ಧಾರವಾಡ: ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ರಾಜ್ಯ ಸರ್ಕಾರ ಆಶ್ವಾಸನೆಯಂತೆ ಬಿಸಿಯೂಟ ನೌಕರರಿಗೆ 7,000 ರೂ. ವೇತನ ಹೆಚ್ಚಳ ಮಾಡಬೇಕು ಎನ್ನುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲೆಯ ವಿವಿಧ ತಾಲೂಕುಗಳ ಬಿಸಿಯೂಟ ನೌಕರರು, ಕರ್ನಾಟಕ ರಾಜ್ಯ ಅಕ್ಷರದಾಸೋಹ ನೌಕರರ ಸಂಘ (ಸಿಐಟಿಯು)ದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಜಿಲ್ಲಾಽಕಾರಿಗಳ ಕಚೇರಿ ಎದುರು ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು.
ಧಾರವಾಡ: ರಾಜ್ಯದಲ್ಲಿ ಅಽಕಾರಕ್ಕೆ ಬಂದ ಕಾಂಗ್ರೆಸ್ ರಾಜ್ಯ ಸರ್ಕಾರ ಆಶ್ವಾಸನೆಯಂತೆ ಬಿಸಿಯೂಟ ನೌಕರರಿಗೆ 7,000 ರೂ. ವೇತನ ಹೆಚ್ಚಳ ಮಾಡಬೇಕು ಎನ್ನುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲೆಯ ವಿವಿಧ ತಾಲೂಕುಗಳ ಬಿಸಿಯೂಟ ನೌಕರರು, ಕರ್ನಾಟಕ ರಾಜ್ಯ ಅಕ್ಷರದಾಸೋಹ ನೌಕರರ ಸಂಘ (ಸಿಐಟಿಯು)ದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಜಿಲ್ಲಾಽಕಾರಿಗಳ ಕಚೇರಿ ಎದುರು ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು.
6 ಗಂಟೆ ಕೆಲಸದ ಅವಽಯ ಸುತ್ತೋಲೆ ಹೊರಡಿಸಬೇಕು. ಆರೋಗ್ಯ ವಿಮೆ, ಪಿಂಚಣಿ ಸೇರಿ ಸಾಮಾಜಿಕ ಭದ್ರತೆ ಒದಗಿಸಬೇಕು. ನಿವೃತ್ತಿ ಹೊಂದಿದ ನೌಕರರಿಗೆ ಇಡಿಗಂಟು ತಕ್ಷಣ ಜಾರಿ ಮಾಡಬೇಕು. ಶಾಲೆಗಳಲ್ಲಿ ಗ್ರೂಪ್ `ಡಿ' ನೌಕರರು ಇಲ್ಲದಿರುವುದರಿಂದ ಈ ನೌಕರರಿಂದಲೇ ಶಾಲಾ ಸ್ವಚ್ಚತೆ, ಕೈತೋಟ ನಿರ್ವಹಣೆ, ಶಾಲಾ ಸಮಯದ ಗಂಟೆ ಬಾರಿಸುವುದು ಇನ್ನಿತರ ಕೆಲಸ ನೀಡಿ, ಈ ನೌಕರರಿಗೆ ಶಾಲಾ ಸಿಬ್ಬಂದಿ ಎಂದು ನೇಮಿಸಬೇಕು ಎಂದು ಆಗ್ರಹಿಸಿದರು.
ಈ ವೇಳೆ ಸಿಐಟಿಯು ರಾಜ್ಯ ಕಾರ್ಯದರ್ಶಿ ಮಹೇಶ ಪತ್ತಾರ ಮಾತನಾಡಿ, ಕೇಂದ್ರ ಸರ್ಕಾರ ಕೂಡ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ 12 ವರ್ಷಗಳಿಂದ ನೈಯಾಪೈಸೆ ಅನುಧಾನ ಹೆಚ್ಚಿಸಿಲ್ಲ. ಬಿಸಿಯೂಟ ನೌಕರರ ವೇತನ ಹೆಚ್ಚಳ ಕೂಡಾ ಮಾಡಿಲ್ಲ. ಮಹತ್ವದ ಕೆಲಸ ನಿರ್ವಹಿಸುವ ಈ ಬಡ ಮಹಿಳೆಯರನ್ನು ಅತ್ಯಂತ ಕಡಿಮೆ ವೇತನದಲ್ಲಿ ಹಚ್ಚು ಕೆಲಸ ಮಾಡಿಸಿಕೊಂಡು ಅಮಾನವೀಯವಾಗಿ ಸರ್ಕಾರಗಳು ಅವರನ್ನು ವಂಚಿಸುತ್ತಿವೆ. ಇವರ ನ್ಯಾಯಯುತ ಬೇಡಿಕೆಗಳ ಕುರಿತು ಸರ್ಕಾರ ಗಮನಹರಿಸದಿದ್ದರೆ ಬಿಸಿಯೂಟ ನೌಕರರ ತೀವ್ರತರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಬಳಿಕ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ರವಾನಿಸಲಾಯಿತು. ಐಟಿಯು ಜಿಲ್ಲಾಧ್ಯಕ್ಷ ಬಿ.ಐ. ಈಳೀಗೇರ, ಸಂಘದ ಜಿಲ್ಲಾಧ್ಯಕ್ಷೆ ಚನ್ನಮ್ಮ ಡೊಳ್ಳಿನ, ಪ್ರಧಾನ ಕಾರ್ಯದರ್ಶಿ ಸುನಂದಾ ಚಿಗರಿ, ಖಜಾಂಚಿ ಫಕ್ಕೀರವ್ವ ತೆಂಬದಮನಿ, ಶೋಭಾ ಮೂಲಿಮನಿ, ಯಮನವ್ವ ಮಾದರ, ಕಲಾವತಿ, ಶೋಭಾ ಇತರರಿದ್ದರು.