`ನೀಟ್'ನಲ್ಲಿ ನಡೆದ ಅಕ್ರಮಕ್ಕೆ ಖಂಡನೆ

ಧಾರವಾಡದ ಗಾಂಧಿ ಶಾಂತಿ ಪ್ರತಿಷ್ಠಾನದಿಂದ ಪ್ರತಿಭಟನೆ
ಧಾರವಾಡದ ಗಾಂಧಿ ಶಾಂತಿ ಪ್ರತಿಷ್ಠಾನದಿಂದ ಪ್ರತಿಭಟನೆ
Published on
ಧಾರವಾಡ: `ನೀಟ್' ಪರೀಕ್ಷೆಯಲ್ಲಿ ನಡೆದ ಅಕ್ರಮ ಖಂಡಸಿ ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಧಾರವಾಡ ಶಾಂತಿ ಪ್ರತಿಷ್ಠಾನ ಕೇಂದ್ರದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
20 ದಿನಗಳಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಪರಿಸರ ಮತ್ತು ಶಿಕ್ಷಣ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಆಮರಣಾಂತ ಉಪವಾಸ ಸತ್ಯಾಗ್ರಹದ ಪರಿಸ್ಥಿತಿಯನ್ನು ಕೇಂದ್ರ ಸರ್ಕಾರ ಸರಿಯಾಗಿ ನಿಭಾಯಿಸದೆ ವಿಫಲವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಸೋನಮ್ ವಾಂಗ್ಚುಕ್ ಹಾಗೂ ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗಳಿಗೆ ನಾವು ನಮ್ಮ ಸಂಪೂರ್ಣ ಬೆಂಬಲ ಸೂಚಿಸುತ್ತೇವೆ. ಜತೆಗೆ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಅತಂತ್ರಗೊಳಿಸಿರುವ `ನೀಟ್' ಸೇರಿ ಪ್ರಮುಖ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆಯನ್ನು ನಾವು ಬಲವಾಗಿ ಖಂಡಿಸುತ್ತೇವೆ. ಈ ಹಗರಣಗಳ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣವೇ ರಾಜೀನಾಮೆ ನೀಡಬೇಕೆಂದು ಒತ್ತಾಸಿದರು.
ಲೀಲಾದೇವಿ ಆರ್. ಪ್ರಸಾದ, ಡಾ. ರಾಜೇಂದ್ರ ಪೋದ್ದಾರ, ಶಂಕರ ಹಲಗತ್ತಿ, ಬಿ.ಎನ್. ಪೂಜಾರ, ಡಾ. ಶಿವಾನಂದ ಶೆಟ್ಟರ್, ವಿಶ್ವೇಶ್ವರಿ ಹಿರೇಮಠ, ಆಷಾ ಸೈಯದ, ಸ್ವಾತಿ ಮಳಗಿ, ಡಾ. ಸಂಜೀವ ಕುಲಕರ್ಣಿ, ಗೋಪಾಲ ದಾಬಡೆ, ಶಾರದಾ ದಾಬಡೆ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net