ಸೆಂಟ್ರಲ್ ಕ್ಷೇತ್ರದಲ್ಲಿ ಶೀಘ್ರ ಸಿಸಿ ರಸ್ತೆಗಳ (roads) ನಿರ್ಮಾಣ
ಹುಬ್ಬಳ್ಳಿಯಲ್ಲಿ ಏರ್ಪಡಿಸಿದ್ದ ಹು-ಧಾ ಸೆಂಟ್ರಲ್ ವಿಧಾನಸಭೆ ಕ್ಷೇತ್ರದ (Roads) ಪಾಲಿಕೆ ಸದಸ್ಯರ ಸಭೆಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ, ಮೇಯರ್ ಜ್ಯೋತಿ ಪಾಟೀಲ, ಉಪ ಮೇಯರ್ ಸಂತೋಷ ಚವ್ಹಾಣ, ಆಯುಕ್ತ ಡಾ. ರುದ್ರೇಶ ಘಾಳಿ ಹಾಗೂ ಇತರರು ಪಾಲ್ಗೊಂಡಿದ್ದರು.
ತೆರವು ಕಾರ್ಯಾಚರಣೆಯನ್ನು ವಿಧಾನಸಭೆ ಅಧಿವೇಶನದ ನಂತರ ನಡೆಸಲಾಗುವುದು.
ಫುಟ್ಪಾತ್ ಅತಿಕ್ರಮಣ ಹೆಚ್ಚಾಗಿದೆ.
ಜವಾಬ್ದಾರಿ ವಹಿಸಿ ಸ್ವಚ್ಛತಾ ಕೆಲಸ ಮಾಡಿಸಬೇಕು.
ಇಲ್ಲಿನ ಮಹಾನಗರ ಪಾಲಿಕೆ ಆಯುಕ್ತರ ಕಚೇರಿಯಲ್ಲಿ ಸೆಂಟ್ರಲ್ ಕ್ಷೇತ್ರ ವ್ಯಾಪ್ತಿಯ ಪಾಲಿಕೆ ಸದಸ್ಯರೊಂದಿಗೆ ಆಯೋಜಿಸಿದ್ದ ಸಭೆಯ ನಂತರ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ 100 ಕೋಟಿ ರೂ. ಅನುದಾನಕ್ಕೆ ಸಂಬಂಧಿಸಿದದಂತೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಹೆದ್ದಾರಿ ಸಚಿವ ನಿತಿನ ಗಡ್ಕರಿ ಅವರನ್ನು ಭೇಟಿಯಾಗಿ ವಿಷಯ ಪ್ರಸ್ತಾಪಿಸಿದ್ದಾಗಿ ಹೇಳಿದರು.
ಸಿಸಿ ರಸ್ತೆ ನಿರ್ಮಾಣಕ್ಕೂ ಮೊದಲು ನಿರಂತರ ಕುಡಿಯುವ ನೀರು ಪೈಪ್ಲೈನ್ ಅಳವಡಿಕೆ ಕಾಮಗಾರಿ, ಒಳಚರಂಡಿ ಕಾಮಗಾರಿ ಹಾಗೂ ಗ್ಯಾಸ್ ಪೈಪ್ಲೈನ್ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ತ್ವರಿತವಾಗಿ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದರು.
ಒಂದು ಬಾರಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿ ಆರಂಭಗೊಂಡರೆ ಮತ್ತೆ ತಗ್ಗು ತೋಡುವ ಪ್ರಮೇಯ ಬಾರದಂತೆ ನೋಡಿಕೊಳ್ಳಬೇಕೆಂದು ಎಲ್ ಆಂಡ್ ಟಿ ಹಾಗೂ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಸೆಂಟ್ರಲ್ ಕ್ಷೇತ್ರ ವ್ಯಾಪ್ತಿಯಲ್ಲಿನ ಫುಟ್ಪಾತ್ ಅತಿಕ್ರಮಣ ಹಾಗೂ ಗೂಡಂಗಡಿಗಳ ತೆರವು ಕಾರ್ಯಾಚರಣೆಯನ್ನು ವಿಧಾನಸಭೆ ಅಧಿವೇಶನದ ನಂತರ ನಡೆಸಲಾಗುವುದು ಎಂದರು.
ಫುಟ್ಪಾತ್ ಅತಿಕ್ರಮಣ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಸೆಂಟ್ರಲ್ ಕ್ಷೇತ್ರ ವ್ಯಾಪ್ತಿಯ 25 ವಾರ್ಡ್ಗಳ ಸದಸ್ಯರ ಸಭೆ ಕರೆದು, ಕ್ಷೇತ್ರದ ಪ್ರಮುಖ ರಸ್ತೆಗಳ ಸಿಸಿ ಕಾಮಗಾರಿ ಮಾಡುವುದು ಸೇರಿದಂತೆ ಇನ್ನಿತರ ಸಮಸ್ಯೆಗಳ ಬಗ್ಗೆ ರ್ಚಚಿಸಲಾಗಿದೆ ಎಂದು ಹೇಳಿದರು.
ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದ ಬಳಿಕ ಮತ್ತೊಮ್ಮೆ ಪಾಲಿಕೆ ಸದಸ್ಯರೊಂದಿಗೆ ರ್ಚಚಿಸಿ, ಫುಟ್ಪಾತ್ ತೆರವಿಗೆ ವಿಶೇಷ ಡ್ರೖೆವ್ನ ದಿನ ನಿಗದಿಪಡಿಸಲಾಗುವುದು ಎಂದು ತಿಳಿಸಿದರು.
ಹು-ಧಾ ಮಹಾನಗರ ಪಾಲಿಕೆಯ 2,347 ಹುದ್ದೆಗಳ ಪೈಕಿ 913 ಹುದ್ದೆಗಳು ಮಾತ್ರ ಭರ್ತಿಯಾಗಿದ್ದು, ಇನ್ನುಳಿದ 1,435 ಹುದ್ದೆಗಳು ಖಾಲಿ ಇವೆ. ಈ ಸಂಬಂಧ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಹೇಳಿದರು.
ನಗರ ಸ್ವಚ್ಛತೆಯ ಸಂಬಂಧ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಒಂದೊಂದು ಬಡಾವಣೆ ಆಯ್ಕೆ ಮಾಡಿಕೊಂಡು, ಜವಾಬ್ದಾರಿ ವಹಿಸಿ ಸ್ವಚ್ಛತಾ ಕೆಲಸ ಮಾಡಿಸಬೇಕು ಎಂಬ ಯೋಜನೆ ಹಾಕಿಕೊಳ್ಳಲಾಗಿದೆ. ಅಧಿವೇಶನದ ನಂತರ ಪ್ರತಿ ಬಡಾವಣೆಯಲ್ಲಿ ಸ್ವಚ್ಛತೆ ಕೈಗೊಳ್ಳಲು ದಿನ ನಿಗದಿಪಡಿಸಲಾಗುವುದು ಎಂದು ತಿಳಿಸಿದರು.
ಮೇಯರ್ ಜ್ಯೋತಿ ಪಾಟೀಲ, ಉಪ ಮೇಯರ್ ಸಂತೋಷ ಚವ್ಹಾಣ, ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ, ಪಾಲಿಕೆ ಸದಸ್ಯರಾದ ರೂಪಾ ಶೆಟ್ಟಿ, ಎಂ. ಐ. ನರಗುಂದ, ಮೀನಾಕ್ಷಿ ಒಂಟಮೂರಿ, ಸುವರ್ಣ ಕಲಕುಂಟಲ ಹಾಗೂ ಇತರರು ಇದ್ದರು.