modi ಮೋದಿ ಸರ್ಕಾರದ ಯೋಜನೆಗಳ ಜಾಗೃತಿ ಮೂಡಿಸಿ

modi ಹುಬ್ಬಳ್ಳಿಯ ಅರವಿಂದ ನಗರದ ಬಿಜೆಪಿ ಕಚೇರಿಯಲ್ಲಿ ಏರ್ಪಡಿಸಿದ್ದ ಮಹಾನಗರ ಜಿಲ್ಲಾ ಮಾಸಿಕ ಸಭೆಯಲ್ಲಿ ತಿಪ್ಪಣ್ಣ ಮಜ್ಜಗಿ ಮಾತನಾಡಿದರು.
modi ಹುಬ್ಬಳ್ಳಿಯ ಅರವಿಂದ ನಗರದ ಬಿಜೆಪಿ ಕಚೇರಿಯಲ್ಲಿ ಏರ್ಪಡಿಸಿದ್ದ ಮಹಾನಗರ ಜಿಲ್ಲಾ ಮಾಸಿಕ ಸಭೆಯಲ್ಲಿ ತಿಪ್ಪಣ್ಣ ಮಜ್ಜಗಿ ಮಾತನಾಡಿದರು.
Published on

ಪ್ರಮುಖ ಮುಖ್ಯಾಂಶಗಳು

  • ಮತದಾರರ ಪಟ್ಟಿಯನ್ನು ಜಾಗರೂಕತೆಯಿಂದ ನಿರ್ವಹಿಸಬೇಕು.
  • ಹಲವಾರು ಜನಪರ ಯೋಜನೆಗಳನ್ನು ಜಾರಿಗೊಳಿಸಿದೆ.
  • ವಿಕಸಿತ ಭಾರತ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು
ಹುಬ್ಬಳ್ಳಿ :
ಅರವಿಂದ ನಗರದ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಮಹಾನಗರ ಜಿಲ್ಲಾ ಮಾಸಿಕ ಸಭೆಯಲ್ಲಿ ಅವರು ಮಾತನಾಡಿದರು.
ಬಿಜೆಪಿ ನೇತೃತ್ವದ ಎನ್​ಡಿಎ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಹಲವಾರು ಜನಪರ ಯೋಜನೆಗಳನ್ನು ಜಾರಿಗೊಳಿಸಿದೆ.
ಎಲ್ಲ ಯೋಜನೆಗಳು ಹಾಗೂ ಅದರಿಂದ ಆಗುತ್ತಿರುವ ಪ್ರಯೋಜನಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಜೂ. 21ರಂದು ನಡೆಯಲಿರುವ ವಿಶ್ವ ಯೋಗ ದಿನದ ಕಾರ್ಯಕ್ರಮದಲ್ಲಿ ಎಲ್ಲ ಕಾರ್ಯಕರ್ತರು ಪಾಲ್ಗೊಳ್ಳಬೇಕು.
ನಿತ್ಯ ಯೋಗಾಭ್ಯಾಸ ಮಾಡುವ ಮೂಲಕ ಮಾನಸಿಕ ಹಾಗೂ ದೈಹಿಕ ಆರೋಗ್ಯ ಕಾಯ್ದುಕೊಳ್ಳಬೇಕು ಎಂದು ಹೇಳಿದರು.
ಎಸ್​ಐಆರ್ ಪರಿಷ್ಕೃತ ಮತದಾರರ ಪಟ್ಟಿಯನ್ನು ಜಾಗರೂಕತೆಯಿಂದ ನಿರ್ವಹಿಸಬೇಕು. ಅರ್ಹ ಮತದಾರರು ಪಟ್ಟಿಯಿಂದ ಬಿಟ್ಟುಹೋಗದಂತೆ ಜಾಗರೂಕತೆ ವಹಿಸಬೇಕು ಎಂದರು.
21ರಂದು ಸಂಜೆ ಬಿವಿಬಿ ಕಾಲೇಜ್ ಆವರಣದಲ್ಲಿ ನಡೆಯಲಿರುವ ವಿಕಸಿತ ಭಾರತ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ಬಿಜೆಪಿ ಧಾರವಾಡ ವಿಭಾಗೀಯ ಪ್ರಭಾರಿ ಜಯತೀರ್ಥ ಕಟ್ಟಿ, ಪೂರ್ವ ಕ್ಷೇತ್ರದ ಎಸ್​ಐಆರ್ ಉಸ್ತುವಾರಿ ಬಸವರಾಜ ಕುಂದಗೋಳಮಠ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸೀಮಾ ಲದವಾ, ಮಾಲತಿ ಹೂಲಿಕಟ್ಟಿ, ಶಶಿ ಡಂಗನವರ ಹಾಗೂ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net