Vidyarthi Mitra ವಿದ್ಯಾರ್ಥಿಗಳು ಓದುವ ಹವ್ಯಾಸ ಬೆಳೆಸಿಕೊಳ್ಳಿ

Vidyarthi Mitra  ಕಲಘಟಗಿ ತಾಲೂಕಿನ ಚಳಮಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸ್ವರ್ಣ ಸಮೂಹ ಸಂಸ್ಥೆಯ ಎಂಡಿ ಡಾ. ವಿ.ಎಸ್.ವಿ. ಪ್ರಸಾದ ವಿಜಯವಾಣಿ ವಿದ್ಯಾರ್ಥಿ ಉದ್ಯೋಗ ಮಿತ್ರ ವಿತರಿಸಿದರು. ಮಹಾದೇವಪ್ಪ ಸುಬಾನವರ, ಸೀತಮ್ಮ ಕದಮ, ಫಕ್ಕೀರಯ್ಯ ಹಿರೇಮಠ, ಪುಷ್ಪಾ ಬಾಣದ, ಮಾರುತಿ ಭಜಂತ್ರಿ ಇತರರು ಇದ್ದರು.
Vidyarthi Mitra ಕಲಘಟಗಿ ತಾಲೂಕಿನ ಚಳಮಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸ್ವರ್ಣ ಸಮೂಹ ಸಂಸ್ಥೆಯ ಎಂಡಿ ಡಾ. ವಿ.ಎಸ್.ವಿ. ಪ್ರಸಾದ ವಿಜಯವಾಣಿ ವಿದ್ಯಾರ್ಥಿ ಉದ್ಯೋಗ ಮಿತ್ರ ವಿತರಿಸಿದರು. ಮಹಾದೇವಪ್ಪ ಸುಬಾನವರ, ಸೀತಮ್ಮ ಕದಮ, ಫಕ್ಕೀರಯ್ಯ ಹಿರೇಮಠ, ಪುಷ್ಪಾ ಬಾಣದ, ಮಾರುತಿ ಭಜಂತ್ರಿ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ವಿದ್ಯಾರ್ಥಿ ಉದ್ಯೋಗ ಮಿತ್ರ ವಿತರಿಸಿದ ಡಾ. ವಿ.ಎಸ್.ವಿ. ಪ್ರಸಾದ ಸಲಹೆ.
  • ಇಷ್ಟಪಟ್ಟು ಓದುವ ಮೂಲಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಬೇಕು.
  • ಪ್ರತಿಯೊಬ್ಬ ವಿದ್ಯಾರ್ಥಿ ಉನ್ನತ ಗುರಿ ಹೊಂದಬೇಕು.
ಕಲಘಟಗಿ ತಾಲೂಕಿನ ಚಳಮಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಸರ್ಕಾರಿ ಪ್ರೌಢ ಶಾಲೆಯಲ್ಲಿ ಆಯೋಜಿಸಿದ್ದ ವಿದ್ಯಾರ್ಥಿ ಉದ್ಯೋಗ ಮಿತ್ರ ಪತ್ರಿಕೆ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಪರೀಕ್ಷೆಗೆ ಹೆಚ್ಚು ಅನುಕೂಲವಾಗಿರುವ ಈ ಪತ್ರಿಕೆಯಲ್ಲಿ ಉದ್ಯೋಗ ಮಾಹಿತಿಯೂ ಸಿಗುತ್ತದೆ ಎಂದರು.
ಪ್ರತಿಯೊಬ್ಬ ವಿದ್ಯಾರ್ಥಿ ಉನ್ನತ ಗುರಿ ಹೊಂದಬೇಕು. ಗುರಿ ಸಾಧನೆಯ ಮಾರ್ಗದಲ್ಲಿ ಬರುವ ಅಡಚಣೆಗಳಿಗೆ ಆತಂಕಗೊಳ್ಳದೆ, ನಿರಂತರ ಪ್ರಯತ್ನ ಮಾಡಬೇಕು. ಕಷ್ಟಪಟ್ಟರೆ ಮಾತ್ರ ಜೀವನದಲ್ಲಿ ಸುಖ ಸಿಗುತ್ತದೆ ಎಂದು ಸಲಹೆ ನೀಡಿದರು.
