congress office ಕಾಂಗ್ರೆಸ್ ಗೆಲುವಿಗೆ ಪೂರಕ ವಾತಾವರಣ

congress office ಹುಬ್ಬಳ್ಳಿಯ ಗೋಕುಲ ರಸ್ತೆ ನೆಹರು ನಗರದಲ್ಲಿ ಪದವೀಧರ ಕ್ಷೇತ್ರದ ಕಾಂಗ್ರೆಸ್​ ನಿಯೋಜಿತ ಅಭ್ಯರ್ಥಿ ಮೋಹನ ಲಿಂಬಿಕಾಯಿ ಅವರ ಕಚೇರಿ ಉದ್ಘಾಟನೆ ಸಮಾರಂಭದಲ್ಲಿ ಸಚಿವ ಸಂತೋಷ ಲಾಡ್​, ಅನಿಲ ಪಾಟೀಲ, ಎಂ.ಎಸ್​. ಅಕ್ಕಿ, ಇಮ್ರಾನ್​ ಯಲಿಗಾರ ಇತರರು ಇದ್ದರು.
congress office ಹುಬ್ಬಳ್ಳಿಯ ಗೋಕುಲ ರಸ್ತೆ ನೆಹರು ನಗರದಲ್ಲಿ ಪದವೀಧರ ಕ್ಷೇತ್ರದ ಕಾಂಗ್ರೆಸ್​ ನಿಯೋಜಿತ ಅಭ್ಯರ್ಥಿ ಮೋಹನ ಲಿಂಬಿಕಾಯಿ ಅವರ ಕಚೇರಿ ಉದ್ಘಾಟನೆ ಸಮಾರಂಭದಲ್ಲಿ ಸಚಿವ ಸಂತೋಷ ಲಾಡ್​, ಅನಿಲ ಪಾಟೀಲ, ಎಂ.ಎಸ್​. ಅಕ್ಕಿ, ಇಮ್ರಾನ್​ ಯಲಿಗಾರ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ
  • ಹುಬ್ಬಳ್ಳಿಯಲ್ಲಿ ಕಾಂಗ್ರೆಸ್​ ಕಚೇರಿ ಉದ್ಘಾಟನೆ
ಹುಬ್ಬಳ್ಳಿ: congress office ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದ ವಿಧಾನ ಪರಿಷತ್​ ಚುನಾವಣೆಗೆ ಕಾಂಗ್ರೆಸ್​ ಪಕ್ಷ ಮುಂಚಿತವಾಗಿಯೇ ಅಭ್ಯರ್ಥಿ ಘೋಷಣೆ ಮಾಡಿ ಗೆಲುವು ಸಾಧಿಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್​ ಹೇಳಿದರು.
ಇಲ್ಲಿಯ ಗೋಕುಲ ರಸ್ತೆ ನೆಹರು ನಗರದಲ್ಲಿ ಪರಿಷತ್​ ಚುನಾವಣೆಯ ಕಾಂಗ್ರೆಸ್​ ಅಭ್ಯರ್ಥಿ ಮೋಹನ ಲಿಂಬಿಕಾಯಿ ಅವರ ಕಾರ್ಯಾಲಯವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.
ಈ ಭಾಗದಲ್ಲಿ ಕಾಂಗ್ರೆಸ್​ ಪಕ್ಷದ ನಾಯಕರು, ಕಾರ್ಯಕರ್ತರು ಎಲ್ಲರೂ ಸೇರಿ ಈ ಚುನಾವಣೆ ಎದುರಿಸುತ್ತೇವೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷದ ಅಭ್ಯರ್ಥಿ ಘೋಷಣೆ ಮಾಡಲಾಗಿದೆ. ಎಲ್ಲರೂ ಒಕ್ಕಟ್ಟಾಗಿ ಇದ್ದೇವೆ ಎಂದರು.
ನಿಯೋಜಿತ ಅಭ್ಯರ್ಥಿ ಮೋಹನ ಲಿಂಬಿಕಾಯಿ ಮಾತನಾಡಿ, ಪಕ್ಷವು ಸಾಕಷ್ಟು ಮೊದಲೇ ಅಭ್ಯರ್ಥಿ ಹೆಸರು ಘೋಷಣೆ ಮಾಡಿರುವುದರಿಂದ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಿದೆ. ಈಗಾಗಲೇ 88 ಸಾವಿರಕ್ಕೂ ಹೆಚ್ಚು ಮತದಾರರ ನೋಂದಣಿ ಮಾಡಲಾಗಿದೆ. ಇನ್ನೂ ಸಮಯವಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಲಾಗುವುದು. ಈ ಬಾರಿ ಕಾಂಗ್ರೆಸ್​ ಗೆಲುವಿಗೆ ಪೂರಕ ವಾತಾವರಣ ನಿರ್ಮಾಣವಾಗಿದೆ ಎಂದರು.
ಕಾಂಗ್ರೆಸ್​ನಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಪಕ್ಷದ ಎಲ್ಲ ಶಾಸಕರು ಒಟ್ಟಾಗಿ ಕೆಲಸ ಮಾಡಲು ಮುಂದಾಗಿದ್ದಾರೆ. ಕ್ಷೇತ್ರದ ವ್ಯಾಪ್ತಿಯಲ್ಲಿ ಹೆಚ್ಚು ಕಾಂಗ್ರೆಸ್​ ಶಾಸಕರು ಇರುವುದರಿಂದ ಗೆಲುವು ಇನ್ನೂ ಸುಲಭವಾಗಲಿದೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net