ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಅಭಿವೃದ್ಧಿ rural
rural ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದಿಂದ ಹುಬ್ಬಳ್ಳಿಯ ವಿಜಯನಗರದಲ್ಲಿ ಆಯೋಜಿಸಿದ್ದ ಧಾರ್ವಿುಕ ಸಭೆಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹುಬ್ಬಳ್ಳಿ ವಿಜಯನಗರ ವಲಯದಲ್ಲಿ ಭಾನುವಾರ ಆಯೋಜಿಸಿದ್ದ ಶ್ರೀ ಸತ್ಯನಾರಾಯಣಸ್ವಾಮಿ ಪೂಜೆ ಹಾಗೂ ಧಾರ್ವಿುಕ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಧ್ಯಮ ವರ್ಗದ ಕುಟುಂಬಗಳ ಅಭಿವೃದ್ಧಿಗಳನ್ನು ಮಾಡುತ್ತ ಸಮಾಜಕ್ಕೆ ಮಾದರಿಯಾಗಿರುವ ಸಂಸ್ಥೆ ಇದಾಗಿದೆ ಎಂದರು.
ಅತಿಥಿಯಾಗಿದ್ದ ಯೋಜನೆಯ ಧಾರವಾಡ ಪ್ರಾದೇಶಿಕ ನಿರ್ದೇಶಕಿ ದಯಾಶೀಲ ಅವರು, ಯೋಜನೆಯ ಕಾರ್ಯಕ್ರಮಗಳ ಕುರಿತು ವಿವರ ನೀಡಿದರು.
ಸಾನ್ನಿಧ್ಯ ವಹಿಸಿದ್ದ ನವಲಗುಂದ ಪಂಚಗೃಹ ಹಿರೇಮಠದ ಶ್ರೀ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಅಶೀರ್ವಚನ ನೀಡಿ, ಸಂಘದ ಸದಸ್ಯರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಸಲಹೆ ನೀಡಿದರು.
ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಶಾಸಕ ಮಹೇಶ ಟೆಂಗಿನಕಾಯಿ ಪ್ರಮಾಣ ಪತ್ರ ವಿತರಿಸಿದರು. ರಾಜೇಶ್ವರಿ ಚಿಕ್ಕವೀರಯ್ಯನವರ ಅಧ್ಯಕ್ಷತೆ ವಹಿಸಿದ್ದರು.
ಪಾಲಿಕೆ ಸದಸ್ಯರಾದ ರಾಜಣ್ಣ ಕೊರವಿ, ರೂಪಾ ಶೆಟ್ಟಿ, ವರದಶ್ರೀ ಫೌಂಡೇಷನ್ ಸಂಸ್ಥಾಪಕ ಮಲ್ಲಿಕಾರ್ಜುನ ರಡ್ಡೆರ, ಧಾರವಾಡ ಜಿಲ್ಲಾ ನಿರ್ದೇಶಕ ಹನುಮಂತ ನಾಯಕ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಡಾ. ರಮೇಶ ಮಹಾದೇವಪ್ಪನವರ, ಇತರರಿದ್ದರು.