ಅಣ್ಣಿಗೇರಿ-ಘಟಪ್ರಭಾ ರೈಲು ಮಾರ್ಗ ಮಂಜೂರಿಗೆ ಆಗ್ರಹ rail

rail ಹೊಸ ರೈಲು ಮಾರ್ಗವನ್ನು ಮಂಜೂರು ಮಾಡುವಂತೆ ರೈಲ್ವೆ ಸಚಿವಾಲಯಕ್ಕೆ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ (ಕೆಸಿಸಿಐ) ಆಗ್ರಹಿಸಿದೆ.
rail ಹೊಸ ರೈಲು ಮಾರ್ಗವನ್ನು ಮಂಜೂರು ಮಾಡುವಂತೆ ರೈಲ್ವೆ ಸಚಿವಾಲಯಕ್ಕೆ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ (ಕೆಸಿಸಿಐ) ಆಗ್ರಹಿಸಿದೆ.
Published on

ಪ್ರಮುಖ ಮುಖ್ಯಾಂಶಗಳು

  • ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಕೆಸಿಸಿಐ ಮನವಿ
  • ವಾಣಿಜ್ಯ ದೃಷ್ಟಿಯಿಂದಲೂ ಲಾಭದಾಯಕ
  • ಲಕ್ಷಾಂತರ ಭಕ್ತರಿಗೆ ಅನುಕೂಲ
ಹುಬ್ಬಳ್ಳಿ : rail ಅಣ್ಣಿಗೇರಿಯಿಂದ ನವಲಗುಂದ, ನರಗುಂದ, ಮುನವಳ್ಳಿ ಹಾಗೂ ಯಲ್ಲಮ್ಮನಗುಡ್ಡ (ಸವದತ್ತಿ) ಮಾರ್ಗವಾಗಿ ಘಟಪ್ರಭಾವರೆಗೆ ಹೊಸ ರೈಲು ಮಾರ್ಗವನ್ನು ಮಂಜೂರು ಮಾಡುವಂತೆ ರೈಲ್ವೆ ಸಚಿವಾಲಯಕ್ಕೆ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ (ಕೆಸಿಸಿಐ) ಆಗ್ರಹಿಸಿದೆ.
ಈ ಕುರಿತು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಮನವಿ ಸಲ್ಲಿಸಿರುವ ಕೆಸಿಸಿಐ ಅಧ್ಯಕ್ಷ ಜಿ.ಕೆ. ಆದಪ್ಪಗೌಡರ, ಉತ್ತರ ಕರ್ನಾಟಕದ ರೈಲ್ವೆ ಸಂಪರ್ಕವನ್ನು ಬಲಪಡಿಸುವ ಮಹತ್ವದ ಯೋಜನೆಗೆ ಅನುಮೋದನೆ ದೊರಕಿಸಲು ರೈಲ್ವೆ ಸಚಿವರಿಗೆ ಶಿಫಾರಸ್ಸು ಮಾಡುವಂತೆ ಆಗ್ರಹಿಸಿದ್ದಾರೆ.
ಈ ಬೇಡಿಕೆಯನ್ನು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯು ಹಲವು ವರ್ಷಗಳಿಂದ ನಿರಂತರವಾಗಿ ಬೇಡಿಕೆ ಮುಂದಿಟ್ಟಿದ್ದರೂ ರೈಲ್ವೆ ಬಜೆಟ್​ನಲ್ಲಿ ಈ ಯೋಜನೆಗೆ ಸ್ಥಾನ ದೊರೆತಿರಲಿಲ್ಲ.
ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ಜಿ.ಕೆ. ಆದಪ್ಪಗೌಡರ ಅವರು ಈ ಪ್ರಸ್ತಾವಿತ ರೈಲು ಮಾರ್ಗವು ಉತ್ತರ ಕರ್ನಾಟಕದ ಸಾಮಾಜಿಕ, ಆರ್ಥಿಕ ಹಾಗೂ ಧಾರ್ವಿುಕ ಅಭಿವೃದ್ಧಿಗೆ ಅತ್ಯಂತ ಮಹತ್ವದ್ದಾಗಿದೆ.
