check ಹುಬ್ಬಳ್ಳಿಯ ಆಸ್ಪತ್ರೆಯಲ್ಲಿ ಇನಾಂವೀರಾಪುರ ದೌರ್ಜನ್ಯ ಪ್ರಕರಣದಲ್ಲಿ ಗಾಯಗೊಂಡಿರುವ ವಿವೇಕಾನಂದ ದೊಡ್ಡಮನಿ ಕುಟುಂಬದವರಿಗೆ ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ಪರಿಹಾರ ಚೆಕ್ ನೀಡಿದರು.
ಹುಬ್ಬಳ್ಳಿ: check ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ದೌರ್ಜನ್ಯ ಪ್ರಕರಣದಲ್ಲಿ ಗಾಯಗೊಂಡಿದ್ದ ವಿವೇಕಾನಂದ ದೊಡ್ಡಮನಿ ಅವರ ಕುಟುಂಬದವರಿಗೆ ಜಿಲ್ಲಾಧಿಕಾರಿ ದಿವ್ಯಪ್ರಭು ಅವರು 5 ಲಕ್ಷ ರೂ. ಪರಿಹಾರ ಚೆಕ್ ನೀಡಿದರು.
ಇಲ್ಲಿಯ ದೇಶಪಾಂಡೆ ನಗರದಲ್ಲಿರುವ ವಿವೇಕಾನಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುವಿಗೆ ಪರಿಹಾರ ಚೆಕ್ ನೀಡಲಾಯಿತು.
ಪ್ರಕರಣದಲ್ಲಿ ಮರೇಪ್ಪ ದೊಡ್ಡಮನಿ, ಸುನೀಲ್ ಹರಿಜನ, ಸಂಗೀತಾ ಹರಿಜನ, ರೇಣವ್ವ, ಅನನ್ಯಾ ದೊಡ್ಡಮನಿ, ಯಲ್ಲಪ್ಪ ದೊಡ್ಡಮನಿ, ಹೂವಮ್ಮ ದೊಡ್ಡಮನಿ ಹಾಗೂ ವಿವೇಕಾನಂದ ದೊಡ್ಡಮನಿ ಅವರು ಗಾಯಗೊಂಡಿದ್ದರು. ಅವರ ಚಿಕಿತ್ಸೆ ಕುರಿತು ವೈದ್ಯರಿಂದ ಮಾಹಿತಿ ಪಡೆದುಕೊಂಡರು.
ಗ್ರಾಮೀಣ ತಹಸೀಲ್ದಾರ ಜೆ.ಬಿ. ಮಜ್ಜಗಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಶುಭಾ ಪಿ., ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಪ್ರಿಯದರ್ಶಿನಿ ಹಿರೇಮಠ, ಇತರರು ಹಾಜರಿದ್ದರು.