chinmaya college ಹುಬ್ಬಳ್ಳಿಯ ಚಿನ್ಮಯ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಶನಿವಾರ ಏರ್ಪಡಿಸಿದ್ದ ಶ್ರೀಕೃಷ್ಣ ಜನ್ಮಾಷ್ಟಮಿಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ.
Published on:
Copied
Follow Us
ಹುಬ್ಬಳ್ಳಿ: ಇಲ್ಲಿಯ chinmaya college ಚಿನ್ಮಯ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಶನಿವಾರ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಸಡಗರ, ಸಂಭ್ರಮದಿಂದ ಆಚರಿಸಲಾಯಿತು.
ಚಿನ್ಮಯ ಶಿಕ್ಷಣ ಸಂಸ್ಥೆ ಆಡಳಿತಾಧಿಕಾರಿ ವಿಶ್ವನಾಥ ರಾನಡೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿ, ಶ್ರೀಕೃಷ್ಣ ಸಂದೇಶ, ಮಾರ್ಗದರ್ಶನ ಇಂದಿನ ಜಗತ್ತಿಗೆ ಅತ್ಯಗತ್ಯ. ಭಗವದ್ಗೀತೆಯ ಮೂಲಕ ನೀಡಿದ ಮಾರ್ಗೋಪಾಯಗಳು ವಿಶ್ವದೆಲ್ಲೆಡೆ ಜನಜನಿತವಾಗಿವೆ ಎಂದರು.
ವಿದ್ಯಾರ್ಥಿಗಳು ಹಾಡು, ಭಾಷಣ, ನೃತ್ಯ ಪ್ರದರ್ಶಿಸಿದರು. ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಪ್ರಾಂಶುಪಾಲೆ ಶರ್ಮಿಳಾ ನಾಯ್ಡು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಜರಿದ್ದರು.