ಡಾ.ಬಾಬು ಜಗಜೀವನರಾಮ್ ಸಮುದಾಯ ಭವನವು ಮಾದರಿ ಕಟ್ಟಡವಾಗಿದೆ.
ಹಸಿರು ಕ್ರಾಂತಿಯನ್ನು ಹುಟ್ಟು ಹಾಕಿದರು.
ದೇಶದ ಬಗ್ಗೆ ಚಿಂತನೆ ಮಾಡುತ್ತಿದ್ದರು.
ಹುಬ್ಬಳ್ಳಿ :
Revolution ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ ಹಾಗೂ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಮ್ ಅವರಿಬ್ಬರೂ ದೇಶ ಕಂಡ ಮಹಾನ್ ವ್ಯಕ್ತಿಗಳು. ಡಾ. ಅಂಬೇಡ್ಕರ ಅವರು ಎಲ್ಲರಿಗೂ ಸಮಾನ ಬದುಕು ಸಿಗಬೇಕೆಂದು ಬಯಸಿದರೆ, ಡಾ. ಜಗಜೀವನರಾಮ್ ಅವರು ಜನ, ಜಾನುವಾರುಗಳು ಬರಗಾಲದಿಂದ ತೊಂದರೆಗೀಡಾಗಬಾರದೆಂದು ಯೋಜನೆ ರೂಪಿಸಿದವರು ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಇಲ್ಲಿನ ನ್ಯೂ ಇಂಗ್ಲಿಷ್ ಸ್ಕೂಲ್ ಬಳಿಯ ಪಡದಯ್ಯನ ಹಕ್ಕಲದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಡಾ. ಬಾಬು ಜಗಜೀವನರಾಮ್ ಸಮುದಾಯ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಡಾ.ಬಾಬು ಜಗಜೀವನರಾಮ್ ಅವರು ಕೃಷಿ ಮಂತ್ರಿಯಾಗಿದ್ದಾಗ ದೇಶದಲ್ಲಿ ಆಹಾರ ಸಮಸ್ಯೆ ಉಂಟಾಗಿತ್ತು. ಅಂತಹ ಸಂದರ್ಭದಲ್ಲಿ ಹಸಿರು ಕ್ರಾಂತಿಯನ್ನು ಹುಟ್ಟು ಹಾಕಿದರು. ದೇಶದ ಬಗ್ಗೆ ಚಿಂತನೆ ಮಾಡುತ್ತಿದ್ದರು. ಸಮಾಜದಲ್ಲಿರುವ ಬಡವರ ಏಳ್ಗೆಗಾಗಿ ಶ್ರಮಿಸಿದ್ದಾರೆ ಎಂದರು.
9.15 ಕೋಟಿ ರೂ. ವೆಚ್ಚದಲ್ಲಿ ಡಾ.ಬಾಬು ಜಗಜೀವನರಾಮ್ ಸಮುದಾಯ ಭವನವನ್ನು ನಿರ್ವಿುಸಲಾಗಿದೆ.
ಅಡುಗೆ ಮನೆ, ಇತರೆ ಕಾಮಗಾರಿಗಳು ಉಳಿದಿವೆ. 4.50 ಕೋಟಿ ರೂ. ಬಿಡುಗಡೆ ಆಗಬೇಕಿದೆ. ಬೆಂಗಳೂರಿನಲ್ಲಿ ಸಹ ಇದೇ ಮಾದರಿಯ ಕಟ್ಟಡವನ್ನು ನಿಮಾಣ ಮಾಡಲಾಗಿದೆ.
ಸಮುದಾಯ ಭವನವನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಬೇಕು. ಸಮುದಾಯದವರು ಕಟ್ಟಡದ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಕೊಳಚೆ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಪ್ರಸಾದ ಅಬ್ಬಯ್ಯ ಮಾತನಾಡಿ, ಡಾ. ಬಾಬು ಜಗಜೀವನರಾಮ್ ಅವರು ಹಸಿರು ಕ್ರಾಂತಿ ಮೂಲಕ ರಾಷ್ಟ್ರದಲ್ಲಿ ಕ್ರಾಂತಿ ಉಂಟು ಮಾಡಿದ್ದರು ಎಂದು ಹೇಳಿದರು.
ಅಂಬೇಡ್ಕರ ಹಾಗೂ ಬಾಬು ಜಗಜೀವನರಾಮ್ ಅವರನ್ನು ಒಂದೇ ಜಾತಿಗೆ ಸೀಮಿತಗೊಳಿಸಬಾರದು. ಇಬ್ಬರೂ ಜಾತಿ ಮೀರಿ ಬೆಳೆದ ವ್ಯಕ್ತಿತ್ವಗಳಾಗಿದ್ದಾರೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಐಎಎಸ್, ಕೆಎಎಸ್ ಕೋಚಿಂಗ್ ಸೆಂಟರ್ ತೆರೆಯಲಾಗುವುದು. ಈಗಾಗಲೇ ಈ ಭಾಗದಲ್ಲಿ ಕಾಲೇಜುಗಳನ್ನು ಪ್ರಾರಂಭಿಸಲಾಗಿದೆ. ವ್ಯವಸ್ಥಿತ ರೀತಿಯಲ್ಲಿ ಭವನ ನಿರ್ವಹಣೆ ಆಗಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ಸ್ನೇಹಲ್ ಆರ್. ಮಾತನಾಡಿ, ಸಮುದಾಯದವರ ಬಹು ದಿನಗಳ ಬೇಡಿಕೆ ಈಡೇರುತ್ತಿದೆ. ಡಾ.ಬಾಬು ಜಗಜೀವನರಾಮ್ ಸಮುದಾಯ ಭವನವು ಮಾದರಿ ಕಟ್ಟಡವಾಗಿದೆ. ಭವನವನ್ನು ಅಚ್ಚ್ಚುಕಟ್ಟಾಗಿ ನಿಮಾಣ ಮಾಡಲಾಗಿದೆ. ವಿದ್ಯಾಭ್ಯಾಸ ಉತ್ತೇಜಿಸುವ, ಯುವಕರಿಗೆ ಪ್ರೋತ್ಸಾಹ ನೀಡುವ ಕಾರ್ಯಕ್ರಮಗಳು ಆಯೋಜನೆ ಆಗಬೇಕು ಎಂದರು.
ಮಾಜಿ ಸಚಿವ ಎ.ಎಂ.ಹಿಂಡಸಗೇರಿ, ಪಾಲಿಕೆ ಸದಸ್ಯರಾದ ನಜೀರ್ ಹೊನ್ಯಾಳ, ಶ್ರೀನಿವಾಸ ಬೆಳದಡ್ಡಿ, ಇಮ್ರಾನ್ ಯಲಿಗಾರ, ಪಾಲಿಕೆ ಮಾಜಿ ಸದಸ್ಯ ಗಣೇಶ ಟಗರಗುಂಟಿ ಹಾಗೂ ಇತರರಿದ್ದರು.