ದೇಶಕ್ಕೆ ಕೊಡುಗೆ ನೀಡುವ ಮನೋಭಾವ ಬೆಳೆಸಿಕೊಳ್ಳಲಿ

ಧಾರವಾಡ ಸತ್ತೂರಿನ ರಾಷ್ಟ್ರೊತ್ಥಾನ ವಿದ್ಯಾ ಕೇಂದ್ರದಲ್ಲಿ ಕಾರ್ಗಿಲ್ ವಿಜಯ ದಿವಸ್​ ಕಾರ್ಯಕ್ರಮ ಜರುಗಿತು.
ಧಾರವಾಡ ಸತ್ತೂರಿನ ರಾಷ್ಟ್ರೊತ್ಥಾನ ವಿದ್ಯಾ ಕೇಂದ್ರದಲ್ಲಿ ಕಾರ್ಗಿಲ್ ವಿಜಯ ದಿವಸ್​ ಕಾರ್ಯಕ್ರಮ ಜರುಗಿತು.
Published on
ಧಾರವಾಡ: ಪ್ರತಿಯೊಬ್ಬ ವಿದ್ಯಾರ್ಥಿ ದೇಶಕ್ಕಾಗಿ ಏನಾದರೂ ಕೊಡುಗೆ ನೀಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕಾರ್ಗಿಲ್ ಯೋಧ ಸುರೇಶ ಯರಿಗೊಪ್ಪ ಹೇಳಿದರು.
ನಗರದ ಸತ್ತೂರಿನ ರಾಷ್ಟ್ರೊತ್ಥಾನ ವಿದ್ಯಾ ಕೇಂದ್ರದಲ್ಲಿ ಆಯೋಜಿಸಿದ್ದ ಕಾರ್ಗಿಲ್ ​ ವಿಜಯ ದಿವಸ್​ ಕಾರ್ಯಕ್ರಮದಲ್ಲಿ ಅವರು ಕಾರ್ಗಿಲ್ ​ ಯುದ್ಧದ ತಮ್ಮ ಅನುಭವಗಳನ್ನು ಹಂಚಿಕೊಂಡರು. ಗಡಿಯಲ್ಲಿ ಸೈನಿಕರು ಎದುರಿಸುವ ಕಷ್ಟಗಳು, ತ್ಯಾಗ ಮತ್ತು ದೇಶಸೇವೆಯ ಮಹತ್ವ ವಿವರಿಸಿದರು.
ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸೈನಿಕರು ಹಾಗೂ ನಿವೃತ್ತ ಸೈನಿಕರ ಮಕ್ಕಳಿಗೆ ಶಾಲೆಯಿಂದ ಕೃತಜ್ಞತಾ ಪತ್ರ ನೀಡಿ ಗೌರವಿಸಲಾಯಿತು.
ವಿದ್ಯಾರ್ಥಿಗಳು ಕಾರ್ಗಿಲ್ ವಿಜಯ ದಿವಸದ ಮಹತ್ವ ತಿಳಿಸುವ ಭಾಷಣ ಮಾಡಿದರು. ದೇಶಭಕ್ತಿ ಗೀತ ಗಾಯನ ಮತ್ತು ನೃತ್ಯ ಪ್ರದರ್ಶಿಸಿದರು. ಕಾರ್ಗಿಲ್ ಯುದ್ಧದಲ್ಲಿ ಭಾರತೀಯ ಸೈನಿಕರು ತೋರಿದ ಶೌರ್ಯ, ತ್ಯಾಗ ಮತ್ತು ದೇಶಪ್ರೇಮ ಬಿಂಬಿಸುವ ನಾಟಕ ಪ್ರದರ್ಶಿಸಿದರು.
ಶಾಲೆಯ ಕರೆಸ್ಪಾಂಡೆಂಟ್​ ಗುರುರಾಜ ಅಗಡಿ, ಪ್ರಧಾನಾಚಾರ್ಯ ರಾಮಕೃಷ್ಣ, ಶಿಕ್ಷಕರು ಹಾಗೂ ವಿದ್ಯಾಥಿರ್ಗಳು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net