ವಿಶೇಷವಾಗಿ ಸವದತ್ತಿಯಲ್ಲಿರುವ ಪ್ರಸಿದ್ಧ ಶ್ರೀ ಯಲ್ಲಮ್ಮ ದೇವಿ ದೇವಸ್ಥಾನಕ್ಕೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಅನುಕೂಲ ಒದಗಿಸಲಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕ, ಮಹಾರಾಷ್ಟ್ರ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳಿಂದ ಪ್ರತಿದಿನ ಸುಮಾರು 75 ಸಾವಿರದಿಂದ 1 ಲಕ್ಷದವರೆಗೆ ಭಕ್ತರು ಶ್ರೀ ಯಲ್ಲಮ್ಮ ದೇವಿ ದೇವಸ್ಥಾನಕ್ಕೆ ಆಗಮಿಸುತ್ತಿದ್ದು, ಮಂಗಳವಾರ ಹಾಗೂ ಶುಕ್ರವಾರದಿಂದ ಭಾನುವಾರದವರೆಗೆ ಭಕ್ತರ ಸಂಖ್ಯೆ ಮತ್ತಷ್ಟು ಹೆಚ್ಚಾಗುತ್ತದೆ.
ಬಹುತೇಕ ಭಕ್ತರು ಆರ್ಥಿಕವಾಗಿ ದುರ್ಬಲ ವರ್ಗದವರು. ರಸ್ತೆ ಸಾರಿಗೆಯನ್ನೇ ಅವಲಂಬಿಸಬೇಕಾಗಿರುವುದರಿಂದ ಹೆಚ್ಚಿನ ವೆಚ್ಚ, ಪ್ರಯಾಣದ ಆಯಾಸ ಹಾಗೂ ಸುರಕ್ಷತಾ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಹೊಸ ರೈಲು ಮಾರ್ಗವು ಅವರಿಗೆ ಸುರಕ್ಷಿತ, ಕಡಿಮೆ ವೆಚ್ಚದ ಹಾಗೂ ಸುಗಮ ಪ್ರಯಾಣದ ವ್ಯವಸ್ಥೆಯನ್ನು ಕಲ್ಪಿಸಲಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಈ ಯೋಜನೆಯು ಭಾರತೀಯ ರೈಲ್ವೆಗೆ ವಾಣಿಜ್ಯ ದೃಷ್ಟಿಯಿಂದಲೂ ಲಾಭದಾಯಕವಾಗಲಿದೆ. ಉತ್ತರ ಕರ್ನಾಟಕದ ಪ್ರಮುಖ ಪಟ್ಟಣಗಳನ್ನು ಸಂರ್ಪಸುವ ಮೂಲಕ ವರ್ಷಪೂರ್ತಿ ಹೆಚ್ಚಿನ ಪ್ರಯಾಣಿಕರ ಸಂಚಾರ ಖಚಿತವಾಗಲಿದ್ದು, ರೈಲ್ವೆಗೆ ನಿರಂತರ ಆದಾಯವೂ ಲಭಿಸಲಿದೆ ಎಂದು ಸಂಸ್ಥೆ ಅಭಿಪ್ರಾಯಪಟ್ಟಿದೆ.
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಸಹಕಾರದಿಂದ ಉತ್ತರ ಕರ್ನಾಟಕದ ಮೂಲಸೌಕರ್ಯ ಅಭಿವೃದ್ಧಿಗೆ ಸಹಕಾರಿಯಾಗಿರುವ ಈ ಮಹತ್ವಾಕಾಂಕ್ಷಿ ಯೋಜನೆ ಅನುಷ್ಠಾನಗೊಳ್ಳಲಿ ಎಂದು ಕೋರಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net