ಧಾರವಾಡ: ನಗರದ ಜವಾಹರ ನವೋದಯ ವಿದ್ಯಾಲಯಕ್ಕೆ ಜಿಲ್ಲಾಧಿಕಾರಿ ಸ್ನೇಹಲ್ ಆರ್., ಜಿ.ಪಂ. ಸಿಇಒ ಭುವನೇಶ ಪಾಟೀಲ ಹಾಗೂ ಪ್ರೊಬೇಷನರಿ ಐಎಎಸ್ ಅಧಿಕಾರಿ ಅನುಪ್ರಿಯಾ ಸಾಕ್ಯಾ ಇತ್ತೀಚೆಗೆ ಭೇಟಿ ನೀಡಿ ವಿವಿಧ ಚಟುವಟಿಕೆಗಳನ್ನು ಪರಿಶೀಲಿಸಿದರು.
ವಿದ್ಯಾಲಯದ ತರಗತಿ ಕೊಠಡಿಗಳು, ಗ್ರಂಥಾಲಯ, ಸಹಪಠ್ಯ ಚಟುವಟಿಕೆಗಳು, ಅಡುಗೆಮನೆ, ದಿನಸಿ ಸಾಮಗ್ರಿಗಳ ಉಗ್ರಾಣ, ವಿದ್ಯಾರ್ಥಿ ವಸತಿ ನಿಲಯಗಳು, ಕ್ರೀಡಾಂಗಣ ಹಾಗೂ ಇತರ ಸೌಲಭ್ಯಗಳನ್ನು ಪರಿಶೀಲಿಸಿ ಅಗತ್ಯ ಮಾಹಿತಿ ಪಡೆದರು. ಅಭಿವೃದ್ಧಿಗೆ ಸಂಬಂಧಿಸಿದ ಕೆಲ ಸಲಹೆಗಳನ್ನು ನೀಡಿದರು.
ನಂತರ ಅಧಿಕಾರಿಗಳು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಪ್ರಭಾರ ಪ್ರಾಚಾರ್ಯ ರಾವನ್ ಪಿ.ಕೆ., ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾಥಿರ್ಗಳು ಇದ್ದರು.