dk shivakumar ರಾಹುಲ್ ಗಾಂಧಿ ಭ್ರಷ್ಟಾಚಾರ ಮಾಡಿದ್ದಾರಾ?

dk shivakumar ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ
dk shivakumar ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ
Published on

ಪ್ರಮುಖ ಮುಖ್ಯಾಂಶಗಳು

  • ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಪ್ರಶ್ನೆ
ಹುಬ್ಬಳ್ಳಿ: ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಾಗಿರುವುದಕ್ಕೆ ನನ್ನ ವಿರುದ್ಧ ದಾಖಲಾಗಿರುವ ಪ್ರಕರಣಗಳು ಬ್ಯಾಡ್ಜ್‌ಗಳಿದ್ದಂತೆ ಎಂದಿದ್ದಾರೆ. ಅವರೇನು ಮಾಡಬಾರದ ಭ್ರಷ್ಟಾಚಾರ ಮಾಡಿದ್ದಾರಾ? ಕೆಪಿಎಸ್‌ಸಿ, ನೀಟ್ ಪರೀಕ್ಷೆ ಅಕ್ರಮದಲ್ಲಿ ಭಾಗಿಯಾಗಿದ್ದಾರಾ? ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ dk shivakumar ಪ್ರಶ್ನೆ ಮಾಡಿದರು.
ನಗರದ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ತಮ್ಮ ತಪ್ಪಿಲ್ಲದಿದ್ದರೂ ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಉದ್ದೇಶದಿಂದ ಬಿ. ನಾಗೇಂದ್ರ ಅವರು ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷಕ್ಕಾಗಿ ಅವರು ಸಚಿವ ಸ್ಥಾನ ತ್ಯಾಗ ಮಾಡಿದ್ದಾರೆ. ಅದಕ್ಕೆ ಎಲ್ಲಿ ಉತ್ತರ ಕೊಡಬೇಕೋ ಅಲ್ಲಿ ಕೊಡುತ್ತೇನೆ ಎಂದರು.
ಬಿಜೆಪಿಯವರು ಮಾಡುತ್ತಿರುವುದು ಪಾದಯಾತ್ರೆಯಲ್ಲ. ಅದು ರಾಜಕಾರಣ. ನಾವು ಬಳ್ಳಾರಿ, ಮೇಕೆದಾಟು, ಭಾರತ್ ಜೋಡೊ ಸೇರಿ ಹಲವಾರು ಪಾದಯಾತ್ರೆಗಳನ್ನು ಮಾಡಿದ್ದೇವೆ. ನಮ್ಮ ಪಾದಯಾತ್ರೆ ದೇಶ, ರಾಜ್ಯದ ಹಿತಕ್ಕಾಗಿ. ಅವರ ಯಾತ್ರೆ ರಾಜಕಾರಣಕ್ಕಾಗಿ ಎಂದು ತಿರುಗೇಟು ನೀಡಿದರು.
