congress protest ಮಾನವ ಸರಪಳಿ ನಿರ್ಮಿಸಿ ಆಕ್ರೋಶ

congress protest ಪುಷ್ಕರಣಿ ವಿಷಯವಿಟ್ಟುಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುತ್ತಿರುವ ಬಿಜೆಪಿ ನಡೆ ಖಂಡಿಸಿ ಹು-ಧಾ ವಿವಿಧ ದಲಿತ ಸಂಘ-ಸಂಸ್ಥೆಗಳ ಮಹಾಮಂಡಳ, ಕಾಂಗ್ರೆಸ್ ಕಾರ್ಯಕರ್ತರ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.
congress protest ಪುಷ್ಕರಣಿ ವಿಷಯವಿಟ್ಟುಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುತ್ತಿರುವ ಬಿಜೆಪಿ ನಡೆ ಖಂಡಿಸಿ ಹು-ಧಾ ವಿವಿಧ ದಲಿತ ಸಂಘ-ಸಂಸ್ಥೆಗಳ ಮಹಾಮಂಡಳ, ಕಾಂಗ್ರೆಸ್ ಕಾರ್ಯಕರ್ತರ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.
Published on

ಹುಬ್ಬಳ್ಳಿ:

ಆಸಾರ ಓಣಿಯ ಪುಷ್ಕರಣಿ ವಿಷಯವಿಟ್ಟುಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುತ್ತಿರುವುದನ್ನು ಖಂಡಿಸಿ ಹು-ಧಾ ವಿವಿಧ ದಲಿತ ಸಂಘ-ಸಂಸ್ಥೆಗಳ ಮಹಾಮಂಡಳ, ಕಾಂಗ್ರೆಸ್ ಕಾರ್ಯಕರ್ತರ

congress protest

ನೇತೃತ್ವದಲ್ಲಿ ನಗರದ ಇಂಡಿಪಂಪ್ ವೃತ್ತದಲ್ಲಿ ಮಂಗಳವಾರ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಯಿತು.

ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ ಮಾತನಾಡಿ, ಆಸಾರ ಓಣಿಯ ಶ್ರೀ ಭವಾನಿ ಶಂಕರ ದೇವಸ್ಥಾನದ ಆವರಣದಲ್ಲಿ ಪುಷ್ಕರಣಿ ಇಲ್ಲವೆಂದು ಪುರಾತತ್ವ ಇಲಾಖೆ ಹೇಳಿದೆ. ಆದರೂ ಪುಷ್ಕರಣಿ ಇದೆ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿರುವುದು ಖಂಡನೀಯ. ಪಾಲಿಕೆ ಸುಪರ್ದಿಯ ಜಾಗದಲ್ಲಿ ರಸ್ತೆ ನಿರ್ಮಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗಿದೆ. ದಲಿತರು ಮತ್ತು ಹಿಂದುಳಿದವರಿಗೆ ರಸ್ತೆ ಮಾಡಿಕೊಟ್ಟಿದ್ದನ್ನು ಸಹಿಸುತ್ತಿಲ್ಲ ಎಂದು ಆರೋಪಿಸಿದರು.
ದೇವಸ್ಥಾನದ ಸುತ್ತಮುತ್ತ ಬಿಜೆಪಿಯ ಶಾಸಕರು, ಪಾಲಿಕೆ ಸದಸ್ಯರು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಆಗ ಮಾಡದೇ ಇರುವ ಆರೋಪ ಈಗೇಕೆ? ರಸ್ತೆ ಆಗುವವರೆಗೆ ಸುಮ್ಮನಿದ್ದು, ಈಗ ಧ್ವನಿ ಎತ್ತುತ್ತಿರುವುದು ಸರಿಯಲ್ಲ ಎಂದು ದೂರಿದರಲ್ಲದೆ, ಕೋಮು ಗಲಭೆ ಸೃಷ್ಟಿಸುತ್ತಿರುವ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಅವರನ್ನು ಧಾರವಾಡ ಜಿಲ್ಲೆಯಿಂದ ಗಡಿಪಾರು ಮಾಡಬೇಕು. ನೈತಿಕ ಹೊಣೆ ಹೊತ್ತು ಶಾಸಕರಾದ ಮಹೇಶ ಟೆಂಗಿನಕಾಯಿ, ಅರವಿಂದ ಬೆಲ್ಲದ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.
ವಾಕರಸಾ ಸಂಸ್ಥೆ ಮಾಜಿ ಅಧ್ಯಕ್ಷ ಸದಾನಂದ ಡಂಗನವರ ಮಾತನಾಡಿ, ಎಲ್ಲರನ್ನೂ ಸಮವಾಗಿ ನೋಡುವ ಪಕ್ಷ ಕಾಂಗ್ರೆಸ್. ರಸ್ತೆಯ ಮೇಲೆ ಎಲ್ಲ ಸಮುದಾಯದವರು ಓಡಾಡುತ್ತಿದ್ದಾರೆ. ಇದು ಬಿಜೆಪಿಯವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಹಾಗಾಗಿಯೇ ಕೋಮು ಗಲಭೆ ಸೃಷ್ಟಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಹಾಮಂಡಳದ ಗುರುನಾಥ ಉಳ್ಳಿಕಾಶಿ ಮಾತನಾಡಿ, ಪುಷ್ಕರಣಿ ಇಲ್ಲದ ಜಾಗದಲ್ಲಿ ಪುಷ್ಕರಣಿ ಇರುವಂತೆ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ (ಎಐ) ಚಿತ್ರ ಹರಿಬಿಟ್ಟು ಜನರನ್ನು ದಾರಿ ತಪ್ಪಿಸಲಾಗುತ್ತಿದೆ. ಹುಬ್ಬಳ್ಳಿಯಲ್ಲಿರುವ ಕೆಲ ಕೆರೆಗಳನ್ನು ಮುಚ್ಚಿ ಕಟ್ಟಡಗಳನ್ನು ನಿರ್ಮಿಸಿರುವುದು ಬಿಜೆಪಿಯವರು. ಆಯುರ್ವೇದ ಕಾಲೇಜ್ ಪಕ್ಕದ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ 1 ಎಕರೆ 11 ಗುಂಟೆ ಜಾಗವನ್ನು ಕಬಳಿಸಲಾಗಿದೆ. ಡಾ.ಬಿ.ಆರ್. ಅಂಬೇಡ್ಕರ್ ಧಾರವಾಡದಲ್ಲಿ ಓಡಾಡಿದ ಜಾಗದಲ್ಲಿದ್ದ ಬಾವಿಯನ್ನು ಮುಚ್ಚಿ ಕಾಂಪೌಂಡ್ ನಿರ್ಮಿಸಲಾಗಿದೆ. ಇವುಗಳನ್ನು ಮಾಡಿದವರು ಬಿಜೆಪಿಯವರು. ಇವುಗಳ ಬಗ್ಗೆ ಬಿಜೆಪಿಯವರು ಮಾತನಾಡುತ್ತಿಲ್ಲ ಎಂದು ಆರೋಪಿಸಿದರು.
ವಿವಿಧ ಬೇಡಿಕೆಯುಳ್ಳ ಮನವಿಯನ್ನು ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಮನವಿ ರವಾನಿಸಲಾಯಿತು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನಾಗರಾಜ ಗೌರಿ, ಪಾಲಿಕೆ ಸದಸ್ಯ ಸಂದಿಲ್‌ಕುಮಾರ, ಪ್ರಮುಖರಾದ ಮಾರುತಿ ದೊಡ್ಡಮನಿ, ಶ್ರೀನಿವಾಸ ಬೆಳದಡಿ, ಪ್ರಭು ಪ್ರಭಾಕರ, ಹನುಮಂತ ದೊಡ್ಡಮನಿ, ರೇವಣಸಿದ್ದಪ್ಪ ದೇಸಾಯಿ, ದೇವಣ್ಣ ಇಟಗಿ ಇತರರು ಪ್ರತಿಭಟನೆಯಲ್ಲಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net