ವಿಜಯವಾಣಿ ದಿನಪತ್ರಿಕೆ ಸ್ಥಾನಿಕ ಸಂಪಾದಕ ಪ್ರಕಾಶ ಶೇಟ್ ಮಾತನಾಡಿ, ಎಸ್​ಎಸ್​ಎಲ್​ಸಿ ಪರೀಕ್ಷೆ ಜೀವನದ ಮಹತ್ವದ ಘಟ್ಟ. ಈ ಪರೀಕ್ಷೆ ಎದುರಿಸಲು ವಿದ್ಯಾರ್ಥಿ ಮಿತ್ರ ಅತ್ಯಂತ ಅನುಕೂಲಕರವಾಗಿದ್ದು, ಈ ಪತ್ರಿಕೆಗೆ ರಾಜ್ಯಾದ್ಯಂತ ಹೆಚ್ಚಿನ ಬೇಡಿಕೆ ಇದೆ ಎಂದರು.
ವಿದ್ಯಾರ್ಥಿಗಳ ಅನುಕೂಲದ ದೃಷ್ಟಿಯಿಂದ ಕಡಿಮೆ ಬೆಲೆಯಲ್ಲಿ ವಿದ್ಯಾರ್ಥಿ ಮಿತ್ರ ವಿತರಿಸಲಾಗುತ್ತಿದೆ. ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕು.
ಕಷ್ಟಪಟ್ಟು ಓದದೇ, ಇಷ್ಟಪಟ್ಟು ಓದುವ ಮೂಲಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಬೇಕು. ಆ ಮೂಲಕ ಉತ್ತಮ ಉದ್ಯೋಗ ಪಡೆದುಕೊಳ್ಳಬೇಕು ಅಥವಾ ಉದ್ಯಮಿಯಾಗಿ ಬೆಳೆಯಬೇಕು ಎಂದು ಹೇಳಿದರು.
ಪ್ರಾಥಮಿಕ ಶಾಲೆ ಪ್ರಭಾರಿ ಮುಖ್ಯೋಪಾಧ್ಯಾಯ ಮಾರುತಿ ಭಜಂತ್ರಿ ಮಾತನಾಡಿ, ಶಾಲೆಯ ಅಭಿವೃದ್ಧಿಗೆ ಚಳಮಟ್ಟಿ ಗ್ರಾಮಸ್ಥರು ಹಾಗೂ ದಾನಿಗಳು ನೀಡಿದ ಸಹಕಾರವನ್ನು ವಿವರಿಸಿದರು.
ವಿದ್ಯಾರ್ಥಿ ಮಿತ್ರ ಪತ್ರಿಕೆ ಓದುವುದರಿಂದ ಆಗುತ್ತಿರುವ ಶೈಕ್ಷಣಿಕ ಪ್ರಯೋಜನಗಳ ಕುರಿತು ವಿದ್ಯಾರ್ಥಿನಿಯರಾದ ಸೃಷ್ಟಿ ಚಿಕ್ಕಮಠ ಹಾಗೂ ಪ್ರತಿಭಾ ಸೋಮನಕೊಪ್ಪ ಅಭಿಪ್ರಾಯ ಹಂಚಿಕೊಂಡರು.
ಗ್ರಾಪಂ ಅಧ್ಯಕ್ಷ ಮಹಾದೇವಪ್ಪ ಸುಬಾನವರ, ಸದಸ್ಯೆ ಸೀತಮ್ಮ ಕದಮ, ಎಸ್​ಡಿಎಂಸಿ ಅಧ್ಯಕ್ಷ ಫಕ್ಕೀರಯ್ಯ ಹಿರೇಮಠ, ಪ್ರೌಢ ಶಾಲೆ ಪ್ರಭಾರಿ ಮುಖ್ಯೋಪಾಧ್ಯಾಯರಾದ ಪುಷ್ಪಾ ಬಾಣದ, ಎಸ್​ಡಿಎಂಸಿ ಸದಸ್ಯರಾದ ಅಶೋಕ ಮಿಶ್ರಿಕೋಟಿ ಹಾಗೂ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net