101 ತಾಲೂಕುಗಳನ್ನು ಮಾತ್ರ ಬರ ಪೀಡಿತ ಎಂದು ಘೋಷಣೆ ಮಾಡಿರುವುದಕ್ಕೆ ರೈತರು, ಶಾಸಕರಲ್ಲಿ ಅಸಮಾಧಾನ ಇರುವುದು ನಿಜ. ಆದರೆ, ರಾಜಕೀಯವಾಗಿ ಈ ಬಗ್ಗೆ ತೀರ್ಮಾನ ಮಾಡಲು ಬರುವುದಿಲ್ಲ. ಕೇಂದ್ರ ತಂಡ ಯಾವುದಾದರೊಂದು ತಾಲೂಕಿಗೆ ಭೇಟಿ ನೀಡಿ ಪರಿಶೀಲಿಸಿ ಬರ ಇಲ್ಲ, ತಪ್ಪು ವರದಿ ನೀಡಿದ್ದೀರಿ ಎಂದರೆ ಅದಕ್ಕೆ ಯಾರು ಜವಾಬ್ದಾರಿ? ಎಂದು ಪ್ರಶ್ನಿಸಿದರು.
ನಮ್ಮ ಸಚಿವರುಗಳು ಎಲ್ಲ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ವರದಿ ನೀಡಿದ್ದಾರೆ. ಈ ವರದಿ ಸರಿಯೇ ಎಂದು ಅಧಿಕಾರಿಗಳು ಪರಿಶೀಲನೆ ಮಾಡುತ್ತಾರೆ. ಕೆಲವು ಕಡೆ ಹಸಿರು ಇದ್ದರೂ ಬೆಳೆ ನಾಶವಾಗಿದೆ. ನನ್ನ ಕ್ಷೇತ್ರ ಕನಕಪುರದಲ್ಲೂ ಬರ ಇದೆ. ಆದರೂ ಅದು ಬರ ಪೀಡಿತ ತಾಲೂಕುಗಳ ಪಟ್ಟಿಯಲ್ಲಿಲ್ಲ. ನಾನು ಮುಖ್ಯಮಂತ್ರಿ ಆಗಿದ್ದರೂ ನಿಯಮ ಮೀರಿ ಬರ ಘೋಷಣೆ ಮಾಡಲು ಬರುವುದಿಲ್ಲ ಎಂದರು.
ಬರಕ್ಕೆ ಸಂಬಂಧಿಸಿದಂತೆ ವೈಜ್ಞಾನಿಕವಾಗಿ ಪರಿಶೀಲನೆ ನಡೆಸಿ, ಕೇಂದ್ರ ಸರ್ಕಾರಕ್ಕೆ ವರದಿ ನೀಡಲಾಗುವುದು. ಈ ವಿಷಯದಲ್ಲಿ ವಿರೋಧ ಪಕ್ಷದವರೂ ಚರ್ಚೆ ಮಾಡಬೇಕು. ಆದರೆ, ಅವರು ಸದನದಲ್ಲಿ ಕೆಪಿಎಸ್‌ಸಿ, ಬಿ. ನಾಗೇಂದ್ರ ಅವರ ಬಗ್ಗೆ ಚರ್ಚೆ ನಡೆಸಿ, ಬರ ಕುರಿತು ಗಮನ ಸೆಳೆಯಲಿಲ್ಲ. ಅವರಿಗೆ ರಾಜಕಾರಣವೇ ಮುಖ್ಯವಾಗಿದ್ದು, ರಾಜ್ಯ, ರೈತರ ಹಿತ ಅವರಿಗೆ ಬೇಕಿಲ್ಲ. ನಾನು ಮುಖ್ಯಮಂತ್ರಿ ಆಗಿರುವುದು ಯಾವ ಪಕ್ಷದವರಿಗೂ ಸಹಿಸಿಕೊಳ್ಳಲು ಆಗುತ್ತಿಲ್ಲ. ಅವರ ಹೋರಾಟ ಯಶಸ್ವಿಯಾಗಲಿ ಎಂದು ಹೇಳಿದರು.
ಯುವಕರಿಗೆ ಉತ್ತೇಜನ ನೀಡಲು, ಅವರು ನಶೆ ಬಿಟ್ಟು ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಬೇಕೆಂಬ ಸದುದ್ದೇಶದಿಂದ ಭಾರತ್ ಜೋಡೊ ಸಂಘಗಳನ್ನು ರಚಿಸಲಾಗಿದೆ. ಇದರಲ್ಲಿ ಎಲ್ಲ ಜಾತಿ, ಧರ್ಮದವರು ನೋಂದಣಿ ಮಾಡಿಕೊಳ್ಳಬಹುದು. ಒತ್ತಡ ಹಾಕಿ ನೋಂದಣಿ ಮಾಡಿಸುವ ಅವಶ್ಯಕತೆ ನಮಗಿಲ್ಲ. ನೋಂದಣಿಗೆ ಯಾವುದೇ ಬಲವಂತವಿಲ್ಲ. ಸ್ವಯಂಪ್ರೇರಿತವಾಗಿ ನೋಂದಣಿ ಮಾಡಿಕೊಳ್ಳಲು ಲಕ್ಷಾಂತರ ಯುವಕರು ಉತ್ಸುಕರಾಗಿದ್ಧಾರೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net