devotional ಹುಬ್ಬಳ್ಳಿಯ ಸಿಬಿಟಿ ವಲಯದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಿದ್ದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ಸಮಾರಂಭದಲ್ಲಿ ಶ್ರೀ ಅಭಿನವ ಬಸವಣ್ಣಜ್ಜನವರು, ಮೇಯರ್ ದುರ್ಗಮ್ಮ ಬೆಜವಾಡ, ಮೋಹನ ಅಸುಂಡಿ, ನಿರಂಜನಯ್ಯ ಹಿರೇಮಠ, ಪ್ರಕಾಶ ಬೆಂಡಿಗೇರಿ ಇತರರು ಇದ್ದರು.
ಹುಬ್ಬಳ್ಳಿ: devotional ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗ್ರಾಮೀಣ ತಾಲೂಕಿನ ಸಿಬಿಟಿ ವಲಯದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ಗುರುವಾರ ನಡೆಯಿತು.
ಕುಂದಗೋಳ ಕಲ್ಯಾಣಪುರಮಠದ ಶ್ರೀ ಅಭಿನವ ಬಸವಣ್ಣಜ್ಜನವರು ಸಾನ್ನಿಧ್ಯ ವಹಿಸಿ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಹಲವಾರು ಸಮಾಜಮುಖಿ ಕೆಲಸಗಳು ನಡೆಯುತ್ತಿದ್ದು, ಆದರ್ಶಮಯವಾಗಿವೆ ಎಂದು ಶ್ಲಾಘಿಸಿದರು.
ಉದ್ಘಾಟನೆ ನೆರವೇರಿಸಿದ ಮೇಯರ್ ದುರ್ಗಮ್ಮ ಬೆಜವಾಡ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಮಾಜಿ ಉಪಾಧ್ಯಕ್ಷ ಮೋಹನ ಅಸುಂಡಿ ಮಾತನಾಡಿದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಹನುಮಂತ ನಾಯ್ಕ, ಯೋಜನೆ ನಡೆದು ಬಂದ ದಾರಿ, ಶ್ರೀಕ್ಷೇತ್ರದ ಪೂಜ್ಯರು ಮಾಡುವ ಸಮಾಜಮುಖಿ ಸೇವೆಗಳ ಬಗ್ಗೆ ತಿಳಿಸಿದರು.
ಪಾಲಿಕೆ ಸದಸ್ಯ ನಿರಂಜನಯ್ಯ ಹಿರೇಮಠ, ಶ್ರೀಮದ್ವೀರಶೈವ ಸದ್ಬೋಧನಾ ಸಂಸ್ಥೆ ಅಧ್ಯಕ್ಷ ಪ್ರಕಾಶ ಬೆಂಡಿಗೇರಿ, ಮಾರುತಿ ಸೇಟ್, ಸೋಮಲಿಂಗ, ರೂಪಾ ಕುಲಮಿ, ಸ್ಥಳಿಯ ಸೇವಾಪ್ರತಿನಿಧಿಗಳು ವರಮಹಾಲಕ್ಷ್ಮೀ ಪೂಜಾ ಸಮಿತಿಯ ಪದಾಧಿಕಾರಿಗಳು ಭಾಗವಹಿಸಿದ್ದರು.