ಜೆಎಸ್​ಎಸ್​ ಶಾಲೆಯಲ್ಲಿ ವೈವಿಧ್ಯಮಯ ಚಟುವಟಿಕೆ

ಡಾ. ಡಿ. ವೀರೇಂದ್ರ ಹೆಗ್ಗಡೆ 79ನೇ ಜನ್ಮದಿನೋತ್ಸವ
ಹುಬ್ಬಳ್ಳಿಯ ಉಣಕಲ್ಲ ಜೆಎಸ್​ಎಸ್​ ಸೆಂಟ್ರಲ್​ ಸ್ಕೂಲ್​ನಲ್ಲಿ ಡಾ. ವೀರೇಂದ್ರ ಹೆಗ್ಗಡೆ ಅವರ ಜನ್ಮದಿನ ಅಂಗವಾಗಿ ಏರ್ಪಡಿಸಿದ್ದ ಸಮಾರಂಭದಲ್ಲಿ ವಿದ್ಯಾರ್ಥಿಗಳು ವಿವಿಧ ರೂಪಕ ಪ್ರದರ್ಶಿಸಿದರು.
ಹುಬ್ಬಳ್ಳಿಯ ಉಣಕಲ್ಲ ಜೆಎಸ್​ಎಸ್​ ಸೆಂಟ್ರಲ್​ ಸ್ಕೂಲ್​ನಲ್ಲಿ ಡಾ. ವೀರೇಂದ್ರ ಹೆಗ್ಗಡೆ ಅವರ ಜನ್ಮದಿನ ಅಂಗವಾಗಿ ಏರ್ಪಡಿಸಿದ್ದ ಸಮಾರಂಭದಲ್ಲಿ ವಿದ್ಯಾರ್ಥಿಗಳು ವಿವಿಧ ರೂಪಕ ಪ್ರದರ್ಶಿಸಿದರು.
Published on: 

ಹುಬ್ಬಳ್ಳಿ: ಶ್ರೀಕ್ಷೇತ್ರ ಧರ್ಮಸ್ಥಳ ಧಮಾರ್ಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ 79ನೇ ಜನ್ಮದಿನೋತ್ಸವವನ್ನು ಇಲ್ಲಿನ ಉಣಕಲ್ಲ ಜೆ.ಎಸ್​.ಎಸ್​ ಶ್ರೀ ಮಂಜುನಾಥೇಶ್ವರ ಸೆಂಟ್ರಲ್​ ಸ್ಕೂಲ್​ನಲ್ಲಿ ವೈವಿಧ್ಯಮಯವಾಗಿ ಆಚರಿಸಲಾಯಿತು.

ಪ್ರಾಂಶುಪಾಲ ಪ್ರೇರಣಾ ಪಾತ್ರಾ ಮಾರ್ಗದರ್ಶನದಲ್ಲಿ ಮಕ್ಕಳು ವಿವಿಧ ಚಟುವಟಿಕೆ, ಸಾಂಸತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

ಡಾ. ಹೆಗ್ಗಡೆ ಅವರ ಸಮಾಜಮುಖಿ ಸೇವೆಗಳನ್ನು ಪರಿಚಯಿಸುವ ವಿಶಿಷ್ಟ ಸಾಂಸ್ಕೃತಿಕ ಹಾಗೂ ರೂಪಕಗಳನ್ನು ಪ್ರಸ್ತುತಪಡಿಸಿದರು. ಪೂಜ್ಯರು ದೇಶಾದ್ಯಂತ ತಮ್ಮ ಸೇವಾ ಕಾರ್ಯಗಳ ಮೂಲಕ ಗುರುತಿಸಿಕೊಂಡಿರುವುದನ್ನು ರೂಪಕಗಳ ಮೂಲಕ ತೋರಿಸಿದರು.

ಅವರ ಸೇವೆ ಕರ್ನಾಟಕಕ್ಕೆ ಸೀಮಿತವಾಗದೆ, ಭಾರತದ ವಿವಿಧ ರಾಜ್ಯಗಳಿಗೂ ವಿಸ್ತರಿಸಿದೆ. ಅವರ ದೀರ್ಘಾಯುಷ್ಯ ಮತ್ತು ಆರೋಗ್ಯಕ್ಕಾಗಿ ಪ್ರಾರ್ಥಿಸಿ ದೇಶದ ವಿವಿಧ ಭಾಗಗಳಲ್ಲಿ ನಡೆಯುವ ಸೇವಾ ಕಾರ್ಯಗಳನ್ನು ವಿದ್ಯಾರ್ಥಿಗಳು ಇಲ್ಲಿ ಅನಾವರಣಗೊಳಿಸಿದರು.

ಸಂಭ್ರಮಾಚರಣೆಯ ಕೇಂದ್ರಬಿಂದುವಾಗಿರುವ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷಾಂತರ ಭಕ್ತರು ಸೇರಿ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ. 15ಸಾವಿರಕ್ಕೂ ಹೆಚ್ಚು ಜನರಿಗೆ ಮಹಾ ಅನ್ನದಾನ, ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರಿಂದ ವಿಶೇಷ ಪ್ರಾರ್ಥನೆಗಳು ನಡೆಯುತ್ತವೆ ಎಂದು ತಿಳಿಸಿದರು.

ಮಹಾರಾಷ್ಟ್ರದಲ್ಲಿ ಅಲ್ಲಿನ ಭಕ್ತರು ಬೃಹತ್​ ರಕ್ತದಾನ ಶಿಬಿರ ಆಯೋಜಿಸಿದ್ದು, ಆಸ್ಪತ್ರೆಗಳ ನೆರವಿಗಾಗಿ ಸಾವಿರಕ್ಕೂ ಹೆಚ್ಚು ಯೂನಿಟ್​ ರಕ್ತ ಸಂಗ್ರಹಿಸಿ ಮಾನವೀಯತೆ ಮೆರೆದಿದ್ದಾರೆ. ತಮಿಳುನಾಡಿನ ಎಸ್​.ಕೆ.ಎಂ ಕಾಲೇಜಿನ ವಿದ್ಯಾರ್ಥಿಗಳು ಸೇವಾ ಮನೋಭಾವದಿಂದ ಬಡ ಮಕ್ಕಳಿಗೆ ಉಚಿತವಾಗಿ ಪುಸ್ತಕಗಳು ಮತ್ತು ಬಟ್ಟೆಗಳನ್ನು ವಿತರಿಸುವ ಮೂಲಕ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಿದ್ದಾರೆ. ಹೀಗೆ ಅಕ್ಕಪಕ್ಕದ ಎಲ್ಲ ರಾಜ್ಯಗಳಲ್ಲಿ ಅನೇಕ ಸೇವಾ ಚಟುವಟಿಕೆಗಳು ನಡೆದವು ಎಂದು ವಿವರಿಸಿದರು.