಧರಿಸಲಾಗಿದೆ ಎಂದು ಹುಬ್ಬಳ್ಳಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ವಿಜಯ ಕೆ. ವೆರ್ಣೆಕರ ಅವರು ಹುಬ್ಬಳ್ಳಿಯ ದೈವಜ್ಞ ಭವನದಲ್ಲಿ ನಡೆದ ಸಭೆಯಲ್ಲಿ ತಿಳಿಸಿದ್ದಾರೆ.
ಈ ಸಭೆಯಲ್ಲಿ ಉದಯ ರೇವಣಕರ, ರಾಜನ್ ಅಣ್ವೇಕರ, ವಿನೋದ ರೇವಣಕರ, ಪ್ರದೀಪ ರಾಯ್ಕರ್, ಸೊಸೈಟಿ ಅಧ್ಯಕ್ಷ ವಿಷ್ಣು ರಾಯ್ಕರ, ಮಹಿಳಾ ಮಂಡಳದ ಅಧ್ಯಕ್ಷೆ ಪ್ರೇಮಾ ಭಟ್, ರಶ್ಮಿ ಅಣ್ವೇಕರ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net