ಅರ್ಹರಿಗೆ ಗ್ಯಾರಂಟಿ ಯೋಜನೆ ತಲುಪಿಸಿ guarantee scheme

ಕುಂದಗೋಳದ ತಾಲೂಕು ಪಂಚಾಯಿತಿ ಸಭಾ ಭವನದಲ್ಲಿ ಆಯೋಜಿಸಿದ್ದ ಗ್ಯಾರಂಟಿ (guarantee scheme)ಸಮಿತಿ ಗ್ಯಾರಂಟಿ ಸಭೆಯಲ್ಲಿ ಅಧ್ಯಕ್ಷ ಸತೀಶ ಕೊಬ್ಬಯನವರ ಮಾತನಾಡಿದರು.
ಕುಂದಗೋಳದ ತಾಲೂಕು ಪಂಚಾಯಿತಿ ಸಭಾ ಭವನದಲ್ಲಿ ಆಯೋಜಿಸಿದ್ದ ಗ್ಯಾರಂಟಿ (guarantee scheme)ಸಮಿತಿ ಗ್ಯಾರಂಟಿ ಸಭೆಯಲ್ಲಿ ಅಧ್ಯಕ್ಷ ಸತೀಶ ಕೊಬ್ಬಯನವರ ಮಾತನಾಡಿದರು.
Published on
ಕುಂದಗೋಳ: ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು (guarantee scheme) ಕೇವಲ ಅಂಕಿ-ಅಂಶಗಳಿಗೆ ಸೀಮಿತವಾಗಬಾರದು ಎಂದು ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಸತೀಶ ಕೊಬ್ಬಯ್ಯನವರ ಹೇಳಿದರು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಮಂಗಳವಾರ ಆಯೋಜಿಸಿದ್ದ ತಾಲೂಕು ಗ್ಯಾರಂಟಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜನಸಾಮಾನ್ಯರು ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಬೇಕು. ತಾಂತ್ರಿಕ ನೆಪವೊಡ್ಡಿ ಫಲಾನುಭವಿಗಳನ್ನು ಸತಾಯಿಸಬಾರದು. ಗೃಹಲಕ್ಷ್ಮಿ, ಅನ್ನಭಾಗ್ಯ ಸೇರಿದಂತೆ ಪ್ರಮುಖ ಯೋಜನೆಗಳ ಹಣ ಸಕಾಲಕ್ಕೆ ಬರುವಂತೆ ನೋಡಿಕೊಳ್ಳುವುದು ಅಧಿಕಾರಿಗಳ ಜವಾಬ್ದಾರಿ. ಕಟ್ಟಕಡೆಯ ಫಲಾನುಭವಿಗೆ ಯೋಜನೆ ತಲುಪಿಸಬೇಕು. ಇಲ್ಲದಿದ್ದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದರು.
ಸಮಿತಿ ಸದಸ್ಯರು ನೀಡಿದ ದೂರುಗಳನ್ನು ಆಲಿಸಿದ ಅಧ್ಯಕ್ಷರು, ಗ್ರಾಮ ಮಟ್ಟದಲ್ಲಿ ಅರ್ಹರನ್ನು ಗುರುತಿಸಿ ಸೌಲಭ್ಯ ಒದಗಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಒಂದು ವೇಳೆ ಕರ್ತವ್ಯಲೋಪ ಕಂಡುಬಂದಲ್ಲಿ ಉನ್ನತ ಅಧಿಕಾರಿಗಳಿಗೆ ವರದಿ ನೀಡುವುದಾಗಿ ಎಚ್ಚರಿಸಿದರು.
ತಾಪಂ ಇಒ ಜಗದೀಶ ಕಮ್ಮಾರ, ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಗ್ಯಾರಂಟಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net