ಅರ್ಹ ಮತದಾರರು ಮತದಾರರ ಪಟ್ಟಿಗೆ ಸೇರ್ಪಡೆಯಾಗಿ

ಎಸ್‌ಐಆರ್ ಜಾಗೃತಿ ಜಾಥಾಗೆ ಚಾಲನೆ
ಎಸ್‌ಐಆರ್ ಜಾಗೃತಿ ಜಾಥಾಗೆ ಚಾಲನೆ
Published on
ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಧಾರವಾಡ ಕಚೇರಿ ಆವರಣದಲ್ಲಿ ಮತದಾರರಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಸದುದ್ದೇಶದಿಂದ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026 ಜಾಗೃತಿ ಜಾಥಾಗೆ ಜಿಲ್ಲಾ ಚುನಾವಣಾಽಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಮತ್ತು ಜಿಪಂ ಸಿಇಒ ಭುವನೇಶ ಪಾಟೀಲ ಅವರು ಸೋಮವಾರ ಬಲೂನ್‌ಗಳನ್ನು ಹಾರಿಸುವ ಮೂಲಕ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಸ್ನೇಹಲ್ ಆರ್., ದೋಷರಹಿತ ಹಾಗೂ ನಿಖರವಾದ ಮತದಾರರ ಪಟ್ಟಿಯ ಅವಶ್ಯಕತೆ ಇದೆ. ಪ್ರತಿಯೊಬ್ಬ ಅರ್ಹ ನಾಗರಿಕನೂ ಎನ್ಯುಮರೇಷನ್ ಫಾರ್ಮ್ ಅನ್ನು ತಪ್ಪದೇ ಭರ್ತಿ ಮಾಡಿ ಸಲ್ಲಿಸಬೇಕು ಎಂದರು.
ಜಿಪA ಸಿಇಒ ಭುವನೇಶ್ವರ ಪಾಟೀಲ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯ ಬೇರನ್ನು ಗಟ್ಟಿಗೊಳಿಸುವಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಪಾತ್ರ ಹಿರಿದಾಗಿದ್ದು, ರಾಜಕೀಯ ಪಕ್ಷಗಳು, ಯುವ ಮತದಾರರು, ಬೂತ್ ಮಟ್ಟದ ಅಽಕಾರಿಗಳು ಮತ್ತು ಏಜೆಂಟರು ಸೇರಿ ಸಾರ್ವಜನಿಕರು ಸಕ್ರಿಯವಾಗಿ ಕೈಜೋಡಿಸಬೇಕು ಎಂದು ವಿನಂತಿಸಿದರು.
ಜಾಥಾವು ಪಾಲಿಕೆ ಆವರಣದಿಂದ ಹೊರಟು ಮಹಾರಾಣಾ ಪ್ರತಾಪ ವೃತ್ತ ಹಾಗೂ ಸ್ವಾಮಿ ವಿವೇಕಾನಂದ ವೃತ್ತದ ಮೂಲಕ ಸಾಗಿ, ಕೆಸಿಸಿ ಬ್ಯಾಂಕ್ ಮಾರ್ಗವಾಗಿ ಕಲಾಭವನದ ಆವರಣ ತಲುಪಿ, ಸಂಪನ್ನಗೊಂಡಿತು.
ಜಿಪಂ ಯೋಜನಾ ನಿರ್ದೇಶಕ ಬಿ.ಎಸ್. ರಾಠೋಡ, ಮತದಾರರ ನೋಂದಣಾಽಕಾರಿ ಇಸ್ಮಾಯಿಲ್ ಸಾಹೇಬ್ ಶಿರಹಟ್ಟಿ, ಸಹಾಯಕ ಅಧಿಕಾರಿ ಉಮೇಶ ಸವಣೂರ, ಪಾಲಿಕೆಯ ವಲಯ ಕಚೇರಿ ಆಯುಕ್ತ ಅರವಿಂದ ಜಮಖಂಡಿ, ಶಂಕರ ಪಾಟೀಲ ಮತ್ತು ರಮೇಶ ನ್ಯೂಲ್ವಿ ಹಾಜರಿದ್ದರು. ವಿವಿಧ ಇಲಾಖೆಗಳ ಸಿಬ್ಬಂದಿ, ಚುನಾವಣಾ ಕಾರ್ಯಕರ್ತರು, ಯುವ ಮತದಾರರು ಹಾಗೂ ಸಾರ್ವಜನಿಕರು ಜಾಥಾದಲ್ಲಿ ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net